Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು ದಸರಾ | ಬಾನಂಗಳದಲ್ಲಿ ಲೋಹದ...

ಮೈಸೂರು ದಸರಾ | ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ; ಜನರ ಮನಸೂರೆಗೊಂಡ ವೈಮಾನಿಕ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ27 Sept 2025 11:48 PM IST
share
ಮೈಸೂರು ದಸರಾ | ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ; ಜನರ ಮನಸೂರೆಗೊಂಡ ವೈಮಾನಿಕ ಪ್ರದರ್ಶನ

ಮೈಸೂರು, ಸೆ.27: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶನಿವಾರ ಸಂಜೆ ಬಾನಂಗಳದಲ್ಲಿ ಬಣ್ಣಗಳ ಚಿತ್ತಾರ ಮೂಡಿತು. ಮಳೆ ಸುರಿದ ಆಕಾಶದಲ್ಲಿ ಮೂಡಿದ ಕಾಮನಬಿಲ್ಲು, ಸಾರಂಗ ತಂಡ ಮೂಡಿಸಿದ ಚಿತ್ತಾರವೂ ದಸರಾ ಸಂಭ್ರಮದಲ್ಲಿದ್ದ ಮೈಸೂರಿನ ಜನತೆಯ ಮನಗಳಿಗೆ ಬಣ್ಣ ತುಂಬಿತು.

ಕೆಂಪು ಮತ್ತು ಬಿಳಿ ಬಣ್ಣದ ಹೊಗೆಯನ್ನಾರಿಸುವುದರ ಜೊತೆಗೆ ಬೆಂಕಿಯ ಉಂಡೆಗಳನ್ನು ಉಗುಳುತ್ತಾ ನಾ ಮುಂದೆ, ನೀ ನನ್ನ ಹಿಂದೆ ಎಂಬಂತೆ ಬಾನಂಗಳದಲ್ಲಿ ಲೋಹದ ಹಕ್ಕಿಗಳು ವೈಮಾನಿಕ ಹಾರಾಟದ ಮೂಲಕ ತನ್ನ ಯಶಸ್ಸು ಮತ್ತು ಧೈರ್ಯವನ್ನು ಪ್ರದರ್ಶಿಸುತ್ತಿದ್ದರೆ, ಇತ್ತ ಮೈಸೂರಿನ ಜನರು ಶಿಳ್ಳೆ, ಚಪ್ಪಾಳೆ ಹಾಗೂ ಜೋರಾದ ಚೀತ್ಕಾರದೊಂದಿಗೆ ಸಂಭ್ರಮಿಸಿದರು.

ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಭಾರತೀಯ ವಾಯುಪಡೆ(ಐಎಎಫ್) ಸಾರಂಗ ತಂಡದಿಂದ ನಡೆದ ವೈಮಾನಿಕ ಪ್ರದರ್ಶನದಲ್ಲಿ ನವಿಲಿನ ಚಿತ್ತಾರವಿರುವ ಲೋಹದ ಹಕ್ಕಿಗಳ ಚಮತ್ಕಾರಿ ಪ್ರದರ್ಶನಕ್ಕೆ ನೆರದಿದ್ದವರು ಮಾರು ಹೋದರು.




ಸುಮಾರು 22 ರಿಂದ 25 ನಿಮಿಷಗಳ ಕಾಲ ಶರವೇಗದಲ್ಲಿ ನಡೆದಂತಹ ವೈಮಾನಿಕ ಹಾರಾಟದಲ್ಲಿ ಡಾಲ್ಫೀನ್ ಸ್ಲೀಪ್, ಸಾರಂಗ್ ಸ್ಪ್ಲೀಟ್, ಹಾರ್ಟ್ ಫಾರ್ಮೇಷನ್, ಡಿವೈನ್ ಗ್ಲಾಸ್, ಡಬಲ್ ಏರೋ ಕ್ರಾಸ್ ಸೇರಿದಂತೆ ಒಟ್ಟು 16 ರೀತಿಯ ಮಾದರಿಗಳನ್ನು ವೈಮಾನಿಕ ಪ್ರದರ್ಶನದಲ್ಲಿ ಪ್ರದರ್ಶಿಸಲಾಯಿತು.

ಇದಕ್ಕಾಗಿ ಒಟ್ಟು 70 ಸಿಬ್ಬಂದಿ ಶ್ರಮಿಸಿದ್ದು, ಐದು ಸಾರಂಗಗಳು ಅತ್ಯದ್ಭುತವಾದ ಪ್ರದರ್ಶನ ನೀಡುವ ಮೂಲಕ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಮಂದಿಯ ಮನಸ್ಸನ್ನು ಸೂರೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಡಿ.ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ವಿವೇಕಾನಂದ, ಕೆ.ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಮತ್ತಿತರರು ಉಪಸ್ಥಿತರಿದ್ದರು.

ಅತೀವ ನಿರೀಕ್ಷೆ ಮೂಡಿಸಿದ್ದ ಹೆಲಿಕಾಪ್ಟರ್ ಪ್ರದರ್ಶನವೂ 20 ನಿಮಿಷಗಳಲ್ಲಿ ಮುಕ್ತಾಯಗೊಂಡಿದ್ದು, ಜನರಲ್ಲಿ ನಿರಾಸೆ ಮೂಡಿಸಿತು. ವೈಮಾನಿಕ ಪ್ರದರ್ಶನ ವೀಕ್ಷಿಸಬೇಕೆಂದು ಪಾಸ್ ಪಡೆದು, ಮೈಸೂರಿನ ಸಂಚಾರ ದಟ್ಟಣೆಯನ್ನು ಸಹಿಸಿಕೊಂಡು ಬನ್ನಿಮಂಟಪದ ಮೈದಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದಿದ್ದರು. ಒಳ ಬರಲಾಗದೇ ಸಾವಿರಾರು ಜನರು ಹೊರಗೆ ಇದ್ದರು. 20 ನಿಮಿಷದಲ್ಲಿ ಪ್ರದರ್ಶನ ಮುಗಿದಿದ್ದರಿಂದ ನಿರಾಸೆಯಿಂದ ಅವರು ಮರಳಿದರು.

ದಸರಾ ವೇಳೆ ಮೈಸೂರಲ್ಲಿ ವೈಮಾನಿಕ ಪ್ರದರ್ಶನ ನಡೆಸುವುದು ಅದ್ಭುತವಾದ ಅನುಭವ. ಮೈಸೂರಿನ ವಾತಾವರಣ, ಜನ ಸಮೂಹದ ಎದುರು ಪ್ರದರ್ಶನ ನೀಡುವುದು ರೋಮಾಂಚನಕಾರಿ. ಎಲ್ಲ ವೈಮಾನಿಕ ಪ್ರದರ್ಶನಗಳಲ್ಲೂ ಸವಾಲುಗಳಿರುತ್ತವೆ. ಆದರೂ ನಮ್ಮ ತಂಡ ಉತ್ತಮ ಪ್ರದರ್ಶನ ನೀಡಿದೆ. ರೋಮಾಂಚನಕಾರಿ ಪ್ರದರ್ಶನವೂ ಮೈಸೂರಿನ ಜನತೆಯನ್ನು ರಂಜಿಸಿದೆ.

-ಪಲ್ಲವಿ, ಸಾರಂಗ ತಂಡದ ಸದಸ್ಯೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X