Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ನಿಜವಾದ ಸರ್ವಾಧಿಕಾರಿ ಇಂದಿರಾ ಗಾಂಧಿ:...

ನಿಜವಾದ ಸರ್ವಾಧಿಕಾರಿ ಇಂದಿರಾ ಗಾಂಧಿ: ಸಿ.ಟಿ‌. ರವಿ

ವಾರ್ತಾಭಾರತಿವಾರ್ತಾಭಾರತಿ28 Nov 2025 11:35 PM IST
share
ನಿಜವಾದ ಸರ್ವಾಧಿಕಾರಿ ಇಂದಿರಾ ಗಾಂಧಿ: ಸಿ.ಟಿ‌. ರವಿ

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಟೀಕಿಸುತ್ತಾರೆ. ಆದರೆ, ನಿಜವಾದ ಸರ್ವಾಧಿಕಾರಿ ಇಂದಿರಾ ಗಾಂಧಿ. ರಾಹುಲ್ ಗಾಂಧಿ ಡಿಎನ್‌ಎನಲ್ಲಿ ಸರ್ವಾಧಿಕಾರ ಇದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಬಿಜೆಪಿ ಮೈಸೂರು ಮಹಾನಗರ ಮತ್ತು ಗ್ರಾಮಾಂತರ ಜಿಲ್ಲೆ ವತಿಯಿಂದ ನಜರಬಾದ್ ವಿ.ಕೆ. ಫಂಕ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗೃತಿಗಾಗಿ ಭೀಮನೆಡೆ ಅಭಿಯಾನ ಸಂವಿಧಾನ ದುರ್ಬಳಕೆಯ ಕಾಂಗ್ರೆಸ್ ಇತಿಹಾಸ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದು ಇಂದಿರಾ ಗಾಂಧಿ. ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ ಎಂದು ಬಾಬು ಜಗಜೀವನ್ ರಾಮ್ ಪಕ್ಷ ಸ್ಥಾಪಿಸಿದರು. ರಾಜ್ಯದ ಎಲ್ಲ ಸರ್ಕಾರಗಳನ್ನು ಉರುಳಿಸಿದರು. ನ್ಯಾಯಾಂಗದ ಪಾವಿತ್ರ‍್ಯಕ್ಕೆ ಧಕ್ಕೆ ತಂದರು. ಸಂವಿಧಾನಕ್ಕೆ ಹೆಚ್ಚಿನ ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ ಸರ್ಕಾರವೇ ಎಂದು ಹೇಳಿದರು.

ಸಂವಿಧಾನ ಮತ್ತು ಬಾಬಾ ಸಾಹೇಬ ಬಿ.ಆರ್. ಅಂಬೇಡ್ಕರ್ ಬಗೆಗಿನ ಸತ್ಯ ಏನು ಮತ್ತು ಮಿಥ್ಯೆ ಏನೆಂಬುದನ್ನು ತಿಳಿಸಲು ಅಭಿಯಾನ ಹಮ್ಮಿಕೊಂಡಿದ್ದೇವೆ. ಸಂವಿಧಾನದ ಮೇಲೆ ಮಾಡಬಾರದ ಅಪಚಾರ ಮಾಡಿದ ಪಕ್ಷದವರು ಈಗ ಸಂವಿಧಾನದ ಪ್ರತಿ ಹಿಡಿದುಕೊಂಡು ಓಡಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

1950ರಲ್ಲಿ ಸಂವಿಧಾನ ಜಾರಿಗೆ ಬಂದಿತು. ಅಲ್ಲಿಂದ 2015ರ ತನಕ ಸಂವಿಧಾನ ಗೌರವಿಸುವ ದಿನವಾಗಿ ಆಚರಿಸುತ್ತಿರಲಿಲ್ಲ. ಕಾನೂನು ದಿನವನ್ನಾಗಿ ಆಚರಿಸುತ್ತಿದ್ದರು. ಮೋದಿಯವರು ಸಂವಿಧಾನ ಗೌರವ್ ದಿವಸ್ ಆಚರಣೆಗೆ ಕರೆಕೊಟ್ಟರು ಎಂದು ತಿಳಿಸಿದರು.

ಬಿಜೆಪಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ರಘು ಕೌಟಿಲ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಟಿ.ಎಸ್. ಶ್ರೀವತ್ಸ, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ನಗರ ಅಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಕೆ.ಸುಬ್ಬಣ್ಣ, ಮಾಜಿ ಸಂಸದ ಪ್ರತಾಪಸಿಂಹ, ಮಾಜಿ ಶಾಸಕ ಹರ್ಷವರ್ಧನ, ಮಾಜಿ ಮೇಯರ್ ಶಿವಕುಮಾರ್, ಮುಖಂಡರಾದ ವಿ ಶೈಲೇಂದ್ರ, ಫಣೀಂದ್ರ, ಪ್ರಫುಲ್ಲ ಮಲ್ಲಾಡಿ, ಎಸ್.ಮಹದೇವಯ್ಯ, ಸೋಮಶೇಖರ್, ಸಂದೇಶ್ ಸ್ವಾಮಿ, ರೇವಣ್ಣ, ಮಂಗಳ, ಅನಿಲ್,ಸೋಮೇಖರ್ ಮುಂತಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X