ಮೈಸೂರು: ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ

ಮೈಸೂರು,ಫೆ.17: ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ವಿಶ್ವೇಶ್ವರ ನಗರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಚೇತನ್ (45) ಪತ್ನಿ ರೂಪಾಲಿ (43) ತಾಯಿ ಪ್ರಿಯಂವಧ (62) ಮಗ ಕುಶಾಲ್ (15) ಮೃತರು.
ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಮೃತದೇಹ ಪತ್ತೆಯಾಗಿದ್ದು, ಮನೆಯವರನ್ನು ವಿಷ ನೀಡಿ ಸಾಯಿಸಿ ತಾನು ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಡಿಸಿಪಿ ಜಾನ್ಹವಿ ವಿದ್ಯಾರಣ್ಯಪುರಂ ಇನ್ಸ್‌ಪೆಕ್ಟರ್ ಮೋಹಿತ್ ಸೇರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ವಾರ್ತಾ ಭಾರತಿಯ ವಾಟ್ಸ್ ಆ್ಯಪ್ ಚಾನಲ್ ಗೆ ಸೇರಲು ಕ್ಲಿಕ್ ಮಾಡಿ ►https://whatsapp.com/channel/0029VaA8ju86LwHn9OQpEq28







