ಮುಸ್ಲಿಮರ ಕುರಿತು ನಿಂದನಾತ್ಮಕ ಹೇಳಿಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್

ಪ್ರತಾಪ್ ಸಿಂಹ
ಮೈಸೂರು : ಮುಸ್ಲಿಮರ ಕುರಿತು ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ಅವರು ನೀಡಿದ ದೂರಿನ ಆಧಾರದ ಮೇಲೆ ಮುಸ್ಲಿಂ ಸಮುದಾಯದ ಕುರಿತು ನಿಂದಿಸುವ ಹೇಳಿಕೆ ನೀಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಫೆ.20ರಂದು ಉದಯಗಿರಿ ವ್ಯಾಪ್ತಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡುವ ವೇಳೆ ಮುಸ್ಲಿಮರನ್ನು ನಿಂದಿಸುವ ರೀತಿಯಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Next Story