Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ಅಂಬೇಡ್ಕರ್ ಭವನ ಕಾಮಗಾರಿ...

ಮೈಸೂರು | ಅಂಬೇಡ್ಕರ್ ಭವನ ಕಾಮಗಾರಿ ಆರಂಭಿಸಲು ವಿಳಂಬ; ಸಚಿವ ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಯತ್ನ, ದಸಂಸ ಮುಖಂಡರ ಬಂಧನ

ವಾರ್ತಾಭಾರತಿವಾರ್ತಾಭಾರತಿ24 March 2025 12:52 PM IST
share
  • ಮೈಸೂರು | ಅಂಬೇಡ್ಕರ್ ಭವನ ಕಾಮಗಾರಿ ಆರಂಭಿಸಲು ವಿಳಂಬ; ಸಚಿವ ಮಹದೇವಪ್ಪ  ನಿವಾಸಕ್ಕೆ ಮುತ್ತಿಗೆ ಯತ್ನ, ದಸಂಸ ಮುಖಂಡರ ಬಂಧನ
  • ಮೈಸೂರು | ಅಂಬೇಡ್ಕರ್ ಭವನ ಕಾಮಗಾರಿ ಆರಂಭಿಸಲು ವಿಳಂಬ; ಸಚಿವ ಮಹದೇವಪ್ಪ  ನಿವಾಸಕ್ಕೆ ಮುತ್ತಿಗೆ ಯತ್ನ, ದಸಂಸ ಮುಖಂಡರ ಬಂಧನ

ಮೈಸೂರು : ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ದಲಿತ ಸಂಘರ್ಷ ಸಮಿತಿ ಮುಖಂಡರನ್ನು ಅರ್ಧದಲ್ಲಿಯೇ ತಡೆದು ಪೊಲೀಸರು ಬಂಧಿಸಿದ ಘಟನೆ ನಡೆಯಿತು.

ನಗರದ ಹೃದಯಭಾಗದಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಆರಂಭವಾಗಿ 13 ವರ್ಷಗಳೇ ಕಳೆದರೂ ಅಪೂರ್ಣಗೊಂಡು ಅರ್ಧಕ್ಕೆ ನಿಂತು ಹೋಗಿದೆ. ಕಾಮಗಾರಿ ಆರಂಭಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದಸಂಸ ಮುಖಂಡರು ಸಚಿವ ಮಹದೇವಪ್ಪ ಅವರ ನಿವಾಸ ಮುತ್ತಿಗೆ ಹಾಕಲು ಸೋಮವಾರ ಯತ್ನಿಸಿದರು.

ದಸಂಸ ಮುಖಂಡರು ಸಚಿವ ಮಹದೇವಪ್ಪ ಅವರ ಮನೆಗೆ ಮುತ್ತಿಗೆ ಹಾಕುವ ವಿಷಯ ತಿಳಿದ ಪೊಲೀಸರು, ಅವರ ಮನಗೆ ಆಗಮಿಸುವ ರಸ್ತೆಗಳಲ್ಲಿ ಅಡ್ಡಲಾಗಿ ಬ್ಯಾರಿಕೇಡ್ ಗಳನ್ನು ಹಾಕಿ ಮುತ್ತಿಗೆ ಹಾಕಲು ಬಂದ ಪ್ರತಿಭಟನಾಕಾರರನ್ನು ತಡೆದು ಬಂಧಿಸಿದರು.

ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಪೊಲೀಸ್ ವ್ಯಾನ್ ನಲ್ಲಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.

ಪೊಲೀಸರ ವರ್ತನೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ಪೊಲೀಸರು, ಸಚಿವ ಮಹದೇವಪ್ಪ ಮತ್ತು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದೇ ವೇಳೆ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, ಅಂಬೇಡ್ಕರ್ ಭವನ ಕಾಮಗಾರಿ ಆರಂಭವಾಗಿ 13 ವರ್ಷ ಕಳೆದಿವೆ. ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳು ಇತ್ತ ಗಮನ ಹರಿಸಲಿಲ್ಲ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ದಲಿತ ಸಮುದಾಯ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಅಂಬೇಡ್ಕರ್ ಭವನ ಪೂರ್ಣಗೊಳಿಸುವಂತೆ ಒತ್ತಾಯಿಸಿಕೊಂಡು ಬರಲಾಗಿದೆ. ಆದರೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕೂಡ ಅದರ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುತ್ತಾ ಬಂದಿದೆ. ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಹಲವು ಬಾರಿ ತಂದರೂ ಇದರ ಬಗ್ಗೆ ಗಮನ ಹರಿಸದೆ ದಲಿತರನ್ನೆ ಕಡೆಗಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ದಸಂಸ ಮುಖಂಡರುಗಳಾದ ಶಂಭುಲಿಂಗಸ್ವಾಮಿ, ಶಿವಬುದ್ಧಿ, ಚೋರನಹಳ್ಳಿ ಶಿವಣ್ಣ, ಎಡದೊರೆ ಮಹದೇವಯ್ಯ, ಕಲ್ಲಹಳ್ಳಿ ಕುಮಾರ್, ಆಲಗೋಡು ಶಿವಕುಮಾರ್, ಕುಕ್ಕೂರು ರಾಜು, ಸಿದ್ಧರಾಜು ಹೊಮ್ಮರಗಳ್ಳಿ, ಮುತ್ತು, ಮಹೇಶ್, ಅಶೋಕಪುರಂ ಅಣ್ಣಯ್ಯ, ಸೇರಿದಂತೆ ಹಲವರು ಭಾಗವಹಿಸಿದ್ದರು.

"ಮಾ.27 ರಂದು ಕ್ಯಾಬಿನೆಟ್ ನಲ್ಲಿ ಅಂಬೇಡ್ಕರ್ ಭವನದ ಕಾಮಗಾರಿ ಆರಂಭ ಸಂಬಂಧ ಹೆಚ್ಚುವರಿ 23 ಕೋಟಿ ರೂ. ಹಣ ಬಿಡುಗಡೆ ಮಾಡಲಾಗುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶೀಘ್ರದಲ್ಲಿ ಅಂಬೇಡ್ಕರ್ ಭವನದ ಕಾಮಗಾರಿ ಆರಂಭಿಸದಿದ್ದರೆ ಎಪ್ರಿಲ್ 14 ರ ಅಂಬೇಡ್ಕರ್ ಜಯಂತಿಯಂದು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಅವಕಾಶ ನೀಡುವುದಿಲ. ಅವರ ದಲಿತ ವಿರೋಧಿ ನೀತಿಯನ್ನು ಕರಪತ್ರ ಮಾಡಿ ಎಲ್ಲಾ ಕಡೆಗಳಲ್ಲಿ ಹಂಚಲಾಗುವುದು"

-ಬೆಟ್ಟಯ್ಯ ಕೋಟೆ, ದಸಂಸ ಜಿಲ್ಲಾ ಸಂಚಾಲಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X