Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು ದಸರಾ; ಅರಮನೆಯಲ್ಲಿ...

ಮೈಸೂರು ದಸರಾ; ಅರಮನೆಯಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿದ ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ

ವಾರ್ತಾಭಾರತಿವಾರ್ತಾಭಾರತಿ5 Oct 2026 7:54 PM IST
share
ಮೈಸೂರು ದಸರಾ; ಅರಮನೆಯಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿದ ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ

ಮೈಸೂರು : ಇಲ್ಲಿನ ಅಂಬಾವಿಲಾಸ ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆಯ ಕಾರ್ಯ ಸೋಮವಾರ ಶಾಸ್ತ್ರೋಕ್ತವಾಗಿ ನೆರವೇರಿತು.

ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಖಾಸಗಿ ದರ್ಬಾರ್ ಒಂದಾಗಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸುವ ಸಿಂಹಾಸನವನ್ನು ಜೋಡಣೆ ಮಾಡಿ ಪೂಜೆ ಸಲ್ಲಿಸಲಾಯಿತು.

ಅ.11ರಿಂದ ಅ.21ರವರೆಗೆ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಜರುಗಲಿದ್ದು, ಪ್ರತಿ ದಿನ ಸಂಜೆ ಖಾಸಗಿ ದರ್ಬಾರ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದಸರಾ ಮಹೋತ್ಸವದ ಆರಂಭಕ್ಕೆ ಕೇವಲ 6 ದಿನಗಳಷ್ಟೇ ಬಾಕಿ ಇರುವುದರಿಂದ ವಿಧಿ ವಿಧಾನದಂತೆ ಸಿಂಹಾಸನ ಜೋಡಿಸಿ ದರ್ಬಾರ್‌ಗೆ ಸಿದ್ದತೆ ಮಾಡಲಾಯಿತು.

ಇದುವರೆಗೆ ಅರಮನೆಯ ಸುಪರ್ಧಿಯಲ್ಲಿದ್ದ ಸಿಂಹಾಸನವನ್ನು ಪ್ರಮೋದಾದೇವಿ ಒಡೆಯರ್ ಅವರು ಜಿಲ್ಲಾಡಳಿತದ ವಶಕ್ಕೆ ನೀಡಿದರು. ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಂನಿಂದ ಹೊರತೆಗೆದು ಅರಮನೆ ಪಂಚಾಂಗದಂತೆ ಬೆಳಗ್ಗೆ 10.10ಕ್ಕೆ ಸಿಂಹಾಸನ ಜೋಡಣೆ ಮಾಡಲಾಯಿತು. ಇದಕ್ಕಾಗಿ ಬೆಳಗ್ಗೆ 7ರಿಂದಲೇ ವಿವಿಧ ಪೂಜಾ ಕೈಂಕರ್ಯ ಜರುಗಿದವು. ಪಟ್ಟದ ಕುದುರೆ, ಪಟ್ಟದ ಹಸುವನ್ನು ಕಲ್ಯಾಣಮಂಟಪದ ಸಮೀಪ ಇರುವ ಅಂಗಳಕ್ಕೆ ಕರೆತಂದು ಪೂಜಿಸಲಾಯಿತು.

ಜೋಡಣಾ ಕಾರ್ಯ: ಅರಮನೆಯ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್ ರೂಮ್ ತೆರೆದು ಸಿಂಹಾಸನ ಹಾಗೂ ಭದ್ರಾಸನದ ಬಿಡಿ ಭಾಗಗಳನ್ನು ಪ್ರತ್ಯೇಕಿಸಲಾಯಿತು. ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೆ ಬಿಡಿ ಭಾಗವನ್ನು ದರ್ಬಾರ್ ಹಾಲ್‌ಗೆ ತರಲಾಯಿತು. ದರ್ಬಾರ್ ಹಾಲ್‌ನಲ್ಲಿ ಅಳವಡಿಸಿರುವ ಸಿಸಿ ಟಿವಿಗಳನ್ನು ಬಟ್ಟೆಗಳಿಂದ ಮುಚ್ಚಿ ಬಳಿಕ ಸುಮಾರು 14 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಈ ಸಿಂಹಾಸನವನ್ನು ಜೋಡಿಸಿ, ಪರದೆ ಬಿಡಲಾಯಿತು. ದರ್ಬಾರ್ ಹಾಲ್‌ನಲ್ಲಿ ಸಿಂಹಾಸನ, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಿಸಲಾಯಿತು. ಇದೇ ಸಂದರ್ಭದಲ್ಲಿ ತ್ರಿಷಿಕಾ ಕುಮಾರಿ ಒಡೆಯರ್ ಪಾದಪೂಜೆ ನೆರವೇರಿಸಿದರು.

ಸಿಂಹಾಸನದ ಜೋಡಣೆ ವೇಳೆ ಪ್ರಮೋದಾ ದೇವಿ ಒಡೆಯರ್, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಎಸಿಪಿ ಚಂದ್ರಶೇಖರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಅರಮನೆಯಲ್ಲಿ ನೆರವೇರುತ್ತಿದ್ದ ಸಿಂಹಾಸನಾ ಜೋಡಣಾ ಕಾರ್ಯದಿಂದಾಗಿ ಸಾರ್ವಜನಿಕರಿಗೆ ಮಧ್ಯಾಹ್ನ 1 ಗಂಟೆವರೆಗೆ ಅರಮನೆಗೆ ಪ್ರವೇಶ ನಿಷೇಧಿಸಲಾಗಿತ್ತು. ಈ ಎಲ್ಲ ಕಾರ್ಯಗಳನ್ನು ಪೊಲೀಸರ ಬಿಗಿ ಭದ್ರತೆಯಲ್ಲಿ ನಡೆಸಲಾಯಿತು.

ಸಿಂಹಾಸನದ ಬಿಡಿ ಭಾಗಗಳೆಷ್ಟು?

ಸಿಂಹಾಸನದ 8 ಬೆಳ್ಳಿಯ ಭದ್ರಾಸನವನ್ನು 6 ಬಿಡಿಭಾಗಗಳಾಗಿ ವಿಂಗಡಿಸಲಾಗಿರುತ್ತದೆ. ಸಿಂಹಾಸನದ ಬಿಡಿಭಾಗ, ಭದ್ರಾಸನ ಜೋಡಿಸಿದ ಬಳಿಕ, ಸಿಂಹಾಸನಕ್ಕೆ ಉಮಾಪಕ್ಷಿ, ಮುತ್ತಿನ ಜಾಲರಿ, ಮಕರ ತೋರಣ, 25 ಜತೆ ನಗಗಳು, 1 ಜತೆ ಚಿನ್ನದ ಕುದುರೆ, ತುರಾಯಿ ಜೋಡಿ, 1 ಜತೆ ಚಿನ್ನದ ಕಳಶ ಜೋಡಿಸಿ ಅಲಂಕರಿಸಲಾಯಿತು. ಇದರ ಬಿಡಿ ಭಾಗಗಳನ್ನು ಜೋಡಿಸಿ ಅದಕ್ಕೆ ಸಿಂಹದ ಮುಖವನ್ನು ಅಳವಡಿಸಿದಾಗ ಸಿಂಹಾಸನ ಜೋಡಣೆ ಪೂರ್ಣಗೊಳ್ಳುತ್ತದೆ. ಸಿಂಹವನ್ನು ಅ. 11ರಂದು ಜೋಡಿಸಿ ಪೂರ್ಣಗೊಂಡ ಸಿಂಹಾಸನವನ್ನು ದರ್ಬಾರ್ ಸಭಾಂಗಣದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

Tags

Mysuru Dasara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X