Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. Mysuru | ರಾಹುಲ್ ಗಾಂಧಿ ಮೇಲಿನ‌ FIRಗೆ...

Mysuru | ರಾಹುಲ್ ಗಾಂಧಿ ಮೇಲಿನ‌ FIRಗೆ ಖಂಡನೆ : ಆರೆಸ್ಸೆಸ್‌, ಬಿಜೆಪಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ1 Sept 2026 4:32 PM IST
share
Mysuru | ರಾಹುಲ್ ಗಾಂಧಿ ಮೇಲಿನ‌ FIRಗೆ ಖಂಡನೆ : ಆರೆಸ್ಸೆಸ್‌, ಬಿಜೆಪಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಮೈಸೂರು : ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೇಲೆ ಎಫ್.ಐ.ಆರ್ ಹಾಕಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆರೆಸ್ಸೆಸ್‌ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ತಡೆದು ವಶಕ್ಕೆ ಪಡೆದರು.

ನಗರದ ಜೆ.ಎಲ್.ಬಿ.ರಸ್ತೆಯಲ್ಲಿರುವ ಮಾದವ ಕೃಪಾಗೆ ಮಂಗಳವಾರ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಮುಖಂಡ ಹೊಯ್ಸಳ ನೇತೃತ್ವದಲ್ಲಿ ಕಾರ್ಯಕರ್ತರು ಆಗಮಿಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ಅರ್ಧದಲ್ಲೇ ತಡೆದರು. ಇದರಿಂದ ಕೆರಳಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ʼಆರೆಸ್ಸೆಸ್‌ ಷಡ್ಯಂತ್ರದಿಂದ ರಾಹುಲ್ ಗಾಂಧಿ ಅವರ ಮೇಲೆ ಎಫ್.ಐ.ಆರ್ ಹಾಕಲಾಗಿದೆ. ಇದು ಅತ್ಯಂತ ಖಂಡನೀಯ, ಹಲ್ದ್ವಾನಿ ರಾಮಲೀಲಾ ಮೈದಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ದೀಕರಣ ಮಾಡಿರುವುದನ್ನು ಖಂಡಿಸಿರುವುದು ಅಪರಾಧ ಎಂದಾದರೆ, ಬಿಜೆಪಿ ನಾಯಕರುಗಳು ದಿನ ನಿತ್ಯ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಮೇಲೆ ಏಕೆ ಎಫ್.ಐ.ಆರ್ ಹಾಕುವುದಿಲ್ಲʼ ಎಂದು ಪ್ರತಿಭಟನಾನಿರತರು ಪ್ರಶ್ನಿಸಿದರು.

ರಾಹುಲ್ ಗಾಂಧಿ ಅವರ ಜನಪ್ರಿಯತೆ ಸಹಿಸದ ಆರೆಸ್ಸೆಸ್‌ ಮತ್ತು ಬಿಜೆಪಿ ಅವರ ಮೇಲೆ ನಿರಂತರ ಷಡ್ಯಂತ್ರ ಮಾಡುತ್ತಿದೆ.‌ ಇದಕ್ಕೆ ಕಾಂಗ್ರೆಸ್ಸಿಗರು ಬಗ್ಗುವುದಿಲ್ಲ ಎಂದು ಹೇಳಿದರು.

ಈ ಕೂಡಲೇ ರಾಹುಲ್ ಗಾಂಧಿ ಅವರ ಮೇಲೆ ಹಾಕಿರುವ ಎಫ್.ಐ.ಆರ್ ಅನ್ನು ಹಿಂಪಡೆಯಬೇಕು, ಇಲ್ಲದಿದ್ದರೆ ಯುವ ಕಾಂಗ್ರೆಸ್ ನಿರಂತರವಾಗಿ ದೇಶಾದ್ಯಂತ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ವರಿಸಿದರು.

ಇದಕ್ಕೂ ಮೊದಲು ಯುವ ಕಾಂಗ್ರೆಸ್ ಮುಖಂಡ ವಿನೊದ್ ನೇತೃತ್ವದಲ್ಲಿ ಮತ್ತೊಂದು ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪು ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿತು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದರು.

Tags

MysuruYouth CongressRSSBJPFIRRahul Gandhi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X