Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. 10 ವರ್ಷ ಅಧಿಕಾರ ನಡೆಸಿದ ಮೋದಿ ಸರಕಾರ...

10 ವರ್ಷ ಅಧಿಕಾರ ನಡೆಸಿದ ಮೋದಿ ಸರಕಾರ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

"ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳು ಸೇರಿ ಕನಿಷ್ಠ 20 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೇವೆ"

ವಾರ್ತಾಭಾರತಿವಾರ್ತಾಭಾರತಿ24 March 2024 4:58 PM IST
share
10 ವರ್ಷ ಅಧಿಕಾರ ನಡೆಸಿದ ಮೋದಿ ಸರಕಾರ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: "ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

"ಮೈಸೂರು, ಚಾಮರಾಜನಗರ ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ 'ಕೈ'ಗೆ ಬರಲೇಬೇಕು. ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ" ಎಂದರು.

ʼನಾವು ನಡೆಸಿರುವ ಹಲವು‌ ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ನುವ ವರದಿಗಳು ಬಂದಿವೆ. ಹೀಗಾಗಿ‌ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆʼ ಎಂದು‌ ವಿಶ್ವಾಸದಿಂದ ನುಡಿದರು.

10 ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ

"10 ವರ್ಷ ಅಧಿಕಾರ ನಡೆಸಿದ ಮೋದಿ ಸರಕಾರ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮ ಇದ್ದಾನೆ" ಎಂದರು.‌

"10 ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ 10 ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ" ಎಂದರು.

ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ

ಸಮಾಜದಲ್ಲಿರುವ ಅಸಮಾನತೆ ಹೋಗಬೇಕು. ಆದರೆ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಬಿರುಕು ಮೂಡಿದಷ್ಟೂ ಅಸಮಾನತೆ ಬೆಳೆಯುತ್ತದೆ ಎಂದರು.

ಶ್ರೀರಾಮಚಂದ್ರ, ಸೀತಾ , ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು‌. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತಾರೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇವೆ. ನನ್ನ ಹೆಸರಿನಲ್ಲೇ ರಾಮ ಇದ್ದಾನೆ ಎಂದರು.

ನಮ್ಮ ಕಾಂಗ್ರೆಸ್ ಸರಕಾರದ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಿಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿ ಮತ್ತು ನರೇಂದ್ರ ಮೋದಿ ಹೇಳಿದ್ದರಲ್ಲಿ ಒಂದನ್ನೂ ಮಾಡಿಲ್ಲ ಎಂದು ಅವರ ವಿಫಲ ಅಶ್ವಾಸನೆಗಳ ಪಟ್ಟಿಯನ್ನೇ ನೀಡಿದರು.

ಸೆಕ್ಯುಲರ್ ಏನಾಯ್ತು?

ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಸೇರಿದ್ದಾರೆ. ತಮ್ಮ ಅಳಿಯ ಮಂಜುನಾಥ್ ಅವರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ಆಮೇಲೆ ನಾವೂ ಬರ್ತೀವಿ ಎನ್ನುವ ರೀತಿ ಅಳಿಯನನ್ನು ಬಿಜೆಪಿಗೆ ಕಳಿಸಿದ್ದಾರೆ. ಅದಕ್ಕೇ ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ ಎಂದು ಸಲಹೆ ನೀಡಿದರು.

ನಮ್ಮ ಪಾಲು ಕೇಳುವುದಕ್ಕೆ ಸುಪ್ರೀಂಕೋರ್ಟ್ ಗೆ ಹೋಗಬೇಕಾಯ್ತು

ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರ ಒಂದೇ ಒಂದು ರೂಪಾಯಿ ಬಂದಿಲ್ಲ. ಮೊದಲು ರಾಜ್ಯದ ಜನರಿಗೆ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ಅಕ್ಕಿ ಕೊಡಿ ಅಂದರೂ ಕೊಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ಲವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದು ಪ್ರಶ್ನಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಆಶ್ರಯ ಯೋಜನೆ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಸೇರಿ ಮೂರು ಜಿಲ್ಲೆಗಳ ಎಲ್ಲಾ ಶಾಸಕರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X