Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. Mysuru |10 ವರ್ಷದ ಬಾಲಕಿಯ...

Mysuru |10 ವರ್ಷದ ಬಾಲಕಿಯ ಅತ್ಯಾಚಾರ-ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ

ಪೊಕ್ಸೊ ವಿಶೇಷ ನ್ಯಾಯಾಲಯ ತೀರ್ಪು

ವಾರ್ತಾಭಾರತಿವಾರ್ತಾಭಾರತಿ17 Oct 2026 12:40 PM IST
share
Mysuru |10 ವರ್ಷದ ಬಾಲಕಿಯ ಅತ್ಯಾಚಾರ-ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ

ಮೈಸೂರು: ಕಳೆದ ವರ್ಷ ಮೈಸೂರು ದಸರಾದಲ್ಲಿ ಬಲೂನ್ ಮಾರಾಟ ಮಾಡಲು ಉತ್ತರ ಕರ್ನಾಟಕದಿಂದ ಬಂದಿದ್ದ ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದ ಆರೋಪಿ ಸಿದ್ಧಲಿಂಗಪುರದ ಕಾರ್ತಿಕ್(31)ನಿಗೆ ಮೈಸೂರು ಜಿಲ್ಲಾ ಪೊಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಗಲ್ಲು ಶಿಕ್ಷ ವಿಧಿಸಿ ಆದೇಶಿಸಿದ್ದಾರೆ.

ಮೈಸೂರಿನ ಸಿದ್ದಲಿಂಗಪುರದ ನಿವಾಸಿಯಾಗಿರುವ ಕಾರ್ತಿಕ್ ದೋಷಿ ಎಂದು ಪೊಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಆನಂದ ಪಿ. ಹೊಗಾಡೆ ಗುರುವಾರ ತೀರ್ಪು ಪ್ರಕಟಿಸಿದ್ದರು. ಇಂದು ಅಪರಾಧಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ.

ಸರಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ಸರಕಾರದ ಪರ ವಾದ ಮಂಡಿಸಿದ್ದರು. ಜಿಲ್ಲಾ ಕಾನೂನು ಘಟಕದ ಮಾಚಂಗಡ ಎಸ್.ನವೀನ್ ಆರೋಪಿ ಪರವಾಗಿ ವಕಾಲತ್ತು ವಹಿಸಿದ್ದರು.

ಏನಿದು ಪ್ರಕರಣ?:

2025ರ ದಸರಾದಲ್ಲಿ ಬಲೂನ್ ಮಾರಲು ಕಲಬುರಗಿಯಿಂದ ಮೈಸೂರಿಗೆ ಬಂದಿದ್ದ ಕುಟುಂಬವು ಮೈಸೂರಿನ ಹೃದಯ ಭಾಗವಾದ ದೊಡ್ಡಕೆರೆ ಮೈದಾನದ ವಸ್ತು ಪ್ರದರ್ಶನ ಪಕ್ಕದ ಜಾಗದಲ್ಲಿ ಟೆಂಟ್ ಹಾಕಿಕೊಂಡು ವಾಸ್ತವ್ಯ ಹೂಡಿತ್ತು. ದಸರಾ ಮುಗಿದ ಬಳಿಕ ಚಾಮುಂಡಿ ಬೆಟ್ಟದಲ್ಲಿ ತಪ್ಪೋತ್ಸವ ಮುಗಿಸಿಕೊಂಡು ಹೋಗಲು ಸಿದ್ಧರಾಗಿದ್ದರು. ಆದರೆ ಅಕ್ಟೋಬರ್ 9ರಂದು ಮುಂಜಾವ ಈ ಕುಟುಂಬಕ್ಕೆ ಸೇರಿದ್ದ 10 ವರ್ಷದ ಬಾಲಕಿಯನ್ನು ಮಲಗಿದ್ದಲ್ಲಿಂದ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಗಿ ಇರಿದು ಕೊಲೆ ಮಾಡಲಾಗಿತ್ತು. ಬೆಳಗ್ಗೆ ವಸ್ತುಪ್ರದರ್ಶನ ಮೈದಾನದ ವಾಹನ ಪಾರ್ಕಿಂಗ್ ಸ್ಥಳದ ಹಿಂಭಾಗವಿರುವ ಚರಂಡಿಯ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಬಾಲಕಿಯ ಕಿವಿ, ಕೆನ್ನೆ, ಗಲ್ಲ ಕತ್ತರಿಸಲ್ಪಟ್ಟಿತ್ತು ಎಂದು ಪೊಲೀಸರು ತಿಳಿಸಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ನಝರ್ ಬಾದ್ ಪೊಲೀಸರು ಆರೋಪಿ, ಬಸ್ ಕ್ಲೀನರ್ ಆಗಿದ್ದ ಕಾರ್ತಿಕ್ ನನ್ನು ಕೃತ್ಯ ನಡೆದ 24 ಗಂಟೆಯೊಳಗೆ ಕೊಳ್ಳೇಗಾಲದಲ್ಲಿ ಪತ್ತೆಹಚ್ಚಿ ಬಂಧಿಸಿದ್ದರು.

ಮಹಜರು ವೇಳೆ ಸಿದ್ದಲಿಂಗಪುರಕ್ಕೆ ಕರೆದೊಯ್ದು ವಾಪಸ್ ಬರುತ್ತಿದ್ದ ವೇಳೆ ಕಾರ್ತಿಕ್ ಮೇಟಗಳ್ಳಿ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಮತ್ತೆ ವಶಕ್ಕೆ ಪಡೆದಿದ್ದರು. ತನಿಖೆಯ ಬಳಿಕ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪೊಕ್ಸೊ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬಿ.ಜಯಂತಿ ಎಲ್ಲಾ ಸಾಕ್ಷಿಗಳನ್ನು ಸಮಗ್ರವಾಗಿ ಕಲೆಹಾಕಿ ಆರೋಪಿ ಕಾರ್ತಿಕ್ ಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಂಡಿದ್ದರು.

Tags

Mysuru10-Year-Old Girl Rape & Murder CaseDeath Penalty
share
ವಾರ್ತಾಭಾರತಿ
ವಾರ್ತಾಭಾರತಿ
Next Story
X