Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ದ್ವೇಷ ದೂರವಾಗಿ ಸಾಮರಸ್ಯ ಬೆಳೆಯಲಿ,...

ದ್ವೇಷ ದೂರವಾಗಿ ಸಾಮರಸ್ಯ ಬೆಳೆಯಲಿ, ಅಭಿವೃದ್ಧಿಯ ಬೆಳಕು ಮನೆಮನೆಗೂ ತಲುಪಲಿ: ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ21 Oct 2026 8:51 PM IST
share
ದ್ವೇಷ ದೂರವಾಗಿ ಸಾಮರಸ್ಯ ಬೆಳೆಯಲಿ, ಅಭಿವೃದ್ಧಿಯ ಬೆಳಕು ಮನೆಮನೆಗೂ ತಲುಪಲಿ: ಸಿಎಂ ಡಿ.ಕೆ.ಶಿವಕುಮಾರ್

ಮೈಸೂರು : ನಾಡಹಬ್ಬ ದಸರಾ ಸಂದರ್ಭದಲ್ಲಿ ದ್ವೇಷ ದೂರವಾಗಿ ಸಾಮರಸ್ಯ ಬೆಳೆಯಬೇಕು. ಅಭಿವೃದ್ಧಿಯ ಬೆಳಕು ಪ್ರತಿ ಮನೆಗೂ ತಲುಪಬೇಕು ಎಂಬುದು ನಮ್ಮ ಸಂಕಲ್ಪ. ಅನ್ಯಾಯ ಅಳಿಯಬೇಕು, ಸಮಾನತೆ ಬೆಳಗಬೇಕು, ಕಷ್ಟಗಳು ಕರಗಬೇಕು. ರೈತರು ಹಾಗೂ ಯುವಕರ ಬದುಕು ಬೆಳಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೂ ಮುನ್ನ ನಂದಿಧ್ವಜ ಪೂಜೆ ನೆರವೇರಿಸಿದ ಬಳಿಕ ಹಾಗೂ ಮೈಸೂರು ವಿಮಾನ ನಿಲ್ದಾಣದ ಬಳಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ನನ್ನ ಬದುಕಿನ ಅಮೂಲ್ಯ ಕ್ಷಣ :

ಇಂದು ನಂದಿ ಪೂಜೆ ನೆರವೇರಿಸಿ ದಸರಾ ಜಂಬೂಸವಾರಿಗೆ ಚಾಲನೆ ನೀಡಿದ್ದೇವೆ. ಇದು ನನ್ನ ಬದುಕಿನ ಅಮೂಲ್ಯ ಕ್ಷಣವಾಗಿದೆ. ನಾಡಿನ ಪ್ರಜಾಸೇವಕನಾಗಿ ನನ್ನ ಸಹೋದ್ಯೋಗಿಗಳೊಂದಿಗೆ ಈ ಐತಿಹಾಸಿಕ ಕ್ಷಣದಲ್ಲಿ ಭಾಗಿಯಾಗಿದ್ದೇನೆ. ರಾಜ್ಯದ ಜನರ ಆಶೀರ್ವಾದದಿಂದ ಶಕ್ತಿ ದೇವತೆ ಚಾಮುಂಡೇಶ್ವರಿಯ ಮೆರವಣಿಗೆಗೆ ಸಾಕ್ಷಿಯಾಗುವ ಅವಕಾಶ ಸಿಕ್ಕಿದೆ. ಈ ಅವಕಾಶ ನೀಡಿದ ನಾಡಿನ ಜನತೆಗೆ ಶಾಂತಿ, ಸುಖ, ನೆಮ್ಮದಿ ದೊರೆಯಲಿ ಎಂದು ತಾಯಿ ಚಾಮುಂಡೇಶ್ವರಿಯ ಪಾದಗಳಿಗೆ ನಮಿಸಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಕೊಪ್ಪಳದ ಶ್ರೀಗಳು ದಸರಾಗೆ ಚಾಲನೆ ನೀಡಿ ಶುಭ ಹಾರೈಸಿದ್ದಾರೆ. ರಾಜ್ಯದಲ್ಲಿ ಮಳೆ ಮತ್ತು ಬೆಳೆ ಚೆನ್ನಾಗಿ ಆಗಬೇಕು ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿದ್ದೇವೆ. ಪ್ರತಿನಿತ್ಯ ಲಕ್ಷಾಂತರ ಜನರು ದಸರಾ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ತಾಯಿಯ ಆಶೀರ್ವಾದವೇ ನಮ್ಮೆಲ್ಲರ ಶಕ್ತಿ. ಜನಸೇವೆಯೇ ನಮ್ಮ ಭಕ್ತಿ ಎಂದು ತಿಳಿಸಿದರು.

ಇದು ಸರ್ಕಾರ ಅಥವಾ ರಾಜಮನೆತನಕ್ಕೆ ಮಾತ್ರ ಸೇರಿದ ದಸರಾ ಅಲ್ಲ. ಪ್ರಜಾಪ್ರಭುತ್ವ ಬಂದ ಬಳಿಕ ಇದು ಎಲ್ಲರ ಹಬ್ಬವಾಗಿದೆ. ರಾಜಮನೆತನಕ್ಕೆ ನೀಡಬೇಕಾದ ಗೌರವವನ್ನು ನೀಡಲಾಗುವುದು. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಆದ್ಯತೆ ನೀಡಲಾಗಿದೆ. ಕನ್ನಡ ನಾಡಿನ ಅಭಿವೃದ್ಧಿಗೆ ನಾವು ಪಣ ತೊಟ್ಟಿದ್ದೇವೆ. ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಸಿನಿಮಾ ನಟರು ಹಾಗೂ ದೇಶ ಕಾಯುವ ಯೋಧರೂ ಪಾಲ್ಗೊಂಡಿದ್ದಾರೆ. ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ರಾಜ್ಯದ ಎಲ್ಲ ಜನರ ಮೇಲಿರಲಿ, ಎಲ್ಲರ ಬದುಕು ಹಸನಾಗಲಿ ಎಂದು ರಾಜ್ಯದ ಪ್ರಜಾಸೇವಕನಾಗಿ ಶುಭ ಹಾರೈಸುತ್ತೇನೆ ಎಂದರು.

ಈ ಬಾರಿ ತಾಯಿ ಚಾಮುಂಡೇಶ್ವರಿಯ ಮೆರವಣಿಗೆ ಹೊಸ ಆನೆ ಪ್ರಶಾಂತನ ಮೇಲೆ ಸಾಗಲಿದೆ. ಮುಂದಿನ ಹತ್ತಾರು ವರ್ಷಗಳ ಕಾಲ ತಾಯಿಯ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಭಾಗ್ಯ ಆನೆಗೆ ಸಿಗಲಿ ಎಂದು ಶುಭ ಹಾರೈಸಿದರು.

ನೆರೆ ರಾಜ್ಯಗಳು ಸಹೋದರರಂತೆ ಸಾಮರಸ್ಯದಿಂದ ಇರಬೇಕು :

ನೆರೆ ರಾಜ್ಯಗಳ ಮುಖ್ಯಮಂತ್ರಿಗಳ ಆಗಮನದಿಂದ ರಾಜ್ಯಗಳ ನಡುವಿನ ಸಾಮರಸ್ಯ ವೃದ್ಧಿಯಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಖಂಡಿತವಾಗಿಯೂ ಸಾಮರಸ್ಯ ಮೂಡುತ್ತದೆ. ಇಲ್ಲಿ ತೆಲುಗು, ಮಲಯಾಳಂ ಮತ್ತು ತಮಿಳು ಮಾತನಾಡುವ ಜನರಿದ್ದಾರೆ. ಕಾವೇರಿ ನೀರು ಹರಿದು ಎಲ್ಲ ರಾಜ್ಯಗಳನ್ನೂ ತಲುಪುತ್ತದೆ. ಈ ರಾಜ್ಯಗಳು ಸಹೋದರರಂತೆ ಸಾಮರಸ್ಯದಿಂದ ಇರಬೇಕು. ನೆರೆ ರಾಜ್ಯಗಳ ಸ್ತಬ್ಧಚಿತ್ರಗಳೂ ಇಲ್ಲಿಗೆ ಬಂದಿವೆ ಎಂದು ಹೇಳಿದರು.

ನಮ್ಮ ರಾಜ್ಯ ವಿಶ್ವದ ಗಮನ ಸೆಳೆಯುತ್ತಿದೆ. ಬೆಂಗಳೂರಿನಲ್ಲಿ ಹೊರ ರಾಜ್ಯಗಳ 45 ಲಕ್ಷ ಜನರು ವಾಸಿಸುತ್ತಿದ್ದಾರೆ. ನಾವು ಎಲ್ಲರನ್ನೂ ಸ್ವೀಕರಿಸುತ್ತಿದ್ದೇವೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ವಿದೇಶಗಳಿಂದಲೂ ಜನರು ಆಗಮಿಸಿದ್ದಾರೆ. 13 ವಿದೇಶಿ ರಾಯಭಾರಿಗಳು ದಸರಾಗೆ ಬಂದಿದ್ದಾರೆ. ಈ ಬಾರಿಯ ದಸರೆಗೆ ವಿಶೇಷ ಮೆರಗು ನೀಡಲಾಗಿದೆ ಎಂದು ತಿಳಿಸಿದರು.

ದಸರಾ ವೀಕ್ಷಣೆಗೆ ಜನಸಾಗರ :

ಇದಕ್ಕೂ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಯುವಕ-ಯುವತಿಯರು ರೀಲ್ಸ್ ಮಾಡಿ ದಸರಾವನ್ನು ಇಡೀ ದೇಶಕ್ಕೆ ಪರಿಚಯಿಸಿದ್ದಾರೆ. ದಸರಾ ವೀಕ್ಷಣೆಗೆ ಆಗಮಿಸಿರುವ ಅನೇಕ ಮಂದಿಗೆ ಕೊಠಡಿಗಳು ಸಿಗುತ್ತಿಲ್ಲ ಎಂಬ ಮಾಹಿತಿ ಬಂದಿದೆ. ಎಲ್ಲೆಡೆ ಕೊಠಡಿಗಳು ಭರ್ತಿಯಾಗಿವೆ. ಎಲ್ಲಿಯೂ ಸಂಚಾರ ದಟ್ಟಣೆ ಉಂಟಾಗದಂತೆ ಪೊಲೀಸ್ ಇಲಾಖೆ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದರು.

ಏರ್ ಶೋ ಹಾಗೂ ಕಂಬಳ ಬಹಳ ಚೆನ್ನಾಗಿ ನಡೆದಿವೆ ಎಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಮುಖ್ಯ. ಮುಂದಿನ ಕಾರ್ಯಕ್ರಮಗಳನ್ನು ವೀಕ್ಷಿಸಿ ತಮ್ಮ ಅಭಿಪ್ರಾಯಗಳನ್ನು ತಿಳಿಸಬೇಕು. ಮಾಧ್ಯಮ ಪ್ರತಿನಿಧಿಗಳಿಗೆ ದಸರಾ ಶುಭ ತರಲಿ. ಈ ಕಾರ್ಯಕ್ರಮದ ಯಶಸ್ಸಿಗೆ ಮಾಧ್ಯಮಗಳ ಸಹಕಾರವೂ ಬಹಳ ಮುಖ್ಯ ಎಂದು ಹೇಳಿದರು.

Tags

D.K.Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X