ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ: ಡಾ.ಯತೀಂದ್ರ ಸಿದ್ಧರಾಮಯ್ಯ

ಯತೀಂದ್ರ ಸಿದ್ದರಾಮಯ್ಯ
ಮೈಸೂರು : ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ. ಆದರೆ ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದು ಹೇಳಿದರು.
ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿ, ಯಾವ ಕ್ರಾಂತಿಯೂ ಇಲ್ಲ. 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.
ನಾಯಕತ್ವ ವಿಚಾರವಾಗಿ ಹೇಳಿದ ಮಾತಿಗೆ ಈಗಲೂ ಬದ್ದ. ನನ್ನ ಹೇಳಿಕೆಗೆ ನಾನು ಸ್ಪಷ್ಟೀಕರಣ ಕೂಡ ಕೊಟ್ಟಿದ್ದೇನೆ. ಪಕ್ಷ ನನಗೆ ನೋಟಿಸ್ ಕೊಟ್ಟರೆ ಉತ್ತರ ಕೊಡುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
Next Story





