ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ

ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ.
ಜೂ.19ರಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದ ಹಿನ್ನಲೆಯಲ್ಲಿ ಮಹೇಶ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಅವಹೇಳನಕಾರಿ ಆರೋಪ ಹಿನ್ನೆಲೆಯಲ್ಲಿ ಎಂ.ಜಿ.ಮಹೇಶ್ ಅವರಿಗೆ ಬಿಜೆಪಿಯ ರಾಜ್ಯ ಶಿಸ್ತು ಸಮಿತಿಯು ನೋಟಿಸ್ ಜಾರಿ ಮಾಡಿ ಸ್ಪಷ್ಟೀಕರಣ ಕೇಳಿತ್ತು. ಮಹೇಶ್ ನೀಡಿದ ಸ್ಪಷ್ಟೀಕರಣ ಸಮಂಜಸವಾಗಿಲ್ಲ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ತಿಳಿಸಿದ್ದಾರೆ.
Next Story




