Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. Mysuru | ಬರಗಾಲದಲ್ಲಿ ಕಂಬಳ ಆಯೋಜಿಸಿರುವ...

Mysuru | ಬರಗಾಲದಲ್ಲಿ ಕಂಬಳ ಆಯೋಜಿಸಿರುವ ಸರಕಾರದ ನಡೆ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Oct 2026 12:40 AM IST
share
Mysuru | ಬರಗಾಲದಲ್ಲಿ ಕಂಬಳ ಆಯೋಜಿಸಿರುವ ಸರಕಾರದ ನಡೆ ಖಂಡಿಸಿ ಪ್ರತಿಭಟನೆ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಮಾಡಲೇಬೇಕು ಎಂಬ ಸರಕಾರದ ಹಠಮಾರಿ ಧೋರಣೆಯನ್ನು ಖಂಡಿಸಿ ನಗರದ ಸಮೀಪದ ಸಾತಗಳ್ಳಿಯ ಕಂಬಳ ನಡೆಯುವ ಜಾಗದಲ್ಲಿ ರೈತ ಸಂಘ, ದಸಂಸ, ‘ಪರಿಸರಕ್ಕಾಗಿ ನಾವು’ ಸಂಘಟನೆ, ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳು ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಬರಗಾಲದಲ್ಲಿ ಕಂಬಳ ಆಯೋಜಿಸುವುದನ್ನು ಖಂಡಿಸಿದರು.

ಈ ವೇಳೆ ಪರಿಸರಕ್ಕಾಗಿ ನಾವು’ ಸಂಘಟನೆಯ ರಾಜ್ಯಾಧ್ಯಕ್ಷ ಎ.ಟಿ.ರಾಮಸ್ವಾಮಿ ಮಾತನಾಡಿ, ತೀವ್ರ ಬರಗಾಲದಲ್ಲಿ ರಾಜ್ಯ ಸರಕಾರ ಕಂಬಳವನ್ನು ಆಯೋಜಿಸಲು ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಕಂಬಳ ಮೈಸೂರಿನ ಸಾಂಸ್ಕೃತಿಕತೆಯನ್ನು ಹಾಳು ಮಾಡುತ್ತದೆ ಎಂದು ಹೇಳಿದರು.

ಕಂಬಳಕ್ಕೆ ತಡೆ: ವಿರೋಧದ ನಡುವೆಯೂ ಕಂಬಳ ಆಯೋಜಿಸುತ್ತಿರುವ ಸರಕಾರ ಮೋಜಿಗಾಗಿ ಕಂಬಳ ಆಯೋಜಿಸುತ್ತಿದೆ. ಸರಕಾರವೂ ಸರ್ವಾಧಿಕಾರಿಯಾಗಿ ವರ್ತಿಸುತ್ತಿದೆ. ದಸರಾದಲ್ಲಿ ಕಂಬಳ ಆಯೋಜಿಸಲು ಪ್ರತಿಷ್ಠೆ ಯಾಕೇ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಮೈಸೂರು ಪ್ರವೇಶಿಸುವ ಕೋಣಗಳನ್ನು ಪಿರಿಯಾಪಟ್ಟಣದಲ್ಲಿ ತಡೆಯುವ ಹೋರಾಟ ರೂಪಿಸಬೇಕು. ಈ ಹೋರಾಟಕ್ಕೆ ಸಾವಿರ ರೈತರನ್ನು ಸೇರಿಸುತ್ತೇವೆ. ಕಂಬಳ ಬೇಡವೆಂದು ಸಿಎಂ, ಉಸ್ತುವಾರಿ ಸಚಿವರು, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆವು. ಈ ಸರಕಾರ ಯಾರ ಮನವಿಯನ್ನು ಕೇಳಿಸಿಕೊಳ್ಳುತ್ತಿಲ್ಲ. ಹೋರಾಟ, ಸತ್ಯಾಗ್ರಹಕ್ಕೆ ಬೆಲೆ ಕೊಡದಂತೆ ಅನಾಗರಿಕವಾಗಿ ವರ್ತಿಸುತ್ತಿದೆ ಎಂದರು.

ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ದಸಂಸ ಮುಖಂಡ ಬೆಟ್ಟಯ್ಯ ಕೋಟೆ, ಕೆಆರ್‌ಎಸ್ ಪಕ್ಷದ ರವಿಕುಮಾರ್, ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ, ರೈತ ಮುಖಂಡ ಕೆಂಪೂಗೌಡ ಎ.ಎಲ್. ಮಾತನಾಡಿದರು.

ಪ್ರತಿಭಟನೆಯಲ್ಲಿ ಪರಶುರಾಮೇಗೌಡ, ಇತಿಹಾಸ ತಜ್ಞ ಪ್ರೊ.ಎನ್.ಎಸ್ ರಂಗರಾಜು, ಮ.ಗು.ಸದಾನಂದಯ್ಯ, ಮನ್ಸೂರ್ ಅಹ್ಮದ್, ಕೆ.ಬಿ.ಗುರುಸ್ವಾಮಿ, ಲೀಲಾ ಶಿವಕುಮಾರ್, ಭಾಗ್ಯ ಶಂಕರ್, ಅಂಜನಾ, ಸ್ಮಿತಾ, ಮಧುಶ್ರೀ, ವರ್ಷಿಣಿ, ಪವಿತ್ರ, ಸುಶೀಲಾ, ಅಕ್ಬರ್, ಭಾನುಪ್ರಶಾಂತ್, ಶೈಲಜೇಶ್, ವಿಶ್ವನಾಥ್, ಗಣೇಶ್, ಗೋಪಾಲ್, ವಿದ್ವತ್, ರಾಕೇಶ್, ಐಶ್ವರ್ಯ, ಜಯಲಕ್ಷ್ಮೀ, ಸುಲೋಚನಾ, ಸೃಷ್ಟಿ, ಶ್ರೇಷ್ಠ, ಚೇತನ್, ಮಾದೇಗೌಡ, ಪ್ರೊ.ಎಂ.ಆರ್.ಜನಾರ್ದನ್, ಹೊಸೂರು ಕುಮಾರ್, ಪಿ.ಮರಂಕಯ್ಯ, ದಸಂಸ ಮೈಸೂರು ತಾಲೂಕು ಸಂಚಾಲಕ ಕಲ್ಲಹಳ್ಳಿ ಕುಮಾರ್ ಉಮೇಶ್ ಗೌಡ, ಕೃಷ್ಣ, ಕೆ.ಟಿ.ಗೋವಿಂದೇಗೌಡ, ಸ್ವರ್ಣ, ರೂಪಾ, ಮಾಲತೇಶ್ ಹಲವರು ಭಾಗವಹಿಸಿದ್ದರು.

ಕಂಬಳ ರದ್ದುಪಡಿಸುವಂತೆ ಅ.7ರಂದು ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು. ಎ.ಟಿ.ರಾಮಸ್ವಾಮಿ, ಬಡಗಲಪುರ ನಾಗೇಂದ್ರ, ಕುರುಬೂರು ಶಾಂತಕುಮಾರ್, ಗುರುಪ್ರಸಾದ್ ಕೆರಗೋಡು, ಬೆಟ್ಟಯ್ಯ ಕೋಟೆ, ಎಸ್.ನಾರಾಯಣ, ಕೆ.ಎಸ್.ನಂಜುಂಡೇಗೌಡ, ಭಾನುಮೋಹನ್ ಅವರನ್ನೊಳಗೊಂಡ 15 ಜನರ ಸಮಿತಿ ರಚನೆ ಮಾಡಿದ್ದು, ಅ.13ರ ನಂತರ ಹೋರಾಟದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಪರಶುರಾಮೇಗೌಡ, ಕಾರ್ಯದರ್ಶಿ, ಪರಿಸರಕ್ಕಾಗಿ ನಾವು ಸಂಘಟನೆ

Tags

mysuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X