Mysuru | ಇಟ್ಟಿಗೆ ಕಾರ್ಖಾನೆಯಲ್ಲಿ ಜೀತಕ್ಕಿದ್ದ 18 ಮಂದಿಯ ರಕ್ಷಣೆ: ಮೂವರ ಬಂಧನ

ಸಾಂದರ್ಭಿಕ ಚಿತ್ರ | PC : Gemini AI
ಮೈಸೂರು : ಟಿ.ನರಸೀಪುರ ತಾಲ್ಲೂಕಿನ ಬೇವಿನಹಳ್ಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಜೀತಕ್ಕಿದ್ದು ಬೇರೆಡೆಗೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ದಂಪತಿಯ ಇಬ್ಬರು ಮಕ್ಕಳನ್ನು ಇಟ್ಟಿಗೆ ಕಾರ್ಖಾನೆ ಮಾಲೀಕರು ಬೆದರಿಸಿ ಕೂಲಿಗೆ ಇಟ್ಟುಕೊಂಡಿದ್ದ ಕಾರ್ಖಾನೆ ಮೇಲೆ ದಾಳಿ ನಡೆಸಿ 11 ವರ್ಷ ಮತ್ತು 13 ವರ್ಷದ ಇಬ್ಬರು ಮಕ್ಕಳು ಸೇರಿದಂತೆ 18 ಮಂದಿಯನ್ನು ರಕ್ಷಿಸಲಾಗಿದೆ.
ಜೀತದಾಳುಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸರ ಸಹಾಯ ಪಡೆದು ಬೇವಿನಹಳ್ಳಿಯ ಇಟ್ಟಿಗೆ ಕಾರ್ಖಾನೆ ಮೇಲೆ ದಾಳಿ ನಡೆಸಿದೆ.
ಇಟ್ಟಿಗೆ ಕಾರ್ಖಾನೆಯ ಮಾಲೀಕರಾದ ಯತಿರಾಜ್, ಗಿರೀಶ್, ಮಹದೇವ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




