Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ...

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ: ವರ್ಷ ಪೂರ್ತಿ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲು ಯೋಜನೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ17 July 2026 7:19 PM IST
share
ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ: ವರ್ಷ ಪೂರ್ತಿ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲು ಯೋಜನೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಮುಂದಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಶುಕ್ರವಾರ ಭೇಟಿ ನೀಡಿ, ಪರಿವೀಕ್ಷಣೆ ನಡೆಸಿ ನಂತರ ಸಭಾಂಗಣದಲ್ಲಿ 2026ರ ದಸರಾ ವಸ್ತು ಪ್ರದರ್ಶನ ಆಯೋಜನೆಯ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಈ ಬಾರಿಯ ವಸ್ತು ಪ್ರದರ್ಶನವು ದಸರಾ ಹಬ್ಬದಿಂದ ಆರಂಭವಾಗಿ ಒಟ್ಟು 90 ದಿನಗಳ ಕಾಲ, ಅಂದರೆ ಜನವರಿ 8, 2027 ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರಲಿದ್ದು, ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅವಧಿಯನ್ನು ಮತ್ತಷ್ಟು ವಿಸ್ತರಿಸುವ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ಕಳೆದ ವರ್ಷಗಳಲ್ಲಿ 8 ಮತ್ತು 9 ಲಕ್ಷದಷ್ಟಿದ್ದ ಪ್ರವಾಸಿಗರ ಸಂಖ್ಯೆಯು ಪ್ರಸ್ತುತ ಸಾಲಿನಲ್ಲಿ ಅಧಿಕಾರಿಗಳ ಉತ್ತಮ ನಿರ್ವಹಣೆಯಿಂದಾಗಿ ಬರೋಬ್ಬರಿ 15 ಲಕ್ಷದ ಗಡಿಯನ್ನು ದಾಟಿ ದಾಖಲೆ ಬರೆದಿದೆ. ಪ್ರವಾಸಿಗರ ಭೇಟಿಯನ್ನು ಮತ್ತಷ್ಟು ಸುಲಭ ಹಾಗೂ ಆರಾಮದಾಯಕವಾಗಿಸಲು 4 ಕೋಟಿ ರೂಪಾಯಿ ವೆಚ್ಚದಲ್ಲಿ 32 ಶಾಶ್ವತ ಮಳಿಗೆಗಳನ್ನು ಹಾಗೂ ಮಳೆ-ಬಿಸಿಲಿನಿಂದ ರಕ್ಷಣೆ ನೀಡುವ ಅತ್ಯಾಧುನಿಕ ಶೆಲ್ಟರ್ ಒಳಗೊಂಡ ಶಾಶ್ವತ ಫುಡ್ ಕೋರ್ಟ್ ವ್ಯವಸ್ಥೆಯನ್ನು ಆವರಣದಲ್ಲಿ ನಿರ್ಮಿಸಲಾಗುತ್ತಿದೆ ಎಂದರು.

ಪ್ರತಿ ವರ್ಷ ತಾತ್ಕಾಲಿಕ ಮಳಿಗೆಗಳನ್ನು ನಿರ್ಮಿಸುವ ವೆಚ್ಚವನ್ನು ತಪ್ಪಿಸಲು ಸಿದ್ದರಾಮಯ್ಯ ಪ್ರದರ್ಶನ ಅಂಗಳದಲ್ಲಿ ಈಗಾಗಲೇ ಕಾಯಂ ಮಳಿಗೆಗಳನ್ನು ಕಲ್ಪಿಸಲಾಗಿದೆ. ಇದರೊಂದಿಗೆ ಸಾರ್ವಜನಿಕರ ನೆಚ್ಚಿನ ಆಕರ್ಷಣೆಗಳಾದ ಸಂಗೀತ ಕಾರಂಜಿ ಹಾಗೂ ಲೇಸರ್ ಶೋ, ಬೋಟಿಂಗ್ ಮತ್ತು ಬೆಂಕಿ ಉಗುಳುವ ಡ್ರ್ಯಾಗನ್ ಪ್ರದರ್ಶನ ಒಳಗೊಂಡ ರಾಜೀವ್ ಗಾಂಧಿ ಡ್ರ್ಯಾಗನ್ ಪಾಂಡ್ ಮನರಂಜನಾ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುತ್ತಿದ್ದು, ಮೈದಾನದ ಒಳಭಾಗದಲ್ಲಿ ರಸ್ತೆ ಮತ್ತು ಕುಡಿಯುವ ನೀರಿನಂತಹ ಮೂಲಸೌಕರ್ಯಗಳನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಹೇಳಿದರು.

ಮೈಸೂರು ನಗರದ ಮಧ್ಯಭಾಗದಲ್ಲಿರುವ ಜಾಗಗಳಲ್ಲಿ ರ್ಯಾಲಿಗಳು, ಖಾಸಗಿ ಕಾರ್ಯಕ್ರಮಗಳು ಹಾಗೂ ಸಂಗೀತ ಕಚೇರಿಗಳನ್ನು ನಡೆಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ನಗರದ ಹೊರವಲಯದಲ್ಲಿ ಇಂತಹ ಸಾರ್ವಜನಿಕ ಕಾರ್ಯಕ್ರಮಗಳಿಗಾಗಿ ಪ್ರತ್ಯೇಕ ಮೈದಾನವೊಂದನ್ನು ಮೀಸಲಿಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ದಸರಾವನ್ನು ಸರಳವಾಗಿ ಆಚರಿಸಬೇಕೆಂಬ ಅಭಿಪ್ರಾಯಗಳು ಕೇಳಿಬಂದಿದ್ದವು. ಆದರೆ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಚರ್ಚೆಯ ಬಳಿಕ, ಪ್ರತಿವರ್ಷದಂತೆ ಈ ಬಾರಿಯೂ ದಸರಾವನ್ನು ಸಡಗರ ಮತ್ತು ವಿಜೃಂಭಣೆಯಿoದಲೇ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಕಳೆದ ಬಾರಿಯಂತೆ ಈ ಬಾರಿಯೂ ದಸರಾ ವಸ್ತುಪ್ರದರ್ಶನಕ್ಕೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ವಸ್ತುಪ್ರದರ್ಶನವು ಪ್ರಮುಖ ಆಕರ್ಷಣೆಯಾಗಿದ್ದು, ಲಕ್ಷಾಂತರ ಜನ ಭೇಟಿ ನೀಡುವುದರಿಂದ ಅದರ ಅಭಿವೃದ್ಧಿಗೆ ಅನುದಾನದ ಅಗತ್ಯವಿದೆ. ದಸರಾ ಶಾಶ್ವತ ಪ್ರಾಧಿಕಾರ ರಚನೆ ಮಾಡಬೇಕೆಂಬ ಬೇಡಿಕೆ ಪ್ರತಿ ವರ್ಷದಂತೆ ಈ ಬಾರಿಯೂ ಬಂದಿದ್ದು, ಮುಖ್ಯಮಂತ್ರಿಗಳು ಇದನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡು ಕೇವಲ ಒಂದು ತಿಂಗಳಷ್ಟೇ ಆಗಿರುವುದರಿಂದ, ಮುಂದಿನ ತಿಂಗಳು ಕಡ್ಡಾಯವಾಗಿ ಕೆ.ಡಿ.ಪಿ ಸಭೆಯನ್ನು ಕರೆಯಲಾಗುವುದು ಎಂದು ತಿಳಿಸಿದರು.

ದಸರಾ ಸಂದರ್ಭದಲ್ಲಿ ಉಪಸಮಿತಿಗಳನ್ನು ರಚಿಸುವಾಗ ಪಕ್ಷದ ಕಾರ್ಯಕರ್ತರನ್ನು ಸೇರಿಸುವ ವಿಷಯದಲ್ಲಿ ಉಂಟಾಗುವ ಗೊಂದಲಗಳನ್ನು ಈ ಬಾರಿ ನಿವಾರಿಸಲಾಗುವುದು. ಆದಷ್ಟು ಬೇಗ ಸಮಿತಿಗಳನ್ನು ರಚಿಸಿ ನಿಯಮಿತ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸದಸ್ಯರನ್ನಾಗಿ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು. ಹಿಂದಿನ ಎಲ್ಲಾ ಸರ್ಕಾರಗಳೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ಇಂತಹ ಮಂಡಳಿ ಹಾಗೂ ಸಮಿತಿಗಳಲ್ಲಿ ಅವಕಾಶ ನೀಡುವುದು ಸಹಜ ಪ್ರಕ್ರಿಯೆಯಾಗಿದ್ದು, ಈ ಬಾರಿಯೂ ಅದನ್ನೇ ಪಾಲಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳನ್ನು ಈ ವರ್ಷದ ನವೆಂಬರ್ ನಲ್ಲಿ ನಡೆಸಲಾಗುವುದು, ಹಾಗೆಯೇ ಗ್ರಾಮ ಪಂಚಾಯಿತಿ ಚುನಾವಣೆಗಳನ್ನೂ ಇದೇ ವರ್ಷ ನಡೆಸಲು ಗ್ರಾಮೀಣಾಭಿವೃದ್ಧಿ ಸಚಿವರು ಒಲವು ತೋರಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಚುನಾವಣೆ ವಿಳಂಬಕ್ಕೆ ಕಾರಣ ಮೈಸೂರನ್ನು ಬೃಹತ್ ಮೈಸೂರು ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಸೆನ್ಸಸ್ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ಯಾವುದೇ ಬದಲಾವಣೆ ಮಾಡಲು ಬರುವುದಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದರಿಂದ ಚುನಾವಣೆ ವಿಳಂಬವಾಗಿದೆ. ಈಗ ಸೆನ್ಸಸ್ ಮುಗಿಯುವವರೆಗೆ ಕಾಯುವುದು ಬೇಡ ಎಂದು ತೀರ್ಮಾನಿಸಿದ್ದು, ಶೀಘ್ರದಲ್ಲೇ ಸಿಎಂ ಹಾಗೂ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಚುನಾವಣೆ ನಡೆಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಫುಟ್ಪಾತ್ ಅತಿಕ್ರಮಣ ತೆರವುಗೊಳಿಸುವುದು ಸಂಚಾರ ದಟ್ಟಣೆ ನಿಯಂತ್ರಿಸಲು ಅನಿವಾರ್ಯವಾಗಿದೆ. ಆದರೆ ಇತರೆ ನಗರಗಳಲ್ಲಿ ಮಾನವೀಯತೆಯ ದೃಷ್ಟಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆಯಾಗದoತೆ ನೋಟಿಸ್ ನೀಡಿ, ಪರ್ಯಾಯ ಜಾಗ ಕಲ್ಪಿಸಿ ನಂತರ ತೆರವು ಮಾಡಲಾಗುವುದು. ಮೈಸೂರಿನಲ್ಲಿ ಫುಡ್ ಸ್ಟ್ರೀಟ್ ಮತ್ತು ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದರ್ಶನ ಪ್ರಾಧಿಕಾರದ ಅಧಕ್ಷರಾದ ಅಯೂಬ್ ಖಾನ್, ಸಿಇಒ ರುದ್ರೇಗೌಡ, ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಎಚ್.ವಿ.ರಾಜೀವ್ ಮತ್ತಿತರರು ಉಪಸ್ಥಿತರಿದ್ದರು.

Tags

Yathindra SiddaramaiahAmusement Park
share
ವಾರ್ತಾಭಾರತಿ
ವಾರ್ತಾಭಾರತಿ
Next Story
X