Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೀಸಲಾತಿ‌ ಕುರಿತು ಅವಹೇಳನ ಆರೋಪ:...

ಮೀಸಲಾತಿ‌ ಕುರಿತು ಅವಹೇಳನ ಆರೋಪ: ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ28 July 2026 8:16 PM IST
share
ಮೀಸಲಾತಿ‌ ಕುರಿತು ಅವಹೇಳನ ಆರೋಪ: ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಮೈಸೂರು : ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ನಿರೂಪಕ ಅರುಣ್ ಬಡಿಗೇರ್ ಮೀಸಲಾತಿ ಹಾಗೂ ಮೀಸಲಾತಿ ಫಲಾನುಭವಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು, ಅರುಣ್ ಬಡಿಗೇರ್ ಮತ್ತು ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಮೈಸೂರು ಜಿಲ್ಲೆಯವರಾದ ಡಾ.ಕೆ.ಪಿ.ರಮೇಶ್ ಮತ್ತು ಡಾ.ಮನೋಜ್ ಕುಮಾರ್ ಎಂ.ಜೆ ಎಂಬವರು ದೂರು ಸಲ್ಲಿಸಿದ್ದಾರೆ.

ಜುಲೈ 25ರಂದು ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಬಿಗ್ ಬುಲಿಟಿನ್ ಕಾರ್ಯಕ್ರಮದಲ್ಲಿ ನಿರೂಪಕನಾದ ಅರುಣ್ ಬಡಿಗೇರ್, ಮೀಸಲಾತಿ ವ್ಯವಸ್ಥೆ ಹಾಗೂ ಅದರ ಫಲಾನುಭವಿಗಳ ಕುರಿತು ಅತ್ಯಂತ ಆಕ್ಷೇಪಾರ್ಹ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ತಪ್ಪು ಕಲ್ಪನೆ ಮತ್ತು ಪೂರ್ವಾಗ್ರಹಗಳನ್ನು ಮೂಡಿಸುವ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಈ ಕಾರ್ಯಕ್ರಮವನ್ನು ಪಬ್ಲಿಕ್ ಟಿವಿಯ ಅಧಿಕೃತ ಯೂಟ್ಯೂಬ್ ವಾಹಿನಿಯಲ್ಲಿಯೂ ಪ್ರಕಟಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದ 00:05:36 ರಿಂದ 00:06:23 ನಿಮಿಷಗಳ ಅವಧಿಯಲ್ಲಿ "ವಿದ್ಯಾರ್ಥಿಗಳ ಪರಿಸ್ಥಿತಿ ಏನಾಗ್ತಾ ಇದೆ? ಬಡವನಿಗೆ ಯಾವ ರೀತಿ ಶಿಕ್ಷಣ ಸಿಗ್ತಾ ಇದೆ? ಮೀಸಲಾತಿಯಲ್ಲಿ ಶಿಕ್ಷಣವನ್ನ ಪಡ್ಕೊಂಡು 50-60 ಪರ್ಸೆಂಟೇಜ್ ಮಾಡಿದವನೆಲ್ಲಾ ಮೀಸಲಾತಿ ಅಡಿಯಲ್ಲಿ ಹೋಗಿಬಿಟ್ಟು ಶಿಕ್ಷಕರಾಗಿ ಪಾಠ ಮಾಡಿದರೆ ವಿದ್ಯಾರ್ಥಿಗಳು ಏನು ಕಲಿತಾವೆ?"

"ನಾಳೆ ಶಿಕ್ಷಣದಲ್ಲಿ ಅದೇ ವಿಚಾರದಲ್ಲಿ ಅವನು 50-60% ಮಾಡಿದವನೆಲ್ಲ ಮೇಲ್ಗಡೆಗೆ ಹೋಗಿ ಮೀಸಲಾತಿ ಅಡಿಯಲ್ಲಿ ಅವನು ಬೇರೆ ಬೇರೆ ಪ್ರಮೋಷನ್ ತಗೊಳ್ತಾ ಹೋದ್ರೆ ಕೆಲಸಗಳು ಹೇಗಾಗ್ತವೆ? ಡಾಕ್ಟರ್ ಹೇಗಾಗ್ತಾನೆ? ಅವನು ಇಂಜಿನಿಯರ್ ಹೇಗಾಗ್ತಾನೆ?. ಎಲ್ಲಾ ಕಡೆಯೂ ಮೀಸಲಾತಿ... ಮೀಸಲಾತಿ ವಿಚಾರದಲ್ಲಿ ಕ್ವಾಲಿಟಿ ಅನ್ನೋದೇ ಇಲ್ಲ. ಮೌಲ್ಯಗಳೇ ಇಲ್ಲದೆ ಇರುವಂತವರು ಪಾಠ ಮಾಡುವ ಪರಿಸ್ಥಿತಿಗೆ ಬರ್ತಾ ಇದೆ. ವೇಟೇಜ್ ಇಲ್ಲ"

ಮೇಲಿನ ಹೇಳಿಕೆಗಳು ಮೀಸಲಾತಿಯ ಮೂಲಕ ಅವಕಾಶ ಪಡೆದಿರುವ ಶಿಕ್ಷಕರು, ವೈದ್ಯರು, ಇಂಜಿನಿಯರ್‌ಗಳು ಹಾಗೂ ಇತರ ಸರ್ಕಾರಿ ನೌಕರರ ಸಾಮರ್ಥ್ಯ, ಅರ್ಹತೆ ಮತ್ತು ಗುಣಮಟ್ಟವನ್ನು ಸಾಮಾನ್ಯೀಕರಿಸಿ ಪ್ರಶ್ನಿಸುವಂತಿವೆ ಎಂದು ನಾನು ಭಾವಿಸುತ್ತೇನೆ. ಇಂತಹ ಹೇಳಿಕೆಗಳು ಸಂವಿಧಾನಾತ್ಮಕ ಮೀಸಲಾತಿ ವ್ಯವಸ್ಥೆ ಹಾಗೂ ಅದರ ಫಲಾನುಭವಿಗಳ ಕುರಿತು ಸಾರ್ವಜನಿಕರಲ್ಲಿ ನಕಾರಾತ್ಮಕ ಅಭಿಪ್ರಾಯ ಮತ್ತು ಪೂರ್ವಾಗ್ರಹವನ್ನು ಬೆಳಸುವ ಸಾಧ್ಯತೆಯನ್ನು ಹೊಂದಿವೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಅರುಣ್ ಬಡಿಗೇರ್ ತಮ್ಮ ಕಾರ್ಯಕ್ರಮದಲ್ಲಿ ಮೀಸಲಾತಿಯ ಮೂಲಕ ಶಿಕ್ಷಕರು, ವೈದ್ಯರು, ಇಂಜಿನಿಯರ್‌ಗಳು ಹಾಗೂ ಇತರ ಸರ್ಕಾರಿ ನೌಕರರಾಗಿರುವವರು ಗುಣಮಟ್ಟವಿಲ್ಲದವರು ಎಂಬ ಅರ್ಥ ಬರುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ. ಇಂತಹ ಹೇಳಿಕೆಗಳು ಮೀಸಲಾತಿಯ ಮೂಲಕ ಅವಕಾಶ ಪಡೆದಿರುವ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ವರ್ಗಗಳು ಹಾಗೂ ಇತರ ಸಂವಿಧಾನಾತ್ಮಕ ಮೀಸಲಾತಿ ಫಲಾನುಭವಿಗಳ ಸಾಮರ್ಥ್ಯ, ಅರ್ಹತೆ ಮತ್ತು ಘನತೆಯನ್ನು ಸಾರ್ವಜನಿಕವಾಗಿ ಪ್ರಶ್ನಿಸುವ ಪ್ರಯತ್ನವಾಗಿದ್ದು, ಅವರ ಬಗ್ಗೆ ಸಮಾಜದಲ್ಲಿ ಅವಹೇಳನಕಾರಿ ಮತ್ತು ಪೂರ್ವಾಗ್ರಹಪೀಡಿತ ಮನೋಭಾವವನ್ನು ಬೆಳಸುವ ಸಾಧ್ಯತೆಯನ್ನು ಹೊಂದಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇಂತಹ ಹೇಳಿಕೆಗಳು ಶೋಷಿತ ಸಮುದಾಯಗಳ ಭಾವನೆಗಳಿಗೆ ತೀವ್ರ ಧಕ್ಕೆ ಉಂಟುಮಾಡಿರುವುದಲ್ಲದೆ, ಭಾರತದ ಸಂವಿಧಾನ ಒದಗಿಸಿರುವ ಸಾಮಾಜಿಕ ನ್ಯಾಯದ ಪರಿಕಲ್ಪನೆ ಹಾಗೂ ಮೀಸಲಾತಿ ವ್ಯವಸ್ಥೆಯ ಬಗ್ಗೆ ಸಾರ್ವಜನಿಕರಲ್ಲಿ ಅಪನಂಬಿಕೆ ಮತ್ತು ನಕಾರಾತ್ಮಕ ಮನೋಭಾವವನ್ನು ಮತ್ತು ಸಮಾಜದಲ್ಲಿ ಹಲವು ಜಾತಿ ಮತ್ತು ಕೋಮುಗಳ ನಡುವೆ ಕಲಹಗಳು ಮತ್ತು ಒಡಕುಗಳನ್ನು ಉಂಟುಮಾಡುವ ಸಾಧ್ಯತೆಯೂ ಇದೆ. ಈ ಹೇಳಿಕೆಗಳು ಯಾವುದೇ ಖಾಸಗಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಕ್ತವಾದ ಅಭಿಪ್ರಾಯಗಳಲ್ಲ. ಅವು ಪಬ್ಲಿಕ್ ಟಿವಿ ಎಂಬ ಸುದ್ದಿ ವಾಹಿನಿಯ ಅಧಿಕೃತ ಕಾರ್ಯಕ್ರಮದಲ್ಲಿ ಪ್ರಸಾರಗೊಂಡಿದ್ದು, ನಂತರ ಅದನ್ನು ಅಧಿಕೃತ ಯೂಟ್ಯೂಬ್ ವಾಹಿನಿಯಲ್ಲಿಯೂ ಪ್ರಕಟಿಸಲಾಗಿದೆ. ಆದ್ದರಿಂದ ಈ ವಿಷಯದಲ್ಲಿ ಕೇವಲ ನಿರೂಪಕರಷ್ಟೇ ಅಲ್ಲದೆ, ಪಬ್ಲಿಕ್ ಟಿವಿ ಆಡಳಿತ ಮಂಡಳಿ, ಮುಖ್ಯ ಸಂಪಾದಕರು ಹಾಗೂ ಪ್ರಸಾರಕ್ಕೆ ಅನುಮೋದನೆ ನೀಡಿದ ಅಧಿಕಾರಿಗಳ ಪಾತ್ರವನ್ನು ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Tags

reservation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X