Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸಮಸಮಾಜದ ನಿರ್ಮಾಣವೇ ಕನಕದಾಸರ ಆಶಯ: ಸಚಿವ...

ಸಮಸಮಾಜದ ನಿರ್ಮಾಣವೇ ಕನಕದಾಸರ ಆಶಯ: ಸಚಿವ ಎಚ್.ಸಿ.ಮಹದೇವಪ್ಪ

ಜಿಲ್ಲಾಡಳಿತದ ವತಿಯಿಂದ 536 ನೇ ಕನಕದಾಸ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ30 Nov 2023 5:26 PM IST
share
ಸಮಸಮಾಜದ ನಿರ್ಮಾಣವೇ ಕನಕದಾಸರ ಆಶಯ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಹಾಕಿ ಸಮ ಸಮಾಜವನ್ನು ನಿರ್ಮಿಸುವುದೇ, ಸಂತ ಕವಿ ಕನಕದಾಸರ ಆಶಯವಾಗಿತ್ತು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ನಗರದ ಕಲಾಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮೈಸೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಕನಕದಾಸರ ಜಯಂತೋತ್ಸವ ಆಚರಣೆ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 536ನೇ ಶ್ರೀ ಕನಕದಾಸರ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯದ ಚಳುವಳಿ ಮೂಲಕ ಸಮಾಜದ ಭಿನ್ನಾಭಿಪ್ರಾಯವನ್ನು ತೊಡೆದುಹಾಕುವಲ್ಲಿ ಹೋರಾಡಿದ ಸಂತಕವಿ ದಾಸಶ್ರೇಷ್ಠ ಕನಕದಾಸರು. ಕನ್ನಡ ಸಾಹಿತ್ಯದಲ್ಲಿಯೇ ಕೀರ್ತನೆ ಕಾವ್ಯ ಮೂಲಕ ಸಾಮಾಜಿಕ ಸಂದೇಶಗಳನ್ನು ಸಾರಿದ ಕೀರ್ತಿ ಕನಕದಾಸರಿಗೆ ಸಲ್ಲುತ್ತದೆ. ಅವರು ನಳ ಚರಿತ್ರೆ ಸಾಹಿತ್ಯವು ಜೀವನದ ಕಷ್ಟ-ಸುಖ, ಸಮಸ್ಯೆ ಹಾಗೂ ಕೂಡುಬಾಳವೆಯನ್ನು ವಿವರಿಸುತ್ತದೆ. ಹಾಗೆಯೇ ರಾಮಧಾನ್ಯ ಚರಿತೆಯು ಎರಡು ಧಾನ್ಯಗಳನ್ನ ಮುಂದಿರಿಸಿಕೊಂಡು ಸಮಾಜದಲ್ಲಿನ ಭೇದವನ್ನು ಇತರ ತಾರತಮ್ಯಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂದು ತಿಳಿಸಿದರು.

ಅಂದು ಸಣ್ಣ ಸ್ಥಳದಿಂದ ಬಂದ ಕನಕದಾಸರು ಇಂದು ಹಿಮಾಲಯದಷ್ಟು ಎತ್ತರದಲ್ಲಿದ್ದಾರೆ. ಅದೇ ರೀತಿ ನಮ್ಮ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ತಮ್ಮ ಸಾಮಾಜಿಕ ಬದ್ಧತೆಯಿಂದ ಘರ್ಜಿಸುತ್ತಿದ್ದಾರೆ. ಜಾತಿ ವಿಷಯ ಬಂದಾಗ ನಾವು ಅಲ್ಲಿನ ಹಿಂಸೆಯನ್ನು ವಿರೋಧಿಸಬೇಕೇ ಹೊರತು ಯಾವುದೇ ಜಾತಿ ಅಥವಾ ಧರ್ಮವನ್ನಲ್ಲ. ಬಸವಾದಿ ಶರಣರಿಂದ ಸಮಾಜದ ಬದಲಾವಣೆಯ ಪ್ರಯತ್ನವಾಗಿದ್ದು, ದಾಸ ಸಾಹಿತ್ಯ ತನ್ನ ಭಕ್ತಿ ಪಂಥದ ಮೂಲಕ ಸಮಾಜದ ಬದಲಾವಣೆಗೆ ಮತ್ತಷ್ಟು ಒತ್ತು ನೀಡಿದೆ ಎಂದರು.

ಕನಕದಾಸರು 15ನೇ ಶತಮಾನದಲ್ಲಿಯೇ ನಾನು ಹೋದರೆ ಹೋದೇನು ಎಂಬ ಮಾತಿನ ಮೂಲಕ ಮನುಷ್ಯರಲ್ಲಿರುವ ನಾನತ್ವ, ಅಹಂ ದೂರಾಗಬೇಕು ಎಂಬ ಸಂದೇಶ ಸಾರಿದ್ದಾರೆ. ಈ ನೆಲ ಜಲ ಗಾಳಿ ಎಲ್ಲರಿಗೂ ಒಂದೇ ಆಗಿರುವಾಗ ನಮ್ಮಗಳ ಮಧ್ಯೆ ಭಿನ್ನಾಭಿಪ್ರಾಯ ಅವಶ್ಯಕತೆ ಇಲ್ಲ ಎಂಬ ಅಂಶದ ಜೊತೆಗೆ ಕೋಮು ಸೌಹಾರ್ದತೆಯನ್ನು ಸಾರಿದ್ದಾರೆ ಎಂದು ತಿಳಿಸಿದರು.

ಅಧಿಕಾರದಲ್ಲಿರುವವರು ಆಡಳಿತಾತ್ಮಕ ವಿಚಾರಗಳಲ್ಲಿ ಜಾತಿ ಅಥವಾ ಧರ್ಮ ತಲೆ ದೂರದಂತೆ ನೋಡಿಕೊಳ್ಳುವುದೇ ನಿಜವಾದ ಜಾತ್ಯತೀತತೆಯಾಗಿದೆ. ಕನಕ ಪೀಠವು ಸಮಾಜ ಸುಧಾರಕರ ಧಾರ್ಮಿಕ ಕೇಂದ್ರವಾಗಿ ರೂಪುಗೊಳ್ಳಬೇಕು. ದಾಸ ಸಾಹಿತ್ಯದ ಮೂಲಕ ಸಮಾಜದ ಕೊಳಕನ್ನು ತೊಳೆಯಲು ಯತ್ನಿಸಿದ ಕನಕರ ಜಯಂತಿ ಆಚರಣೆಯು ಮನುಕುಲದ ಉದ್ಧಾರಕ್ಕೆ ಶ್ರೇಯಸ್ಸು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತ್ ಸದಸ್ಯರಾದ ಎಚ್.ವಿಶ್ವನಾಥ್, ಡಾ. ಡಿ ತಿಮ್ಮಯ್ಯ, ಮರಿತಿಬ್ಬೆಗೌಡ, ಸಿ.ಎನ್ ಮಂಜೇಗೌಡ ಹಾಗೂ ಶಾಸಕ ಟಿ.ಎಸ್ ಶ್ರೀವತ್ಸ, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ (ಆಡಳಿತ) ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಮ್ ಡಿ ಸುದರ್ಶನ್, ಕನಕದಾಸರ ಜಯಂತೋತ್ಸವ ಆಚರಣೆ ಸಮಿತಿಯ ಅಧ್ಯಕ್ಷರಾದ ಎಂ.ಕೆ ಸೋಮಶೇಖರ್, ಸದಸ್ಯರಾದ ಮರಿಗೌಡ, ಬಿ ಎಂ ರಾಘೂ, ಎಂ ಶಿವಣ್ಣ, ಬ್ಯಾಂಕ್ ಪುಟ್ಟಸ್ವಾಮಿ, ಸಿದ್ಧ ನಾಗೇಂದ್ರ, ಜೆ ಮಹದೇವಪ್ಪ, ಮಾದೇಗೌಡ ಹಾಗೂ ಚಿಕ್ಕಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಂವಿಧಾನ ಬರೆಯುವಾಗ ಕನಕದಾಸರು, ಪುರಂದರದಾಸರು, ಸರ್ವಜ್ಞ ಇವರೆಲ್ಲರನ್ನು ಡಾ. ಬಿ ಆರ್ ಅಂಬೇಡ್ಕರ್ ರವರು ಚೆನ್ನಾಗಿ ಓದಿಕೊಂಡಿದ್ದರು. ನಾವೆಲ್ಲರೂ ಭಾವೈಕ್ಯತೆಯ ಸಾರವನ್ನು ಮರೆತಿದ್ದೇವೆ ಆದರೆ ಭಾವೈಕ್ಯದಲ್ಲಿ ಭಕ್ತಿಯ ಸಂಗಮವೇ ಕನಕದಾಸರಾಗಿದ್ದಾರೆ.

- ಎಚ್.ವಿಶ್ವನಾಥ್, ವಿಧಾನಪರಿಷತ್ ಸದಸ್ಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X