Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಚಾಮರಾಜನಗರ | ಕಾಂಗ್ರೆಸ್‌ ಅಭ್ಯರ್ಥಿ...

ಚಾಮರಾಜನಗರ | ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್ ಬೋಸ್ ಅವರ ಗೆಲುವು ನನ್ನ ಶಕ್ತಿ ಹೆಚ್ಚಿಸುತ್ತದೆ : ಸಿಎಂ ಸಿದ್ದರಾಮಯ್ಯ

"ಕಾಂಗ್ರೆಸ್ ಪಕ್ಷದ ʼಗ್ಯಾರಂಟಿʼಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ"

ವಾರ್ತಾಭಾರತಿವಾರ್ತಾಭಾರತಿ1 April 2024 5:22 PM IST
share
ಚಾಮರಾಜನಗರ | ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್ ಬೋಸ್ ಅವರ ಗೆಲುವು ನನ್ನ ಶಕ್ತಿ ಹೆಚ್ಚಿಸುತ್ತದೆ : ಸಿಎಂ ಸಿದ್ದರಾಮಯ್ಯ

ವರುಣಾ : ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಅವರನ್ನು ಗೆಲ್ಲಿಸಿ, ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಇದು ನನ್ನನ್ನು ಇನ್ನಷ್ಟು ಗಟ್ಟಿಯಾಗಿಸಿ, ನನ್ನ ಶಕ್ತಿ ಹೆಚ್ಚಿಸುತ್ತದೆ. ಮೈಸೂರು-ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

"ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಾಲಾನುಭವಿಗಳಾಗಿದ್ದಾರೆ" ಎಂದರು.

ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರಾ? ದೇಶದ ಜನರಿಗಾಗಿ ಏನೂ ಕಾರ್ಯಕ್ರಮ ರೂಪಿಸದೆ, ಕೇವಲ ಅಚ್ಛೆ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ? ಡೈಲಾಗ್ ನಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ , ರಸಗೊಬ್ಬರ ಬೆಲೆ ಕಡಿಮೆ ಆಗತ್ತಾ? ಬರೀ ಬಾಯಲ್ಲಿ ಡೈಲಾಗ್ ಹೊಡೆದರೆ ಜನರ ಬದುಕಿನ ಸಂಕಷ್ಟ ಕಡಿಮೆ ಆಗುತ್ತದೆಯೇ?" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರೀ 56 ಇಂಚಿನ ಖಾಲಿ ಎದೆ ಇದ್ದರೆ ಸಾಲದು. ಅದರೊಳಗೆ ಮಾತೃ ಹೃದಯ ಇರಬೇಕು. ಇಲ್ಲದಿದ್ದರೆ ಹೀಗೇ ಆಗೋದು. ಉದ್ಯೋಗ ಸೃಷ್ಟಿ‌ ಆಗೋದಿಲ್ಲ. ರೈತರ ಆದಾಯವೂ ದುಪ್ಪಟ್ಟಾಗುವುದಿಲ್ಲ ಎಂದು ಟೀಕಿಸಿದರು.

ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದವರು ದೇವೇಗೌಡರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ದೇಶಬಿಟ್ಟು ಹೋಗುತ್ತೇನೆ ಎಂದವರೂ ಇದೇ ದೇವೇಗೌಡರು. ಈಗ ತಮಗೂ ನರೇಂದ್ರ ಮೋದಿಯವರಿಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ಯಾಕಿಷ್ಟು ಈ ನಾಟಕ ದೇವೇಗೌಡರೇ, ನೀವು ಹೇಳಿದ್ದನ್ನು ನೆನಪಿಸಿದರೆ ಅದು ಗರ್ವ ಹೇಗಾಗುತ್ತದೆ ಎಂದು ಪ್ರಶ್ನಿಸಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವ ಜಯಂತಿ ದಿನ. ಎರಡನೇ ಬಾರಿ ಸಿಎಂ ಆಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು. ಬಸವಣ್ಣನವರು ಲಿಂಗಾಯತ ಧರ್ಮ‌ ಸ್ಥಾಪಿಸಿ ಮನುಷ್ಯ ಧರ್ಮದ ಏಳಿಗೆಗೆ ಮುಂದಾದರು. ಬಸವಾದಿ ಶರಣರು ಒಂದು ಜಾತಿ-ಧರ್ಮಕ್ಕೆ ಸೇರಿದವರಲ್ಲ. ನಾವು ಬಸವಾದಿ ಶರಣರ ಆಶಯದಂತೆ ಕಾಯಕ ಮತ್ತು ದಾಸೋಹ ಮೌಲ್ಯದಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಕೃತಜ್ಞತೆಯ ಮಾತುಗಳನ್ನಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ‌.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X