ಸಿಎಂ ಬದಲಾವಣೆ ವಿಚಾರ | ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ ಮೇಲೆ ಆ ವಿಚಾರ ಮುಗಿದಂತೆ : ಜಿ.ಪರಮೇಶ್ವರ್

ಮೈಸೂರು : "ಮುಖ್ಯಮಂತ್ರಿಯಾಗಿ 5 ವರ್ಷ ನಾನೇ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದಂತೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಂದಿಬೆಟ್ಟದ ಭೋಗನಂದೀಶ್ವರ ದೇವಸ್ಥಾನದ ಬಳಿ ಐದು ವರ್ಷ ನಾನೇ ಇರುತ್ತೇನೆ, ಒಳ್ಳೆಯ ಆಡಳಿತಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ನಿನ್ನೆ ದೆಹಲಿಯಲ್ಲಿ ಮತ್ತೆ ಆ ವಿಚಾರ ಪ್ರಸ್ತಾಪಿಸಿ ನಾನೇ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಈ ವಿಚಾರ ಇಲ್ಲಿಗೆ ಮುಕ್ತಾಯವಾದಂತೆ ಎಂದು ಹೇಳಿದರು.
ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಒಪ್ಪಂದ ಆಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ನಮ್ಮಲ್ಲಿ ಹೈಕಮಾಂಡ್ ಎಂಬುದು ಇದೆ. ಏನೇ ತೀರ್ಮಾನ ಮಾಡಬೇಕಿರುವುದು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದರು.





