Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಜಿ.ಟಿ.ದೇವೇಗೌಡರಿಗೆ ಅರಿವಿನ ಕೊರತೆ ಇದೆ:...

ಜಿ.ಟಿ.ದೇವೇಗೌಡರಿಗೆ ಅರಿವಿನ ಕೊರತೆ ಇದೆ: ಕೆಪಿಸಿಸಿ ವಕ್ತಾರ ಎಚ್‌.ಎ.ವೆಂಕಟೇಶ್‌

ವಾರ್ತಾಭಾರತಿವಾರ್ತಾಭಾರತಿ5 Jan 2024 11:43 PM IST
share
ಜಿ.ಟಿ.ದೇವೇಗೌಡರಿಗೆ ಅರಿವಿನ ಕೊರತೆ ಇದೆ: ಕೆಪಿಸಿಸಿ ವಕ್ತಾರ ಎಚ್‌.ಎ.ವೆಂಕಟೇಶ್‌

ಮೈಸೂರು: ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ಆಗಲು ಅರ್ಹತೆ ಇಲ್ಲ ಎಂಬ ಶಾಸಕ ಜಿ.ಟಿ. ದೇವೇಗೌಡರ ಹೇಳಿಕೆಗೆ ಕೆಪಿಸಿಸಿ ವಕ್ತಾರ ಎಚ್‌.ಎ ವೆಂಕಟೇಶ್‌ ಪ್ರತಿಕ್ರಿಯಿಸಿ, ʼಮಲ್ಲಿಕಾರ್ಜುನ ಖರ್ಗೆ ಅವರಿಗ ಪ್ರಧಾನಿ ಅಲ್ಲ, ರಾಷ್ಟ್ರಪತಿಗಳಾಗುವ ಅರ್ಹತೆಯೂ ಇದೆ. ಜಿ.ಟಿ. ದೇವೇಗೌಡರಿಗೆ ಅರಿವಿನ ಕೊರತೆ ಇದೆʼ ಎಂದು ತಿರುಗೇಟು ನೀಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರಿಗೆ ಬಡತನ, ಶೋಷಣೆ ಅನ್ನೋದು ಗೊತ್ತಿಲ್ಲ. ಇವರು ಉನ್ನತ ಶಿಕ್ಷಣ ಸಚಿವರಾಗಿದ್ದವರು, ಇದು ಪ್ರಜಾಪ್ರಭುತ್ವದ ಸೌಂದರ್ಯ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಎಲ್ಲಾ ರೀತಿಯ ಅವಕಾಶಗಳಿವೆ ಎಂದು ಹೇಳಿದರು.

ಮೈಸೂರು ಅಭಿವೃದ್ಧಿಯಲ್ಲಿ ಸಿದ್ದರಾಮಯ್ಯ ಅವರ ಕೊಡುಗೆ ಏನೂ ಇಲ್ಲ ಎಂಬ ಜಿಟಿಡಿ ಹೇಳಿಕೆಗೆ ನಾನು ಬಹಿರಂಗ ಸವಾಲು ಹಾಕುತ್ತೇನೆ. ಅವರು ಬರಲಿ ಅವರ ಜೊತೆ ಬಿಜೆಪಿಯವರು ಬರಲಿ ನಾವು ಉತ್ತರ ಕೊಡುತ್ತೇವೆ ಎಂದು ಹೇಳಿದರು.

ಜಯದೇವ ಆಸ್ಪತ್ರೆ, ಮಹಾರಾಣಿ ಕಾಲೇಜು ನಿರ್ಮಾಣ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಆಸ್ಪತ್ರೆ ಕಟ್ಟಡಗಳೇ ಸಿದ್ದರಾಮಯ್ಯ ಅಭಿವೃದ್ಧಿಯ ಸಾಧನೆಗೆ ಸಾಕ್ಷಿಯಾಗಿವೆ. ನಮ್ಮ ಜೊತೆ ಚರ್ಚೆಗೆ ಬರಲಿ, ನಾವು ಸಿದ್ದರಾಮಯ್ಯ ಅವರು ಏನು ಮಾಡಿದ್ದಾರೆ ಎಂದು ಹೇಳುತ್ತೇವೆ ಎಂದು ತಿಳಿಸಿದರು.

ಬಿಜೆಪಿ ರಾಜಕೀಯ ಪ್ರೇರಿತ ಹೇಳಿಕೆ: ನಾನು ಕರಸೇವಕ, ನನ್ನನ್ನೂ ಬಂಧಿಸಿ ಎಂಬ ಪ್ರತಿಭಟನಾ ಅಭಿಯಾನ ನಡೆಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಕರಸೇವಕ ಶ್ರೀಕಾಂತ್‌ ಪೂಜಾರಿ ಬಂಧನವಾಗಿದೆ. ಹಾದಿ, ಬೀದಿಯಲ್ಲಿ ಹೋಗುವವರನ್ನು ಬಂಧಿಸಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.

ನಾವೇನು ರಾಮನ ಭಕ್ತರಲ್ಲವೇ

ಬರೀ ರಾಮ ರಾಮ ಎಂದರೆ ಹೊಟ್ಟೆ ತುಂಬುವುದಿಲ್ಲ. ಸರ್ಕಾರ ಮಾಡಿದ್ದೆಲ್ಲವೂ ತಪ್ಪು ತಪ್ಪು ಎನ್ನುವುದು ಏಕೆ? ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಾಗಾಗಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಕರಣಗಳ ಸಂಬಂಧ ಸರ್ಕಾರ ಇದೀಗ ಕ್ರಮ ಕೈಗೊಂಡಿದೆ ಎಂದರು.

ಇದೇ ಹಿನ್ನೆಲೆಯಲ್ಲಿ ಶ್ರೀಕಾಂತ್‌ ಪೂಜಾರಿಯ ಬಂಧನವಾಗಿದೆ. ಆದರೆ ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X