Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಡಿ.23 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ...

ಡಿ.23 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ರೈತರ ಮಹಾ ಅಧಿವೇಶನ: ಕುರುಬೂರು ಶಾಂತಕುಮಾರ್

ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಾವೇಶದಲ್ಲಿ ಕೇಂದ್ರ , ರಾಜ್ಯ ಸರ್ಕಾರಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Dec 2023 5:08 PM IST
share
ಡಿ.23 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ರೈತರ ಮಹಾ ಅಧಿವೇಶನ: ಕುರುಬೂರು ಶಾಂತಕುಮಾರ್

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಡಿಸೆಂಬರ್ 23 ವಿಶ್ವ ರೈತ ದಿನದಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ರೈತರ ಮಹಾ ಅಧಿವೇಶನ ನಡೆಸಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆಗ್ರಹಿಸಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ದಕ್ಷಿಣ ಭಾರತ ಸಂಚಾಲಕ ರೈತ ಮುಖಂಡ ಕುರುಬೂರ್ ಶಾಂತಕುಮಾರ್ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಪ್ರವಾಹ, ಮಳೆಹಾನಿ, ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲಾ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕೈಗಾರಿಕೆ ಉದ್ಯಮಿಗಳಿಗೆ ಸಂಕಷ್ಟದ ನೆರವು ಎಂದು 12 ಲಕ್ಷ ಕೋಟಿ ಮನ್ನಾ ಮಾಡಿರುವ ರೀತಿ ರೈತರ ಸಾಲ ಮನ್ನಾ ಆಗಬೇಕು.

ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಆಗಬೇಕು. ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ಪ್ರಧಾನಿಯವರು ರೈತರಿಗೆ ಭರವಸೆ ನೀಡಿದಂತೆ ಕೇಂದ್ರ ಸರ್ಕಾರ ಕೂಡಲೇ ಜಾರಿ ಮಾಡಬೇಕು.

ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ, ಯಾವುದೇ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ನೆರವಿಗೆ ಬಾರದೆ ರಾಜಕೀಯ ಚೆಲ್ಲಾಟವಾಡುತ್ತಿದ್ದಾರೆ ,2000 ರೂಪಾಯಿ ಬರ ಪರಿಹಾರದ ಬೇಡ, ಸಂಪೂರ್ಣ ಬರ ನಷ್ಟ ಎಕರೆಗೆ ಕನಿಷ್ಠ 25,000 ಬಿಡುಗಡೆ ಮಾಡಬೇಕು.

ಕಬ್ಬಿನ ಬೆಳೆಯನ್ನು ಎನ್.ಡಿ.ಆರ್.ಎಫ್ ಮಾನದಂಡಕ್ಕೆ ಸೇರಿಸಬೇಕು, ಬರ ನಷ್ಟ ಪರಿಹಾರ ಸಿಗುವಂತಾಗಬೇಕು. ರಾಜ್ಯ ಸರ್ಕಾರ ಕಬ್ಬು ಬೇಸಾಯ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್.ಆರ್.ಇ.ಜಿ ಯೋಜನೆಯನ್ನು ಲಿಂಕ್ ಮಾಡಬೇಕು, ಬಾಳೆ ಬೇಸಾಯಕ್ಕೆ ನೀಡಿರುವ ರೀತಿ ಎಲ್ಲಾ ಕೃಷಿ ಬೆಳೆಗಳಿಗೂ ಕಡ್ಡಾಯವಾಗಿ ಬೆಳೆ ವಿಮೆಯನ್ನು ಜಾರಿಗೊಳಿಸಬೇಕು. ಬೆಳೆ ವಿಮೆ ಸರಳೀಕರಣಗೊಳಿಸಬೇಕು ಅತಿವೃಷ್ಟಿ ಬರ ನಷ್ಟ ಪರಿಹಾರ ಬೆಳೆ ವಿಮೆ ವ್ಯಾಪ್ತಿಯಲ್ಲಿ ನಷ್ಟ ಪರಿಹಾರ ನೀಡಬೇಕು.

ದೇಶದ 140 ಕೋಟಿ ಜನರಿಗೆ ಆಹಾರ ಉತ್ಪಾದಿಸಲು ತಮ್ಮ ಜೀವನವನ್ನೆ ತ್ಯಾಗ ಮಾಡುತ್ತಿರುವ 60 ವರ್ಷ ಪೂರೈಸಿದ ರೈತರಿಗೆ ತಿಂಗಳಿಗೆ ಕನಿಷ್ಠ 5000 ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು.

ಕೃಷಿ ಪಂಪ್ ಸೆಟ್ ಗಳಿಗೆ ನೀಡುವ ಉಚಿತ ವಿದ್ಯುತ್ ತಪ್ಪಿಸಲು ವಿದ್ಯುತ್ ಖಾಸಗೀಕರಣ ನೀತಿಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನಿರಂತರ 10 ಗಂಟೆಗಳ ವಿದ್ಯುತ್ ನೀಡಬೇಕು,

ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರ ನೀಡುವ ಶೇಕಡಾ 60 ರಷ್ಟು ಸಹಾಯಧನ ಕುಸುಮ ಯೋಜನೆಗೆ ರಾಜ್ಯ ಸರ್ಕಾರ ಶೇಕಡ 30ರಷ್ಟು ಸೇರಿಸಿ ಸಹಾಯಧನ ನೀಡಲಿ ಇದರಿಂದ ರೈತರಿಗೆ ಹಗಲು ವೇಳೆ ಯಾವುದೇ ಸಮಸ್ಯೆ ಇಲ್ಲದೆ ವಿದ್ಯುತ್ ಸಿಗುತ್ತದೆ.

ರೈತನ ಮಗನ ಮದುವೆಯಾಗುವ ವಧುವಿಗೆ ಸರ್ಕಾರಿ ಕೆಲಸದಲ್ಲಿ ಶೇಕಡ 10 ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು ರೈತರ ಮಕ್ಕಳನ್ನು ಅಪಾಯದಿಂದ ಪಾರು ಮಾಡಬೇಕು.

ದೆಹಲಿಯಲ್ಲಿ ಒಂದು ವರ್ಷ ಕಾಲ ಹೋರಾಟ ಮಾಡಿದ ರೈತರ ಮೇಲೆ ಹಾಕಿರುವ ಪೊಲೀಸ್ ಮೊಕದ್ದಮೆ ಗಳನ್ನು ವಾಪಸ್ ಪಡೆಯಬೇಕು. ದೇಶದ ರೈತರನ್ನು ಸಂರಕ್ಷಿಸಲು ವಿಶ್ವ ವ್ಯಾಪಾರದ ಒಪ್ಪಂದದಿಂದ ಭಾರತ ಸರ್ಕಾರ ಹೊರ ಬರಬೇಕು.

ಈ ಒತ್ತಾಯಗಳ ಬಗ್ಗೆ ರಾಷ್ಟ್ರೀಯ ರೈತ ಮುಖಂಡರು ಸಮಾವೇಶದಲ್ಲಿ ಭಾಗವಹಿಸಿ ಚರ್ಚೆ ನಡೆಸಿ ರೈತರನ್ನು ಜಾಗೃತಿ ಮಾಡಿ ದೇಶದ ಎಲ್ಲಾ ರೈತರು ರಾಜಕೀಯೇತರವಾಗಿ ಹೋರಾಟ ನಡೆಸಲು ರೈತರ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯಾದ್ಯಂತ ಇರುವ ಎಲ್ಲಾ ರೈತ ಸಂಘಟನೆಗಳ ಮುಖಂಡರು, ರೈತರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಾಲ ಮನ್ನಾ ಆಂದೋಲನ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಹತ್ತಳ್ಳಿ ದೇವರಾಜ್ , ಬರಡನಪುರ ನಾಗರಾಜ್ , ಕಿರಗಸೂರು ಶಂಕರ್, ಮೂಕಳ್ಳಿಮಹದೇವಸ್ವಾಮಿ, ಕಮಲಮ್ಮ, ಪಟೆಲ್ ಶಿವಮೂರ್ತಿ,ಕುರುಬೂರು ಸಿದ್ದೇಶ್ , ಹಂಪಾಪುರ ರಾಜೇಶ, ಕಬಿನಿಮಾದಪ್ಪ ,ವೆಂಕಟೇಶ್ ಪ್ರದೀಪ ,ಸುನಿಲ್, ಮಾದೇವ, ರಂಗರಾಜು, ಪುಟ್ಟೇಗೌಡನಹುಂಡಿ ರಾಜು ಕೆಂಡಗಣ್ಣಸ್ವಾಮಿ, ವಿಜಯೇಂದ್ರ ಡಿಪಿ, ಬಿ.ಪಿ. ಪರಶಿವಮೂರ್ತಿ ಮಂಜುನಾಥ, ಸುಂದ್ರಪ್ಪ ರೇವಣ್ಣ ,ಮಹೇಶ ,ಸಾತಗಳಿ ಬಸವರಾಜು ಉಮೇಶ, ಮಾಲಿಂಗನಾಯಕ ಉಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X