Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ...

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ : ಎಂ.ಲಕ್ಷ್ಮಣ್

ವಾರ್ತಾಭಾರತಿವಾರ್ತಾಭಾರತಿ16 Aug 2024 10:20 PM IST
share
ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ : ಎಂ.ಲಕ್ಷ್ಮಣ್

ಮೈಸೂರು : ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಯೋಜನೆ ರೂಪಿಸಿರುವ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ತಿರುಗೇಟು ನೀಡಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಚಾಮುಂಡಿ ಬೆಟ್ಟದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಚಾಮುಂಡಿ ಬೆಟ್ಟವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ದೃಷ್ಟಿಯಿಂದ ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಯಿತು. ಇದಕ್ಕೆ ವಿರುದ್ಧವಾಗಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೈಕೋರ್ಟ್‌ ನಲ್ಲಿ ತಡೆಯಾಜ್ಞೆ ತಂದಿದ್ದಾರೆ. ಆದರೆ ಈ ತಡೆಯಾಜ್ಞೆಯನ್ನು ಸೋಮವಾರ ತೆರವುಗೊಳಿಸುತ್ತೇವೆ ಎಂದು ಹೇಳಿದರು.

ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಆಸ್ತಿಯಾಗುವುದಿಲ್ಲ, ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಗಳು ಅಧ್ಯಕ್ಷರಾಗಿರುತ್ತಾರೆ. ಧಾರ್ಮಿಕ ದತ್ತಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ, ಪ್ರವಾಸೋಧ್ಯಮ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ರಾಜವಂಶಸ್ಥರಲ್ಲಿ ಒಬ್ಬರು ಶಾಶ್ವತ ಸದಸ್ಯರಾಗಿರುತ್ತಾರೆ. ಹೀಗಿದ್ದ ಮೇಲೆ ಏಕೆ ನಿಮ್ಮ ತಕರಾರು ಎಂದು ಪ್ರಶ್ನಿಸಿದರು.

ಚಾಮುಂಡಿ ಬೆಟ್ಟ ಯಾರ ಆಸ್ತಿಯೂ ಅಲ್ಲ, ಅದು ಸರ್ಕಾರದ ಆಸ್ತಿ. ಚಾಮುಂಡಿ ಬೆಟ್ಟದ ಪ್ರದೇಶ, ಅರಣ್ಯ ಇಲಾಖೆ, ಕಂದಾಯ ಇಲಾಖೆ, ಸ್ಥಳೀಯ ಗ್ರಾ.ಪಂ ವ್ಯಾಪ್ತಿಗೆ ಒಳಪಡುತ್ತದೆ. ಹೇಗೆ ರಾಜರ ಆಸ್ತಿಯಾಗುತ್ತದೆ. 1950ರಲ್ಲಿ ವಿಲೀನ ಗೊಂಡಾಗಿನಿಂದಲೂ ಚಾಮುಂಡಿ ಬೆಟ್ಟ ನಿರ್ವಹಣೆ ಮಾಡದೆ ಇವರು ಏನು ಮಾಡುತ್ತಿದ್ದರು ಎಂದು ಕೇಳಿದರು.

1974ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿರ್ವಹಣೆ ಮಾಡಲು ಸಾಧ್ಯವಿಲ್ಲ, ಸರ್ಕಾರವೇ ನಿರ್ವಹಣೆ ಮಾಡಿ ಎಂದು ಪತ್ರ ಬರೆದ ಮೇಲೆ ಅದು ಸರ್ಕಾರದ ಸ್ವಾಮ್ಯಕ್ಕೆ ಒಳಪಡಲಿದೆ. ಅದನ್ನು ಈಗ ಬಿಟ್ಟುಬಿಡಿ ಎಂದರೆ ಹೇಗೆ ಬಿಡುಗಡೆ ಮಾಡಲು ಸಾಧ್ಯ?. ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆಯಡಿಯಲ್ಲಿ 40 ಕೋಟಿ ರೂ. ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ.‌ ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಹಣ ಬಿಡುಗಡೆ ಮಾಡಿರುವುದು ಎಂದು ಹೇಳಿದರು.

ಚಾಮುಂಡಿ ಬೆಟ್ಟವನ್ನು 10ನೇ ಶತಮಾನದಲ್ಲಿ ಗಂಗಾ ಸಂಸ್ಥಾನದವರು ಕಟ್ಟಿಸಿದರು.‌ ನಂತರ ಮೈಸೂರು ರಾಜರು ಸ್ವಲ್ಪ ಅಭಿವೃದ್ಧಿ ಪಡಿಸಿದ್ದಾರೆ. ಅಷ್ಟು ಮಾತ್ರಕ್ಕೆ ನಮ್ಮದೇ ದೇವಸ್ಥಾನ ಎನ್ನಲು ಸಾಧ್ಯವೇ?. ಚಾಮುಂಡಿ ಬೆಟ್ಟದಲ್ಲಿರುವ ಹೋಟೆಲ್ ಮಾತ್ರ ರಾಜವಂಶಸ್ಥರಿಗೆ ಸೇರಿರುವುದು ಎಂದು ಹೇಳಿದರು.

ಪ್ರಾಧಿಕಾರ ಬೇಕು ಎಂದವರೇ ವಿರೋಧ ಮಾಡುತ್ತಿರುವುದು ದುರದೃಷ್ಟಕರ:

ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಯಾಗಬೇಕು ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಪ್ರಮೋದಾದೇವಿ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಜಿ.ಟಿ.ದೇವೇಗೌಡ ಯುಟರ್ನ್‌ ಹೊಡೆದಿರುವುದು ದುರದೃಷ್ಟಕರ ಎಂದು ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಮಾಜಿ ಜಿ.ಪಂ‌.ಸದಸ್ಯ ಬಿ.ಎಂ.ರಾಮು, ಕೆಪಿಸಿಸಿ ಸಂಯೋಜಕ ಎನ್.ಭಾಸ್ಕರ್, ಕಾಂಗ್ರೆಸ್ ಮುಖಂಡ ಎಂ.ಶಿವಣ್ಣ, ಮಾಧ್ಯಮ ವಕ್ತಾರ ಮಹೇಶ್, ಗಿರೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X