ನಂಜನಗೂಡು | ಬೈಕ್ ಗೆ ಲಾರಿ ಢಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು

ಮೃತರು
ನಂಜನಗೂಡು : ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ಮುಖ್ಯ ರಸ್ತೆಯ ಜೆ.ಪಿ. ಹುಂಡಿ ಬಳಿ ನಡೆದಿದೆ.
ಮೃತರನ್ನು ಹಂಚೀಪುರ ಗ್ರಾಮದ ಚಿಕ್ಕಸ್ವಾಮಿ (45), ರೂಪ (38) ಮತ್ತು ಚನ್ನಮಲ್ಲಮ್ಮ (55) ಎಂದು ಗುರುತಿಸಲಾಗಿದೆ.
ಸಂಗಮದ ಗದ್ದಿಗೆಯಲ್ಲಿ ಸಂಬಂಧಿಕರೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಒಂದೇ ಬೈಕ್ನಲ್ಲಿ ಮೂವರು ಹಿಂತಿರುಗುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಅತೀ ವೇಗದಿಂದ ಬಂದ ತಮಿಳುನಾಡು ಮೂಲದ ಲಾರಿಯೊಂದು ಏಕಾಏಕಿ ಬೈಕ್ಗೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಬೈಕ್ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್ಐ ಚೇತನ್ ಕುಮಾರ್, ಅಪರಾಧ ವಿಭಾಗದ ರಸೂಲ್ ಪಾಗವಾಲೆ, ಎಸ್ಐ ಶಿವಣ್ಣ, ದೊಡ್ಡಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿ ಲಾರಿ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.