Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು ದಸರಾ ದೀಪಾಲಂಕಾರಕ್ಕೆ ಸಚಿವ...

ಮೈಸೂರು ದಸರಾ ದೀಪಾಲಂಕಾರಕ್ಕೆ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 Oct 2026 10:07 PM IST
share
ಮೈಸೂರು ದಸರಾ ದೀಪಾಲಂಕಾರಕ್ಕೆ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

ಮೈಸೂರು : ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ಅವರು ರವಿವಾರ ಚಾಲನೆ ನೀಡಿದರು.

ನಗರದ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ ಹಸಿರು ನಿಶಾನೆ ತೋರಿದರು.

ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ವತಿಯಿಂದ ದಸರಾ ದೀಪಾಲಂಕಾರ ಮಾಡಲಾಗಿದ್ದು, ಕಳೆದ ವರ್ಷಕ್ಕಿಂತಲೂ ಹೆಚ್ಚು ಆಕರ್ಷಣೀಯವಾಗಿ ಈ ಬಾರಿಯ ದೀಪಾಲಂಕಾರ ಕಂಗೊಳಿಸಲಿದೆ‌. ಈ ನಿಟ್ಟಿನಲ್ಲಿ ಎಲ್ಲರೂ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳುವ ಮೂಲಕ ದಸರೆಯನ್ನು ಆನಂದಿಸಬಹುದಾಗಿದ್ದು, ಇಂದಿನಿಂದ‌ 21 ದಿನಗಳ ಕಾಲ ಸ್ಥಳೀಯರು ಹಾಗೂ ಪ್ರವಾಸಿಗರು ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ‌ ಎಂದರು.

4 ದಿನ ಡ್ರೋನ್ ಶೋ: ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಡ್ರೋನ್ ಪ್ರದರ್ಶನ ಈ ಬಾರಿ ಮತ್ತಷ್ಟು ವರ್ಣರಂಜಿತವಾಗಿರಲಿದ್ದು, ರಾಷ್ಟೀಯ ಪಕ್ಷಿ ನವಿಲಿನ ಆಕೃತಿಗೆ 3500 ಡ್ರೋನ್ ಬಳಸಿಕೊಂಡು ಗಿನ್ನಿಸ್ ರೆಕಾರ್ಡ್ ಗೆ ಮುಂದಾಗಿದ್ದು, ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಅ.17, 18, 20 ಮತ್ತು 21 ರಂದು ರಾತ್ರಿ 8 ಗಂಟೆಗೆ ಡ್ರೋನ್ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

146 ಕಿಮೀ ದೀಪಾಲಂಕಾರ:

ದಸರಾ ಹಿನ್ನೆಲೆಯಲ್ಲಿ ಈ ಬಾರಿ ನಗರದ 199 ರಸ್ತೆಗಳ 146 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 123 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಇದರೊಂದಿಗೆ ನಗರದ ಪ್ರಮುಖ ಕಡೆಗಳಲ್ಲಿ ಎಲ್ಇಡಿ ಬಲ್ಬ್ ಗಳಿಂದ ನಿರ್ಮಿಸಲಾದ 80 ವಿವಿಧ ಪ್ರತಿಕೃತಿಗಳನ್ನು ಇರಿಸಲಾಗಿದೆ. ನಿಗದಿಯಂತೆ ಅ.11 ರಿಂದ ಅ.31 ರವರೆಗೆ ವಿದ್ಯುತ್ ದೀಪಾಲಂಕಾರ ನಡೆಯಲಿದೆ ಎಂದು ಹೇಳಿದರು.

ದಸರಾ ದೀಪಾಲಂಕಾರದ ಹಿನ್ನೆಲೆಯಲ್ಲಿ ಇಡೀ ಮೈಸೂರು ನಗರ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದೆ. ಪ್ರಮುಖವಾಗಿ ಅರಮನೆ ಸುತ್ತಲಿನ ರಸ್ತೆಗಳು ಸೇರಿದಂತೆ ಸಯ್ಯಾಜಿರಾವ್‌ ರಸ್ತೆ,ಇರ್ವಿನ್ ರಸ್ತೆ, ಅಲ್ಬರ್ಟ್‌ ವಿಕ್ಟರ್‌ ರಸ್ತೆ, ಜೆಎಲ್‌ಬಿ ರಸ್ತೆ, ಚಾಮರಾಜ ಜೋಡಿರಸ್ತೆ, ಹೊರ ವಲಯದಲ್ಲಿನ ಪ್ರಮುಖ ಹೆದ್ದಾರಿಗಳಿಗೂ ದೀಪಾಲಂಕಾರ ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿರುವ ಪ್ರಮುಖ ವೃತ್ತಗಳಿಗೂ ಆಕರ್ಷಕ ದೀಪಾಲಂಕಾರ ಮಾಡಲಾಗಿದೆ. ಇದಲ್ಲದೆ ದೊಡ್ಡಕೆರೆ ಮೈದಾನ, ಕೆ.ಆರ್‌.ವೃತ್ತ, ಚಾಮರಾಜ ವೃತ್ತ, ಜಯಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ರೈಲ್ವೆ ನಿಲ್ದಾಣ ಸಮೀಪ, ಗನ್‌ಹೌಸ್‌, ಎಲ್‌ಐಸಿ ವೃತ್ತ ಸೇರಿದಂತೆ ವಿವಿಧೆಡೆ ಹಲವು ಕಲಾಕೃತಿಗಳನ್ನು ನಿರ್ಮಿಸಲಾಗಿದೆ.

ಈ ಸಂದರ್ಭದಲ್ಲಿ ಶಾಸಕ ತನ್ವೀರ್ ಸೇಠ್, ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಅರ್ಚನಾ ಎಂ.ಎಸ್ ಸೇರಿದಂತೆ ಸೆಸ್ಕ್ ಅಧಿಕಾರಿಗಳು ಮತ್ತು ಉಪ ಸಮಿತಿ ಸದಸ್ಯರು ಭಾಗವಹಿಸಿದ್ದರು.

Tags

Mysuru Dasara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X