ಮೈಸೂರು | ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು

ಸಾಂದರ್ಭಿಕ ಚಿತ್ರ | PC : freepik
ಮೈಸೂರು: ಮೈಸೂರಿನ ಪಕ್ಷಿರಾಜಪುರ ಬಳಿಯ ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಪ್ರವಾಸಕ್ಕೆಂದು ಬಂದಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಮಂಡ್ಯದ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಾದ ಪ್ರಶಾಂತ್, ಸಿದ್ಧ ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ.
ಮೂವರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬಂದು ಪಕ್ಷಿರಾಜಪುರ ಕೆ.ಆರ್.ಎಸ್. ಹಿನ್ನೀರಿನಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಪತ್ತೆ ಮಾಡಿದ್ದಾರೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





