ಡಿಕೆಶಿ ಸರಕಾರಕ್ಕೆ ಶತ ದಿನಗಳ ಸಂಭ್ರಮ; ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಮೈಸೂರು ಅರಮನೆ

ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಗುರುವಾರ ವರ್ಣರಂಜಿತ ವಿದ್ಯುತ್ ದೀಪಾಲಂಕಾರದಿಂದ ಸಾರ್ವಜನಿಕರ ಕಣ್ಮನ ಸೆಳೆಯಿತು.
ಮೈಸೂರು ಅರಮನೆ ವರ್ಣರಂಜಿತ ದೀಪಾಲಂಕಾರದಿಂದ ಜಗಮಗಿಸಿದರೆ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದ ಬಳಿ ಸರಕಾರದ ಅಭಿವೃದ್ಧಿ ಯೋಜನೆ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಯಶೋಗಾಥೆಯನ್ನು ಬಿಂಬಿಸುವ ಮನಮೋಹಕ ಎಲ್‌ಇಡಿ ಪ್ರದರ್ಶನ ನಡೆಯಿತು.
Next Story




