Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಟಿ.ನರಸೀಪುರ ಪ್ರತಿಭಟನೆ ವೇಳೆ...

ಟಿ.ನರಸೀಪುರ ಪ್ರತಿಭಟನೆ ವೇಳೆ ಬಿಜೆಪಿಯೊಳಗಿನ ಅಸಮಾಧಾನ ಸ್ಫೋಟ: ಪ್ರತಾಪ್ ಸಿಂಹ, ಎಲ್.ನಾಗೇಂದ್ರ ನಡುವೆ ತಳ್ಳಾಟ-ನೂಕಾಟ

ವಾರ್ತಾಭಾರತಿವಾರ್ತಾಭಾರತಿ14 Sept 2026 1:28 PM IST
share
ಟಿ.ನರಸೀಪುರ ಪ್ರತಿಭಟನೆ ವೇಳೆ ಬಿಜೆಪಿಯೊಳಗಿನ ಅಸಮಾಧಾನ ಸ್ಫೋಟ: ಪ್ರತಾಪ್ ಸಿಂಹ, ಎಲ್.ನಾಗೇಂದ್ರ ನಡುವೆ ತಳ್ಳಾಟ-ನೂಕಾಟ

ಮೈಸೂರು : ಟಿ.ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಪ್ರತಿಭಟನೆ ವೇಳೆ ನಗರ ಬಿಜೆಪಿ ಒಳಗಿನ ಅಸಮಾಧಾನ ಸ್ಫೋಟಗೊಂಡಿದೆ‌.

ಪ್ರತಿಭಟನಾ ಮೆರವಣಿಗೆ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಹಾಗೂ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ ನಡುವೆ ತಳ್ಳಾಟ-ನೂಕಾಟ ನಡೆದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಎಲ್.ನಾಗೇಂದ್ರ, ಪ್ರತಾಪ್ ಸಿಂಹ ವಿರುದ್ಧ ಏರು ಧನಿಯಲ್ಲೇ ಮಾತಾಡಿದ್ದಾರೆ ಎನ್ನಲಾಗಿದೆ. ಪ್ರತಾಪ್ ಸಿಂಹ ಕೂಡ ನಾಗೇಂದ್ರ ವಿರುದ್ಧ ಕೂಗಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿಪಕ್ಷ ನಾಯಕ ಆರ್.ಅಶೋಕ್ ಮುಂದೆಯೇ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗಿದೆ.

ಇನ್ಸ್ ಪೆಕ್ಟರ್ ವಿರುದ್ಧ ಪ್ರತಿಭಟನೆ ಮಾಡಲು ಬಂದ ಬಿಜೆಪಿ ಮುಖಂಡರಲ್ಲೇ ಅಸಮಾಧಾನ‌ ಸ್ಫೋಟಗೊಂಡು ಇವರ ವೈಯಕ್ತಿಕ ಜಗಳವೇ ಪ್ರಮುಖವಾದಂತಾಗಿದೆ. ಘಟನೆಯಿಂದ ಎಲ್.ನಾಗೇಂದ್ರ ಸ್ಥಳದಿಂದಲೇ ವಾಪಸ್ ಮೈಸೂರಿಗೆ ತೆರಳಿದರು.

ಮೈಸೂರು ನಗರದ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಎಲ್.ನಾಗೇಂದ್ರ ಮತ್ತು ಪ್ರತಾಪ್ ಸಿಂಹ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದಿತ್ತು. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಮೇಲೆ ಪ್ರತಾಪ್ ಸಿಂಹ ರಾಜ್ಯ ರಾಜಕಾರಣದತ್ತ ಮುಖ ಮಾಡಿದ್ದು, ಚಾಮರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಎಲ್.ನಾಗೇಂದ್ರ ಒಮ್ಮೆ ಚಾಮರಾಜ ಕ್ಷೇತ್ರದ ಶಾಸಕರಾಗಿದ್ದರು. ಈ ವಿಚಾರವಾಗಿ ಈ ಹಿಂದೆಯೂ ಇಬ್ಬರ ನಡುವೆ ವಾಕ್ಸಮರ ನಡೆದಿತ್ತು.

ಇದೀಗ ಟಿ.ನರಸೀಪುರದಲ್ಲಿ ಇಬ್ಬರ ಜಗಳ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ನಾಯಕರ ಪರಸ್ಪರ ಜಗಳ ಕಂಡು ಬಿಜೆಪಿ ಕಾರ್ಯಕರ್ತರೇ ಇಬ್ಬರ ನಡವಳಿಕೆ ವಿರುದ್ಧ ಬೇಸರ ವ್ಯಕ್ತಪಡಿಸಿ ಪಕ್ಷದ ಮಟ್ಟದಲ್ಲಿ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

Tags

Pratap Simha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X