Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಕೆಪಿಎಸ್ ಮ್ಯಾಗ್ನೆಟ್ ಶಾಲೆ...

ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆರಂಭಿಸುತ್ತಿದ್ದೇವೆಯೇ ಹೊರತು ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ23 May 2026 6:17 PM IST
share
ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆರಂಭಿಸುತ್ತಿದ್ದೇವೆಯೇ ಹೊರತು ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಮೈಸೂರು: ಶಿಕ್ಷಣದಲ್ಲಿ ಬದಲಾವಣೆ, ಗುಣಮಟ್ಟದ ಶಿಕ್ಷಣ ತರಲು ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆರಂಭಿಸುತ್ತಿದ್ದೇವೆ ಹೊರತು ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಕುವೆಂಪುನಗರದ ನವಿಲು ರಸ್ತೆಯಲ್ಲಿರುವ ಹಿರಿಯ ಸಾಹಿತಿ ದೇವನೂರು ಮಹಾದೇವ ಅವರ ನಿವಾಸಕ್ಕೆ ಶನಿವಾರ ತೆರಳಿ 1 ಗಂಟೆಗೂ ಹೆಚ್ಚು ಸಮಯ ಅವರೊಂದಿಗೆ ಚರ್ಚಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆರಂಭದಿಂದ, ಇರುವ ಶಾಲೆಗಳನ್ನು ಮುಚ್ಚುವುದಿಲ್ಲ, ಕೆಲವರ ತಪ್ಪು ಗ್ರಹಿಕೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಇದಕ್ಕೆ ವಿರೋಧವಿದ್ದರೆ ಅವರ ಜೊತೆಯೂ ಮಾತನಾಡಿ ಅವರಿಗೆ ಇದರ ಉದ್ದೇಶವನ್ನು ತಿಳಿಸುತ್ತೇನೆ ಎಂದು ಹೇಳಿದರು.

ಒಬ್ಬ ಶಿಕ್ಷಣ ಸಚಿವನಾಗಿ ಸಾಹಿತಿ ದೇವನೂರು ಮಹದೇವ ಅವರ ಸಲಹೆ ಪಡೆಯಲು ಭೇಟಿ ಮಾಡಿದ್ದೇನೆ. ಶಿಕ್ಷಣ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದೇವೆ. ಅದರ ಫಲವಾಗಿ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ ಎಂದು ಹೇಳಿದರು.

ಈಗಾಗಲೇ ದೇವನೂರು ಮಹಾದೇವ ಅವರು ನಾಟಕ, ಕಲೆ, ಸಾಹಿತ್ಯದ ಅರಿವು ಮೂಡಿಸುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಗಳನ್ನು ಸ್ವೀಕರಿಸಿ ಅವುಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.

ಸರ್ಕಾರಿ ನೌಕರರ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಿಗೆ ಸೇರಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದನ್ನು ಕಡ್ಡಾಯ ಮಾಡುವುದು ಸಾಧ್ಯವಿಲ್ಲ. ಯಾವ ಶಾಲೆಗೆ ಸೇರಿಸಬೇಕು ಎಂಬುದು ಪೋಷಕರು ಹಾಗೂ ಮಕ್ಕಳ ಹಕ್ಕು. ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ಸ್ಪಷ್ಟ ಅಭಿಪ್ರಾಯ ನೀಡಿದೆ. ಆದರೆ ಎಲ್ಲರೂ ಕನ್ನಡ ಶಾಲೆಗಳತ್ತ ಮುಖ ಮಾಡಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

ಇದೇ ವೇಳೆ ಕೇಸರಿ ಶಾಲು ಹಾಕಿಸಿ ಕಳುಹಿಸುವುದಾಗಿ ಬಿಜೆಪಿ ನಾಯಕರು ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಚಿವರು, ಬಿಜೆಪಿಯವರು ಹಿಜಾಬ್ ಅಂತ ಕರೀತಾರೆ, ನಾವು ಸಮಾನತೆ ಅಂತೀವಿ. ಮೊದಲು ಕೇಂದ್ರೀಯ ವಿದ್ಯಾಲಯಗಳಲ್ಲಿ ಶಾಲು ಹಾಕಿ ಬರಲಿ, ಬಳಿಕ ನಾನು ಉತ್ತರ ಕೊಡ್ತೀನಿ. ಕೇಂದ್ರೀಯ ವಿದ್ಯಾಲಯ, ಮಹರಾಷ್ಟ್ರದಲ್ಲಿ ಯಾವ ಶಿಕ್ಷಣ ನೀಡಲಾಗುತ್ತಿದೆ? ಇದರ ಬಗ್ಗೆ ಏಕೆ ಬಿಜೆಪಿಯವರು ಮಾತನಾಡುವುದಿಲ್ಲ ಎಂದು ಅವರು ಪ್ರಶ್ನಿಸಿದರು.

ಕೇಂದ್ರ ಶಿಕ್ಷಣ ಸಚಿವ ನನ್ನ ಬಳಿ ಬಂದು ಕಲಿಯಲಿ: ನೀಟ್ ಪರೀಕ್ಷೆ ಸೋರಿಕೆಯಾದ ಮೇಲೆ ಉತ್ತರಿಸಲಾಗದೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನಾಲ್ಕು ದಿನ ಕಣ್ಮರೆಯಾಗಿದ್ದರು. ಇವರಿಗೆ ಯಾವ ನೈತಿಕತೆ ಇದೆ. ನನ್ನ ರೀತಿ ಕುಳಿತು ಮಾಧ್ಯಮಗಳಿಗೆ ಉತ್ತರ ನೀಡಬೇಕಿತ್ತು. ಇವರಿಗೆ ಶಿಕ್ಷಣ ಇಲಾಖೆ ನಡೆಸಲು ಗೊತ್ತಿಲ್ಲದಿದ್ದರೆ ನನ್ನ ಬಳಿ ಬರಲಿ ನಾನು ಕಲಿಸಿಕೊಡುತ್ತೇನೆ ಎಂದು ಹೇಳಿದರು.

ತಮ್ಮ ಶೈಕ್ಷಣಿಕ ಅರ್ಹತೆಯನ್ನು ಪ್ರಶ್ನಿಸುವವರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ನನ್ನ ಶೈಕ್ಷಣಿಕ ಹಿನ್ನಲೆ ಬಗ್ಗೆ ಗೇಲಿ ಮಾಡುವವರು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಡಿಗ್ರಿ ಪ್ರಮಾಣಪತ್ರದ ಬಗ್ಗೆ ಮಾತನಾಡಲಿ. ನಾನು ಪಿಯುಸಿ ಮುಗಿಸಿದ್ದೇನೆ. ನಾನು ಒರಿಜಿನಲ್ ದಾಖಲಾತಿ ತೋರಿಸುತ್ತೇನೆ. ಅವರು ತೋರಿಸುತ್ತಾರ? ಪಿಯುಸಿ ಮುಗಿದ ಬಳಿಕ ವ್ಯವಹಾರಕ್ಕೆ ಮುಂದಾದ ಕಾರಣ ಓದು ಮುಂದುವರಿಸಲಿಲ್ಲ ಅಷ್ಟೆ ಎಂದು ವಿರೋಧಿಗಳ ಹೇಳಿಕೆಗೆ ತಿರುಗೇಟು ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎನ್.ಆರ್.ನಾಗೇಶ್ ಉಪಸ್ಥಿತರಿದ್ದರು.

Tags

Madhu BangarappaschoolsKPS Magnet Schools
share
ವಾರ್ತಾಭಾರತಿ
ವಾರ್ತಾಭಾರತಿ
Next Story
X