Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮಹಿಳೆಯರು ಮೂಡನಂಬಿಕೆಗೆ ಒಳಗಾಗದೆ...

ಮಹಿಳೆಯರು ಮೂಡನಂಬಿಕೆಗೆ ಒಳಗಾಗದೆ ವೈಚಾರಿಕ ಮನೋಭಾವ ಬೆಳಿಸಿಕೊಳ್ಳಬೇಕು: ಸಚಿವ ಡಾ.ಎಚ್ ಸಿ. ಮಹದೇವಪ್ಪ

ಮಹಿಳಾ ಮತ್ತು ಮಕ್ಕಳ ದಸರಾ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Oct 2024 7:45 PM IST
share
ಮಹಿಳೆಯರು ಮೂಡನಂಬಿಕೆಗೆ ಒಳಗಾಗದೆ ವೈಚಾರಿಕ ಮನೋಭಾವ ಬೆಳಿಸಿಕೊಳ್ಳಬೇಕು: ಸಚಿವ ಡಾ.ಎಚ್ ಸಿ. ಮಹದೇವಪ್ಪ

ಮೈಸೂರು: ಜಗತ್ತಿನಲ್ಲಿ ಅತೀ ಹೆಚ್ಚು ಮೂಢನಂಬಿಕೆಗೆ ಒಳಗಾಗುತ್ತಿರುವವರೇ ಹೆಣ್ಣು ಮಕ್ಕಳು. ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮಹಿಳೆಯರಿಗೆ ಸಲಹೆ ನೀಡಿದರು.

ನಾಡಹಬ್ಬ ದಸರಾ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ನಗರದ ಜೆ.ಕೆ ಗ್ರೌಂಡ್ಸ್ ನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ, ಮಹಿಳಾ ದಸರಾವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿ ಮಹಿಳಾ ಹಬ್ಬಕ್ಕೆ ಕಳೆ ತಂದಿರುವುದು ಸಂತಸವಾಗಿದೆ. ಮಹಿಳೆಯರು ಯಾರ ಮೇಲೂ ಅವಲಂಬಿತರಾಗದೆ ಸರ್ಕಾರದ ಯೋಜನೆಗಳು ಹಾಗೂ ಕಡ್ಡಾಯ ಶಿಕ್ಷಣದ ಮೂಲಕ ಸ್ವಾವಲಂಬಿಯಾಗಿ ಬದುಕು ನಡೆಸುವಲ್ಲಿ ಸಫಲರಾಗಬೇಕು ಎಂದರು.

ಸ್ವಾವಲಂಬನೆ ಜೀವನ ನಡೆಸುವ ಅನೇಕ ಮಹಿಳೆಯರು ಇಂದು ಕರಕುಶಲ ಪ್ರದರ್ಶನ ಮತ್ತು ಅಳಿವಿನ ಅಂಚಿನಲ್ಲಿರುವ ಗುಡಿ ಕೈಗಾರಿಕೆಗಳ ಉಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಅಂತಹವರ ಜೀವನ ಸುಖಕರವಾಗಿ ಸಾಗಬೇಕು. ಮೂಢನಂಬಿಕೆಯನ್ನು ಅನುಸರಿಸುವಲ್ಲಿ ಮಹಿಳೆಯರೇ ಹೆಚ್ಚಾಗಿರುವುದರಿಂದ ಇಂದು ಮೂಢನಂಬಿಕೆಯ ಹೆಸರಿನಲ್ಲಿ ಎಷ್ಟೋ ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗುತ್ತಿದ್ದಾರೆ. ಮೂಢನಂಬಿಕೆಯಿಂದ ಹೊರಬರಲು ಮೊದಲು ಸುಶಿಕ್ಷಿತರಾಗಿ ವೈಜ್ಞಾನಿಕವಾಗಿ ವಿಚಾರಣೆ ಚಿಂತನೆ ನಡೆಸಬೇಕು ಎಂದು ತಿಳಿಸಿದರು.

ಮೂಢನಂಬಿಕೆಗೆ ಹೆಣ್ಣುಮಕ್ಕಳು ಬಲಿಯಾಗಬಾರದೆಂದರೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಹಿಂದೂ ಬಿಲ್‌ಕೋಡ್ ಅನ್ನು ತಿಳಿದುಕೊಳ್ಳಬೇಕು. ಮಹಿಳೆಯರು ಮಾಟ-ಮಂತ್ರ, ಯಂತ್ರ-ತಂತ್ರ, ಶಾಸ್ತ್ರಗಳ ಮೊರೆ ಹೋಗುವುದನ್ನು ಬಿಟ್ಟು, ಸಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಮುಂದೆ ಬಂದು ಸ್ವಾವಲಂಬನೆ ಜೀವನ ನಡೆಸಬೇಕು ಎಂದರು.

ಮಹಿಳೆಯರ ಶಿಕ್ಷಣಕ್ಕಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ. 17ನೇ ಶತಮಾನದಲ್ಲಿ ಬಸವಣ್ಣನವರು ಲಿಂಗ ತಾರತಮ್ಯದ ವಿರುದ್ಧ ಹೋರಾಡಿ ಸ್ವಂತ ಮನೆ ಬಿಟ್ಟು ಹೊರ ನಡೆದ ರೀತಿಯಾಗಿ ಮಹಿಳೆಯರ ಸಮಾನತೆಗಾಗಿ ತಮ್ಮ ಕಾನೂನು ಮಂತ್ರಿ ಪದವಿಯನ್ನೇ ತ್ಯಾಗ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಈ ಸಮಯದಲ್ಲಿ ನೆನೆಯಬೇಕು ಎಂದರು.

ಈ ಸಂದರ್ಭದಲ್ಲಿ ವಸ್ತು ಪ್ರದರ್ಶನ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಮಹಿಳೆಯರಿಗೆ ಶುಭಾಶಯ ತಿಳಿಸಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಅವರು ಮಾತನಾಡಿ ಕರ್ನಾಟಕದಲ್ಲಿ ಮಹಿಳೆಯರಿಗೆ ವಿಶೇಷವಾದ ಶಕ್ತಿಯಿದ್ದು, ಈ ಬಾರಿ ಸುಭದ್ರಾ ಸರ್ಕಾರದಲ್ಲಿ ನವರಾತ್ರಿಯನ್ನು ಆಚರಿಸುತ್ತಿದ್ದೇವೆ. ಮಹಿಳೆ ಮನಸ್ಸು ಮಾಡಿದರೆ ಏನನ್ನಾದರು ಸಾಧಿಸಬಹುದು. ಇಂದು ನಾನಾ ಕ್ಷೇತ್ರದಲ್ಲಿ ಮಹಿಳಾ ಮಣಿಗಳು ಕಾರ್ಯ ನಿರ್ವಹಿಸುತ್ತಿರುವುದನ್ನು ನೋಡಬಹುದು. ನಮ್ಮ ಸರ್ಕಾರ ಮಹಿಳೆಯರ ಏಳಿಗೆಯನ್ನು ಬಯಸುವ ಸರ್ಕಾರವಾಗಿದ್ದು, ಈ ದೃಷ್ಟಿಯಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿರುವ ಮೂಲಕ ಮಹಿಳೆಯರ ಸ್ವಾವಲಂಬನೆ ಜೀವನಕ್ಕೆ ದಾರಿ ತೋರಿಸಿದೆ ಎಂದರು.

ಇoದು ನಾರಿಶಕ್ತಿ, ಗಂಡಿಗಿಂತಲೂ ಒಂದು ಹೆಜ್ಜೆ ಮುಂದೆ ಇದ್ದಾರೆ. ಮೊದಲು ಮನುಷ್ಯ ನಂತರ ಧರ್ಮ. ಧರ್ಮದ ಹೆಸರಿನಲ್ಲಿ ಮಹಿಳೆಯರು ಮೂಢನಂಬಿಕೆಗೆ ಒಳಗಾಗಬಾರದು. ಕುಟುಂಬ ಮತ್ತು ಸಮಾಜವನ್ನು ಸರಿ ದಾರಿಯಲ್ಲಿ ಸಾಮಾಜಿಕ ಅಂಶಗಳಾದ ಆರ್ಥಿಕ, ಶೈಕ್ಷಣಿಕ ಆರೋಗ್ಯ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದು ಸರ್ವತೋಮುಖ ಅಭಿವೃದ್ಧಿಯತ್ತ ಮುಖ ಮಾಡಬೇಕು ಎಂದರು.

ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರು ಮಾತನಾಡಿ, ಮೌಡ್ಯ ಅಂಧಕಾರವನ್ನು ತೊಲಗಿಸುವಲ್ಲಿ ಮಹಿಳೆಯರು ಬದಲಾಗಬೇಕು. ಅಂಬೇಡ್ಕರ್ ಅವರ ಆಶಯದಂತೆ ಮಹಿಳೆಯರು ಶಿಕ್ಷಣ, ಸಂಘಟನೆ ಹೋರಾಟದ ಮಂತ್ರಗಳನ್ನು ಮೈ ಗೂಡಿಸಿಕೊಳ್ಳಬೇಕು. ಮಹಿಳೆಯರಿಗೆ ಶಿಕ್ಷಣದ ಅವಶ್ಯಕತೆ ಇದೆ. ನಮ್ಮ ಹಕ್ಕುಗಳನ್ನು ನಾವು ಪಡೆದು ಕೊಳ್ಳಬೇಕು. ಹೆಣ್ಣಿನ ಸ್ವರೂಪವೇ ದಸರಾ. ಹೆಣ್ಣು ಅಂದರೆ ಶಕ್ತಿ, ಶಾಂತಿ, ನೆಮ್ಮದಿ, ಸಹನಾ ಶೀಲತೆ, ಸಮೃದ್ಧಿಯ ಅಪ್ರತಿರೂಪ ಎಂದರು.

ಈ ಬಾರಿ ವಿಶೇಷವಾಗಿ ಮೇಳದಲ್ಲಿ ಚಾಮುಂಡೇಶ್ವರಿ ಒಕ್ಕೂಟ, ಸಿರಿಧಾನ್ಯ ಮಾರಾಟ ಕೇಂದ್ರ, ಕೊಲ್ಲಾಪುರದಮ್ಮ ಸ್ತ್ರೀಶಕ್ತಿ ಸ್ವಹಾಯ ಸಂಘ, ಅನ್ನಪೂರ್ಣೇಶ್ವರಿ ಸ್ತ್ರೀಶಕ್ತಿ ಕೇಂದ್ರ ಸೇರಿದಂತೆ 30 ಕ್ಕೂ ಹೆಚ್ಚು ಮಳಿಗೆಗಳು ತಲೆ ಎತ್ತಿದ್ದವು. ಸೀರೆ ಮಾರಾಟ, ಮಹಿಳಾ ಆಭರಣಗಳು, ಚುರುಮುರಿ, ತಿಂಡಿತಿನಿಸುಗಳು, ಬಟ್ಟೆ, ಹೊಸ ಪ್ರಾಡೆಕ್ಟ್, ಪೇಂಟಿoಗ್ಸ್ ಸೇರಿದಂತೆ ಸ್ತ್ರೀ ಸ್ವಾವಲಂಬನೆ ಸಾರುವ ಮಳಿಗೆಗಳನ್ನು ಸ್ಥಾಪಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಾಸಮಿತಿಯ ವಿಶೇಷಧಿಕಾರಿಗಳಾದ ಪ್ರಿಯದರ್ಶಿನಿ, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸಮಿತಿಯ ಸದಸ್ಯರು ಸೇರಿದಂತೆ ಅನೇಕ ಮಹಿಳೆಯರು ಉಪಸ್ಥಿತರಿದ್ದರು.

ಮಕ್ಕಳ ದಸರಾ ಕಲಾಥಾನ್ ಗೆ ಚಾಲನೆ

ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಪ್ರಯುಕ್ತ ಶುಕ್ರವಾರ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ, ಮಕ್ಕಳ ದಸರಾ ಕಲಾಥಾನ್ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.

ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ದೇವರಾಜ ಅರಸು ರಸ್ತೆ ಮಾರ್ಗವಾಗಿ ಮಹಾರಾಜ ಸರ್ಕಾರಿ ಪ್ರೌಢಶಾಲೆವರೆಗೆ ಮಕ್ಕಳಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 1 ಸಾವಿರಕ್ಕೂ ಹೆಚ್ಚು ಶಾಲಾ ಮಕ್ಕಳು ವಿವಿಧ ಬಗೆಯ ಸಾಂಸ್ಕೃತಿಕ, ಜಾನಪದ, ಮಹನೀಯರ ವೇಷ ಭೂಷಣ ತೊಟ್ಟು ಗಾಂಭೀರ್ಯದಿಂದ ಹೆಜ್ಜೆ ಹಾಕಿದರು.

ವಿಶೇಷವಾಗಿ ರಾಜಕುಮಾರ ವೇಷ ಭೂಷಣ, ಚಾಮುಂಡಿ, ದುರ್ಗಿ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದರು. ಹುಲಿ ಕುಣಿತ, ಗೊಂಬೆ ಕುಣಿತ, ಯಕ್ಷಗಾನ, ಜನಪದ ನೃತ್ಯ, ಕಂಸಾಳೆ, ಡೊಳ್ಳು ಕುಣಿತ,ಗಾಯನ ಹೀಗೆ ನಾನಾ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾದರು. ಶಾಲಾ ಮಕ್ಕಳು ನಾಡಿನ ಕಲೆ ಸಂಸ್ಕೃತಿ ಸಾರುವ ವೇಶ ಭೂಷಣಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆ ಶಿವರಾಂಪುರ, ಪ್ರೌಢಶಾಲೆ ಕೆ.ಆರ್. ನಗರ, ಸೇಂಟ್ ಜೋಸೆಫ್ ಹುಣಸೂರು, ಸರ್ಕಾರಿ ಪ್ರೌಢಶಾಲೆ ಮೈಸೂರು ಉತ್ತರ ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಿಂದ ಸ್ವರ್ಧೆಯಲ್ಲಿ ಭಾಗವಹಿಸಲು ಮಕ್ಕಳು ಆಗಮಿಸಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X