ಮೈಸೂರು ವಸ್ತು ಪ್ರದರ್ಶನ ಮೈದಾನದಲ್ಲಿ ಬಾಲಕಿಯ ಮೃತದೇಹ ಪತ್ತೆ: ಅತ್ಯಾಚಾರ ಶಂಕೆ

ಮೈಸೂರು: ಮೈಸೂರು ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೃತದೇಹವು ವಸ್ತು ಪ್ರದರ್ಶನ ಮೈದಾನದಲ್ಲಿ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
9ರಿಂದ 10 ವರ್ಷದೊಳಗಿನ ಮೃತ ಬಾಲಕಿಯನ್ನು ಕಲಬುರಗಿ ಮೂಲದವಳೆಂದು ಗುರುತಿಸಲಾಗಿದೆ. ಹೆತ್ತವರ ಜೊತೆ ಮೈಸೂರು ದಸರಾದಲ್ಲಿ ಬಲೂನ್ ಮಾರಲು ಮೈಸೂರಿಗೆ ಬಂದು ದೊಡ್ಡಕೆರೆ ಮೈದಾನದಲ್ಲಿ ವಾಸ್ತವ್ಯ ಹೂಡಿದ್ದಳು.
ಬುಧವಾರ ಚಾಮುಂಡಿ ಬೆಟ್ಟದಲ್ಲಿ ನಡೆದ ಶ್ರೀಚಾಮುಂಡೇಶ್ವರಿ ತೆಪ್ಪೋತ್ಸವ ಮುಗಿಸಿ ರಾತ್ರಿ ಬಂದು ತಮ್ಮ ಟೆಂಟ್ ನಲ್ಲಿ ತಾಯಿಯೊಂದಿಗೆ ಮಲಗಿದ್ದ ಬಾಲಕಿ ಮುಂಜಾನೆ ನೋಡುವಾಗ ಕಾಣೆಯಾಗಿದ್ದಳು. ಹುಡುಕಾಡಿದಾಗ ಟೆಂಟ್ ನಿಂದ 50 ಮೀಟರ್ ದೂರದಲ್ಲಿರುವ ಮಣ್ಣಿನ ರಾಶಿ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಶ್ವಾನ ದಳ ಆಗಮಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story





