Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ನಾನು ದಲಿತ ವಿರೋಧಿಯಲ್ಲ, ಅಧಿವೇಶನದಲ್ಲಿನ...

ನಾನು ದಲಿತ ವಿರೋಧಿಯಲ್ಲ, ಅಧಿವೇಶನದಲ್ಲಿನ ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ : ಜಿ.ಟಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ26 Aug 2025 5:10 PM IST
share
ನಾನು ದಲಿತ ವಿರೋಧಿಯಲ್ಲ, ಅಧಿವೇಶನದಲ್ಲಿನ ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ : ಜಿ.ಟಿ.ದೇವೇಗೌಡ

ಮೈಸೂರು, ಆ.26 : ನಾನು ಎಂದೂ ಮೀಸಲಾತಿ, ದಲಿತರ ವಿರೋಧಿಯಲ್ಲ. ವಿಧಾನಸಭಾ ಅಧಿವೇಶನದಲ್ಲಿ ಸಹಕಾರ ಸಂಘದ ಬಿಲ್‌ ಮಂಡನೆ ವೇಳೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ದಲಿತರು ಪ್ರತಿಭಟನೆ ಮಾಡುತ್ತಿದ್ದಾರೆ. ನನ್ನ ಹೇಳಿಕೆಯಿಂದ ದಲಿತ ಸಮುದಾಯದವರ ಮನಸ್ಸಿಗೆ ನೋವಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಸರಕಾರ ಹಸ್ತಕ್ಷೇಪ ಮಾಡಬಾರದು ಎಂದು ಜವಹಾರ್ ಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ ಅವರೇ ಹೇಳಿದ್ದಾರೆ. ಇಂದು ಹಲವಾರು ಸಹಕಾರ ಸಂಘಗಳು ಮುಚ್ಚಿಹೋಗಿವೆ. ಕೆಲವು ಸಂಘಗಳಲ್ಲಿ ವೇತನ ನೀಡಲು ಆಗುತ್ತಿಲ್ಲ. ಹಾಗಾಗಿ ಸರಕಾರದ ಪಾಲುಗಾರಿಕೆ ಇರುವ ಸಹಕಾರ ಸಂಘಗಳಿಗೆ ಮಾತ್ರ ಮೀಸಲಾತಿ ಅನ್ವಯ ಮಾಡಿ ಎಂಬ ಉದ್ದೇಶದಿಂದ ನಾನು ಹೇಳಿದ್ದೇನೆಯೇ ಹೊರತು ಬೇರೆ ಉದ್ದೇಶದಿಂದ ನಾನು ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ನೀಡಿದರೆ ಸ್ವಾಗತ ಮಾಡುತ್ತೇನೆ. ಎಸ್ಸಿ, ಎಸ್ಟಿ ಗಳಿಗೆ ಮೂರು ಸ್ಥಾನಕ್ಕೆ ನಾಮ ನಿರ್ದೇಶನ ಮಾಡುವ ಜೊತಗೆ ಹಿಂದುಳಿದವರಿಗೂ ಮೀಸಲಾತಿ ನೀಡಿ ನಾಲ್ಕು ನಿರ್ದೇಶನ ಮಾಡಿ ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದರು.

ಅಧಿವೇಶನದಲ್ಲಿ ನಾನು ಮೀಸಲಾತಿ ವಿರೋಧಿಸಿ ಮಾತನಾಡಲಿಲ್ಲ. ಸಹಕಾರ ಸಂಘದಲ್ಲಿನ ಬದಲಾವಣೆ ಸೇರಿದಂತೆ ಹಲವು ನಿರ್ಣಯ ಕೈಗೊಳ್ಳಲು ಲಕ್ಷ್ಮಣ್ ಸವಧಿ ಅವರು ಸಹಕಾರ ಸಚಿವರಾಗಿದ್ದ ವೇಳೆ ನಾಲ್ಕು ಜನರ ಕಮಿಟಿ ರಚಿಸಲಾಗಿದೆ. ಆ ಕಮಿಟಿ ವರದಿ ಪಡೆಯದೇ ಬಿಲ್ ಮಂಡನೆ ಮಾಡಿದ್ದರಿಂದ ನಾನು ಮಾತನಾಡಿದ್ದೇನೆ. ಆದರೆ ಇದನ್ನು ತಪ್ಪಾಗಿ ಅರ್ಥೈಸಿಕೊಂಡು ನನ್ನ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ನಾನು ಸಂವಿಧಾನ ವಿರೋಧಿಯಲ್ಲ, ನನ್ನ ಹೇಳಿಕೆ ಖಂಡಿಸಿ ಹಲವಾರು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ನನ್ನ ವಿರುದ್ಧ ಅಸಂವಿಧಾನಿಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನನ್ನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದಿದೆ. ಅವರು ದೂರು ಕೊಟ್ಟರೂ ನಾನು ಅವರ ವಿರುದ್ಧ ಮಾತನಾಡುವುದಿಲ್ಲ ಎಂದು ಹೇಳಿದರು.

ನಾನು ದಲಿತರ ಒಡನಾಟದಲ್ಲೇ ಬೆಳೆದವನು, ನಮ್ಮ ಊರಿನ ಪಕ್ಕದ ಹಳ್ಳಿಯಲ್ಲಿ ದಲಿತರಿಗೆ ಭೂಮಿ ಕೊಡಿಸಲು ನಾನು ಮತ್ತು ತಂದೆ ಹೋರಾಟ ಮಾಡಿದ್ದೇವೆ. ದಲಿತರ ಜಗಲಿಯಲ್ಲಿ ಮಲಗಿ ಬೆಳೆದಿದ್ದೇನೆ. ನಾನು ದಲಿತರ ವಿರೋಧಿಯಲ್ಲ, ಯಾವ ಸಮುದಾಯದ ವಿರೋಧಿಯೂ ಅಲ್ಲ ಎಂದು ಹೇಳಿದರು.

ನ್ಯಾ.ನಾಗಮೋಹನ್ ದಾಸ್ ಅವರು ಸಂವಿಧಾನ ಓದು ಪುಸ್ತಕವನ್ನು ಬೆಂಗಳೂರಿನಲ್ಲಿ ನನ್ನ ನೇತೃತ್ವದಲ್ಲಿ ಮಾಡಿಸಿದ್ದಾರೆ. ಕಡಕೋಳ ನಾಗರಾಜ್ ಎಂಬ ದಲಿತ ಹುಡುಗನನ್ನು ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷನನ್ನಾಗಿ ಮಾಡಿದ್ದೇನೆ. ಮೈಸೂರು ನಗರದ ಸೌಹಾರ್ಧ ಸಹಕಾರ ಮಹಾಮಂಡಲದ ಅಧ್ಯಕ್ಷರನ್ನಾಗಿ ಬನ್ನೂರಿನ ನಂಜುಂಡಸ್ವಾಮಿ ಅವರನ್ನು ಮಾಡಿದ್ದೇನೆ. ನಾನು ಎಂದೂ ದಲಿತ ವಿರೋಧಿಯಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರುಗಳಾದ ಬೆಳವಾಡಿ ಶಿವಕುಮಾರ್ ಸ್ವಾಮಿ ಸೇರಿದಂತೆ ಚಾಮುಂಡೇಶ್ವರಿ ಕ್ಷೇತ್ರದ ಹಲವು ದಲಿತ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X