Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ...

ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ದಸರಾ ಆಚರಣೆ : ಸಚಿವ ಮಹದೇವಪ್ಪ

ಮೈಸೂರು ದಸರಾ ಆಚರಣೆ ಕುರಿತ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ16 Aug 2024 10:29 PM IST
share
ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ದಸರಾ ಆಚರಣೆ : ಸಚಿವ ಮಹದೇವಪ್ಪ

ಮೈಸೂರು : ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೊನ್ನೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹೈ ಪವರ್ ಕಮಿಟಿ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ, ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಬೇಕು. ಅ.3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45 ಗಂಟೆಯೊಳಗೆ ದಸರಾ ಉದ್ಘಾಟನೆ ಮಾಡಲಾಗುವುದು ಎಂದರು.

ಈ ಬಾರಿ ದಸರಾ ಆಚರಣೆಗೆ 40 ಕೋಟಿ ರೂ.ವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಮೈಸೂರು ನಗರದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು ಎಂದರು.

ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ್‌ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು ಎಂದರು.

ಸ್ತಬ್ಧ ಚಿತ್ರಗಳಲ್ಲಿ ಕರ್ನಾಟಕ ಸರ್ಕಾರದ 5 ಗ್ಯಾರೆಂಟಿಗಳ ಕುರಿತ ಸ್ತಬ್ಧ ಚಿತ್ರಗಳು ಇರಬೇಕು. ಜೊತೆಗೆ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಸ್ತಬ್ಧ ಚಿತ್ರ ಇರಬೇಕು. ದೀಪಾಲಂಕಾರ 21 ದಿನಗಳ ಕಾಲ ಇರಬೇಕು. ದೀಪಾಲಂಕಾರ ದಸರಾ ಆಚರಣೆಯ ಮೇರಗನ್ನು ಹೆಚ್ಚಿಸುತ್ತದೆ. ದೀಪಾಲಂಕಾರವನ್ನು ದಸರಾ ಮಹೋತ್ಸವದಲ್ಲಿ ಪ್ರಮುಖ ವೃತ್ತಗಳಲ್ಲಿ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳಿಗೆ ಕಳೆದ ಎರಡು ವರ್ಷಗಳಲ್ಲಿನ ಕಾರ್ಯಕ್ರಮಗಳು ಹಾಗೂ ಕಲಾವಿದರೂ ಪುನರಾವರ್ತನೆಯಾಗದಂತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಚಿವರು ತಿಳಿಸಿದರು.

ಚಿಣ್ಣರ ದಸರಾ, ಮಹಿಳಾ ದಸರಾ ಹಾಗೂ ರೈತ ದಸರ ಕಾರ್ಯಕ್ರಮ ಅರ್ಥ ಪೂರ್ಣವಾಗಿ ನಡೆಸಬೇಕು. ಸ್ವತಂತ್ರ ದೇಶಾಭಿಮಾನದ ಸಂದೇಶಗಳನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ, ದಸರಾ ಆಚರಣೆಗೆ 19 ಉಪ ಸಮಿತಿಗಳನ್ನು ರಚಿಸಲಾಗಿದೆ. ಗಜ ಪಯಣವನ್ನು ಆ.21 ರಂದು ನಿಗದಿ ಮಾಡಲಾಗಿದೆ. ಕರ್ನಾಟಕ ಸಂಭ್ರಮ 50ನ್ನು ಆಚರಣೆ ಮಾಡಲಾಗುತ್ತಿದೆ. ಇದರ ಲಾಂಛನವನ್ನು ದಸರಾ ಆಚರಣೆಯಲ್ಲಿ ಅಳವಡಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X