Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಜನರ ಆಶೀರ್ವಾದವಿದ್ದರೆ ಮಾತ್ರ...

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಸಿಎಂ ಸಿದ್ಧರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 March 2026 8:00 PM IST
share
ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಸಿಎಂ ಸಿದ್ಧರಾಮಯ್ಯ

ಮೈಸೂರು: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ತಾಲ್ಲೂಕು ಪಿಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

1978 ರಲ್ಲಿ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ದಿಸಿದಾಗ ಇಲ್ಲಿನ ಜನರ ಆಶೀರ್ವಾದ ನನಗೆ ದೊರೆತಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಜನರ ಸಹಕಾರ ದೊರೆಯಿತು. ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಈವರೆಗೆ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಪಿಲ್ಲಹಳ್ಳಿ ಜನರ ಪ್ರೀತಿಯಿಂದಾಗಿ ಇಲ್ಲಿನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದೇನೆ. 1978 ರಿಂದ ಇಂದಿನವರೆಗೂ ಹಾಗೂ ಮುಂದೆಯೂ ಈ ಭಾಗದ ಜನರ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.

ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ:

ಶ್ರೀ ದಂಡಿಮಾರಮ್ಮ ದೇವಸ್ಥಾನಕ್ಕೆ ಬಾಲ್ಯದಿಂದಲೂ ಭೇಟಿ ನೀಡುತ್ತಿದ್ದ ನೆನಪನ್ನು ಮೆಲುಕು ಹಾಕಿದ ಮುಖ್ಯಮಂತ್ರಿಗಳು, ದೇವರನ್ನು ಕಷ್ಟ ಬಂದಾಗ ನೆನಪಿಸಿಕೊಳ್ಳದೇ, ಎಲ್ಲ ಸಂದರ್ಭದಲ್ಲಿಯೂ ಸ್ಮರಿಸಬೇಕು ಎಂದರು. ‘ದೇವನೊಬ್ಬ ನಾಮ ಹಲವು’ ಎಂದು ನಂಬಿ, ದೇವರು ನಮ್ಮೊಳಗೂ ಸೇರಿದಂತೆ ಎಲ್ಲ ಕಡೆಯೂ ಇದ್ದಾನೆ. ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ. ಯಾವೊಂದು ಧರ್ಮ ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು.

ಸಮಾನತೆ ಸ್ಥಾಪಿಸುವುದೇ ಸರ್ಕಾರದ ಯೋಜನೆಗಳ ಗುರಿ:

ಸಮಾಜದ ಅಸಮಾನತೆ ಕಡಿಮೆಯಾಗಬೇಕು. ಸಮಾನತೆಯ ಸ್ಥಾಪಿಸುವ ಉದ್ದೇಶವನ್ನು ಸರ್ಕಾರದ ಎಲ್ಲ ಯೋಜನೆಗಳು ಹೊಂದಿವೆ. ಸಮಾಜದ ಎಲ್ಲ ಜಾತಿ ಧರ್ಮ, ವರ್ಗಗಳಿಗೆ ಆರ್ಥಿಕ ಸಾಮಾಜಿಕ ಶಕ್ತಿ ದೊರೆಯಬೇಕು. ಲಿಂಗ ತಾರತಮ್ಯ ಹೋಗಲಾಡಿಸಿ, ಮಹಿಳೆಯರಿಗೆ ಶಕ್ತಿ ತುಂಬಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳು ದೊರೆತಾಗ ಮಾತ್ರ ಸಮಾಜಿಕ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದರು.

Tags

CM SiddaramaiahChief Minister
share
ವಾರ್ತಾಭಾರತಿ
ವಾರ್ತಾಭಾರತಿ
Next Story
X