Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ದಲೈವಾಲಾ ಅವರ ಪ್ರಾಣ ಉಳಿಸಲು...

ಮೈಸೂರು | ದಲೈವಾಲಾ ಅವರ ಪ್ರಾಣ ಉಳಿಸಲು ರಾಷ್ಟ್ರಪತಿ, ಪ್ರಧಾನಿ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Jan 2025 10:37 PM IST
share
ಮೈಸೂರು | ದಲೈವಾಲಾ ಅವರ ಪ್ರಾಣ ಉಳಿಸಲು ರಾಷ್ಟ್ರಪತಿ, ಪ್ರಧಾನಿ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಮೈಸೂರು : ರೈತರ ವಿವಿಧ ಬೇಡಿಕೆ ಈಡೇರಿಕೆಗೆ ದೆಹಲಿ ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ ಅವರ ಪ್ರಾಣ ಉಳಿಸಲು ರಾಷ್ಟ್ರಪತಿ, ಪ್ರಧಾನಿ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ರೈತರ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತರಿ, ಸಾಲ ಮನ್ನಾ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲೈವಾಲ ಅವರು ನ.26ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸತ್ಯಾಗ್ರಹ 48ನೇ ದಿನಕ್ಕೆ ಕಾಲಿಟ್ಟಿದ್ದು ದೇಹ ನಿತ್ರಾಣಗೊಂಡು ರಕ್ತದೊತ್ತಡ ಕೂಡ ಅಪಾಯಕಾರಿ ಮಟ್ಟಕ್ಕೆ ಕುಸಿದಿದೆ. ಯಾವಾಗ ಬೇಕಾದರೂ ಪ್ರಾಣ ಹೋಗುವಂತಹ ಸನ್ನಿವೇಶ ನಿರ್ಮಾಣವಾಗಿದೆ. ರೈತ ನಾಯಕನ ಈ ಸ್ಥಿತಿಗೆ ತಲುಪಲು ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಕಿಡಿಕಾರಿದರು.

ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ರೈತರ ಜೀವನ ಹಾಗೂ ಕೃಷಿ ರಕ್ಷಣೆಗೆ ಬಹಳ ಅಗತ್ಯವಿದ್ದ ಕರಾಳ ಕೃಷಿ ಕಾಯ್ದೆಗಳ ರದ್ದತಿ, ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಸೇರಿದಂತೆ ಹಲವು ಹಕ್ಕೋತ್ತಾಯಗಳನ್ನು ಮುಂದಿಟ್ಟಿತ್ತು. 385 ದಿನಗಳ ಅನಿರ್ದಿಷ್ಟ ಹೋರಾಟದ ನಂತರ ರೈತ ಹೋರಾಟಕ್ಕೆ ಮಣಿದ ಸರಕಾರ, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ ಉಳಿದ ಹಕ್ಕೋತ್ತಾಯಗಳನ್ನು ಈಡೇರಿಸಲು ಲಿಖಿತ ಭರವಸೆ ನೀಡಿತ್ತು. ಆದರೆ ಸರಕಾರ ಈ ಭರವಸೆಗೆ ವಿರುದ್ಧವಾಗಿ ನಡೆದುಕೊಂಡಿದೆ. ದೇಶಾದ್ಯಂತ ಎಲ್ಲಾ ರೈತರ ಪಂಪಸೆಟ್‌ಗಳಿಗೆ ಮೀಟರ್ ಅಳವಡಿಸಿ ವಿದ್ಯುತ್ ಪಾವತಿ ಮಾಡುವಂತೆ ಬಲವಂತದಿಂದ ಆಧಾರ್ ಕಾರ್ಡ್ ಜೋಡಣೆ ಪೂರ್ಣಗೊಳಿಸಿದೆ. ರೈತರ ಬೆಳೆಗಳನ್ನು ಸಕಾಲದಲ್ಲಿ ಖರೀದಿಸುತ್ತಿಲ್ಲ. ರೈತ ವಿರೋಧಿ ಧೋರಣೆ, ರೈತರ ಆಗ್ರಹಗಳನ್ನು ನಿರ್ಲಕ್ಷ ಮಾಡಿದ್ದರ ಫಲವಾಗಿ ರೈತ ನಾಯಕರ ಪ್ರಾಣ ಹೋಗುವಂತಹ ಪರಿಸ್ಥಿತಿ ಉಂಟಾಗಿದೆ. ಕೂಡಲೇ ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಬೇಕು. ರಾಜ್ಯ ಸರ್ಕಾರ ಕೂಡ ರೈತ ನಾಯಕರ ಪ್ರಾಣ ಉಳಿಸಲು ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರಧಾನ ಮಂತ್ರಿಗೆ ಪತ್ರ ಬರೆಯಬೇಕು ಎಂದು ಆಗ್ರಹಿಸಿದರು.

ಹಕ್ಕೋತ್ತಾಯಗಳು: ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ ಪ್ರಾಣ ಉಳಿಸಲು ಕ್ರಮವಹಿಸಿ ಹೋರಾಟ ನಿರತರ ಜತೆಗೆ ಮಾತುಕತೆ ಆರಂಭಿಸಬೇಕು. ಎಲ್ಲಾ ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿ ಮಾಡಬೇಕು. ರೈತರ ಎಲ್ಲಾ ರೀತಿಯ ಕೃಷಿ ಸಾಲ ಮನ್ನಾ ಮಾಡಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು. 60 ವರ್ಷ ದಾಟಿರುವ ಎಲ್ಲಾ ಕೃಷಿಕರಿಗೆ 5000 ಮಾಸಿಕ ಪಿಂಚಣಿ ನೀಡಬೇಕು. ದೆಹಲಿ ರೈತ ಹೋರಾಟ ಮುಂದಿಟ್ಟಿದ್ದ ಎಲ್ಲಾ ಹಕ್ಕೊತ್ತಾಯಗಳನ್ನು ಈಡೇರಿಸಬೇಕು. ರೈತ ವಿರೋಧಿ, ಕರಾಳ ಕೃಷಿ ಕಾಯ್ದೆಯ ತದ್ರೂಪಾಗಿರುವ ಕೃಷಿ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ಧೋರಣೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಹೊಸಕೋಟೆ ಬಸವರಾಜು, ಮರಂಕಯ್ಯ, ಹೊಸೂರು ಕುಮಾರ್, ಉಗ್ರ ನರಸಿಂಹೇಗೌಡ, ಜಯರಾಂ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X