Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸುತ್ತೂರು ಕ್ಷೇತ್ರದಲ್ಲಿ ಉಚಿತ ಸಾಮೂಹಿಕ...

ಸುತ್ತೂರು ಕ್ಷೇತ್ರದಲ್ಲಿ ಉಚಿತ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 157 ಜೋಡಿಗಳು

ವಾರ್ತಾಭಾರತಿವಾರ್ತಾಭಾರತಿ28 Jan 2025 12:07 AM IST
share
ಸುತ್ತೂರು ಕ್ಷೇತ್ರದಲ್ಲಿ ಉಚಿತ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 157 ಜೋಡಿಗಳು

ಮೈಸೂರು: ಶ್ರೀಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಎರಡನೇ ದಿನ ಸೋಮವಾರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹರಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ಅದ್ಧೂರಿಯಾಗಿ ನೆರವೇರಿತು.

ಪ್ರತಿ ವರ್ಷದಂತೆ ಈ ವರ್ಷವೂ ನೂರಾರು ಜೋಡಿಗಳು ಶ್ರೀಕ್ಷೇತ್ರ ಸುತ್ತೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅದರಲ್ಲಿ ವಿಶೇಷವಾಗಿ ಅಂಧ ಜೋಡಿಗಳು ಎಲ್ಲರ ಗಮನ ಸೆಳೆದಿವೆ.

ಜಾತಿ-ಮತಭೇದವಿಲ್ಲದೇ ಸರ್ವಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಶರ್ಟ್‌ಗಳನ್ನು ನೀಡಲಾಗಿತ್ತು.

ಈ ಉಚಿತ ಸಾಮೂಹಿಕ ವಿವಾಹದಲ್ಲಿ 157 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇದರಲ್ಲಿ ಮೈಸೂರು ಜಿಲ್ಲೆಯಿಂದ 79 ಜೋಡಿಗಳು, ಚಾಮರಾಜನಗರ ಜಿಲ್ಲೆಯಿಂದ 43ಜೋಡಿಗಳು, ಸತಿಪತಿಗಳಾದರು.

ಈ ಪೈಕಿ ವೀರಶೈವ ಲಿಂಗಾಯಿತ ಸಮುದಾಯ (3 ಜೋಡಿ), ಪರಿಶಿಷ್ಟ ಜಾತಿ (84 ಜೋಡಿ), ಪರಿಶಿಷ್ಟ ಪಂಗಡ(22ಜೋಡಿ), ಹಿಂದುಳಿದ ವರ್ಗ (22 ಜೋಡಿ), ಅಂತರ್ಜಾತಿ (23ಜೋಡಿ), ಅಂತರಧರ್ಮ(1ಜೋಡಿ) ವಧುವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಈ ಉಚಿತ ಸಾಮೂಹಿಕ ವಿವಾಹದಲ್ಲಿ ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳ ಸತಿಪತಿಗಳು, ಅಂತರಧರ್ಮ, ವಿಶೇಷಚೇತನರು ಎಲ್ಲರ ಗಮನ ಸೆಳೆದರು.

ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಾಡಿನ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ನೂತನ ವಧು ವರರಿಗೆ ಆಶೀರ್ವಾದ ಮಾಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯ ಸರ್ಕಾರದ ನಾಯಕರು ಹಾಗೂ ಶಾಸಕರು ಭಾಗಿಯಾಗಿದ್ದರು.

ವರ್ಷದಿಂದ ವರ್ಷಕ್ಕೆ ಇಲ್ಲಿ ಮದುವೆಯಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಕಳೆದ ಒಂದು ದಶಕದಿಂದ ಹಲವು ಜೋಡಿಗಳು ಸಾಮೂಹಿಕ ವಿವಾಹದಲ್ಲಿ ದಾಂಪತ್ಯಕ್ಕೆ ಕಾಲಿಡುವ ಮೂಲಕ ಹೊಸ ಜೀವನ ಕಟ್ಟಿಕೊಂಡಿದ್ದಾರೆ.

ಫೆಬ್ರವರಿ 2009 ರಿಂದ ಸುತ್ತೂರು ಶ್ರೀಕ್ಷೇತ್ರದಲ್ಲಿ ಆದಿಜಗದ್ಗುರುಗಳ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹೊರತುಪಡಿಸಿ ಸಂಸ್ಥಾನ ಮಠವು ಮಾಸಿಕ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಾವಿರಾರು ಬಡವರ ಪಾಲಿಗೆ ವರದಾನವಾಗಿದೆ.

ಆರ್ಥಿಕವಾಗಿ ಸವಾಲು ಹೊಂದಿರುವ ಮತ್ತು ಸಾಂಪ್ರದಾಯಿಕ ವಿವಾಹ ಸಮಾರಂಭದ ವೆಚ್ಚವನ್ನು ಭರಿಸಲಾಗದ ದಂಪತಿಗಳಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದೆ.

ಕಾರ್ಯಕ್ರಮದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗದಗದ ಡಾ. ಕಲ್ಲಯ್ಯಜ್ಜನವರು, ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ್ ಗುರೂಜಿ, ಪಳನಿಯ ಶ್ರೀ ಪುಲಿಪ್ಪನಿ ಸಿದ್ಧರ್ ಆಶ್ರಮದ ಶ್ರೀ ವಲಾರ್ ಶಿವಾನಂದ ಪುಲಿಪ್ಪನಿ ಪಾತಿರಕರ ಸ್ವಾಮೀಜಿ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್, ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಪ್ರತಿಜ್ಞಾವಿಧಿ ಭೋದಿಸಿದ ಕೇಂದ್ರ ಸಚಿವ

ಸಾಮೂಹಿಕ ವಿವಾಹದಲ್ಲಿ 157 ನೂತನ ಜೋಡಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಬಳಿಕ ಮಾತನಾಡಿ, ಸುತ್ತೂರು ಕ್ಷೇತ್ರದಲ್ಲಿ ಹಬ್ಬದ ವಾತಾವರಣ ಮೂಡಿಬಂದು ನಮ್ಮ ಸನಾತನ ಸಂಸ್ಕೃತಿಯ ದರ್ಶನವಾಯಿತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X