Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಹಣ ಲೂಟಿ ಮಾಡಲು ಸಾಧ್ಯವಾಗದಿದ್ದಕ್ಕೆ...

ಹಣ ಲೂಟಿ ಮಾಡಲು ಸಾಧ್ಯವಾಗದಿದ್ದಕ್ಕೆ ʼವಿಬಿ- ಜಿ ರಾಮ್‌ ಜಿ ಕಾಯ್ದೆʼಗೆ ವಿರೋಧ : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ11 Jan 2026 9:58 PM IST
share
ಹಣ ಲೂಟಿ ಮಾಡಲು ಸಾಧ್ಯವಾಗದಿದ್ದಕ್ಕೆ ʼವಿಬಿ- ಜಿ ರಾಮ್‌ ಜಿ ಕಾಯ್ದೆʼಗೆ ವಿರೋಧ : ಆರ್.ಅಶೋಕ್

ಮೈಸೂರು : ರಾಜ್ಯ ಸರಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರದ ವಿರುದ್ಧ ರಾಜ್ಯದ ನಾಲ್ಕು ಕಡೆಗಳಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕಾಂಗ್ರೆಸ್ ಸರಕಾರದ ಜನ ವಿರೋಧಿ ಧೋರಣೆಯನ್ನು ಜನರಿಗೆ ತಿಳಿಸುವ ಕೆಲಸ ವಾಡುತ್ತೇವೆ. ವಾಲ್ಮೀಕಿ ನಿಗಮದಲ್ಲಿ ಲೂಟಿ ಮಾಡಿದಂತೆ ವಿಬಿ- ಜಿ ರಾಮ್‌ಜಿ ಯೋಜನೆಯಡಿ ಹಣ ಕಬಳಿಸಲು ಸಾಧ್ಯವಾಗದ ಕಾರಣ ಹೊಟ್ಟೆ ಕಿಚ್ಚು ಬಂದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಮೈಸೂರು ನಗರದ ಬಿಜೆಪಿ ಕಚೇರಿಯ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ವಾತನಾಡಿದ ಅವರು, ಶಾಸಕ ಜನಾರ್ಧನ ರೆಡ್ಡಿ ಅವರು ಮತ್ತೆ ಬಿಜೆಪಿಗೆ ವಾಪಾಸ್ ಬಂದಿದ್ದಕ್ಕೆ ಸಹಿಸಿಕೊಳ್ಳದ ಕಾಂಗ್ರೆಸ್ ನಾಯಕರು ಅವರ ವಿರುದ್ಧ ಷಡ್ಯಂತ್ರ ರೂಪಿಸಿ, ಅವರ ಮೇಲೆ ದಾಳಿಗೆ ಮುಂದಾಗಿದ್ದಾರೆ. ಈ ಘಟನೆಯಲ್ಲಿ ಬ್ಯಾನರ್ ವಿಷಯ ನೆಪ ಮಾತ್ರ ಅಷ್ಟೇ. ಕಾರ್ಯಕ್ರಮ ಸ್ಥಳಕ್ಕೂ, ಎಂಎಲ್‌ಎ ನಿವಾಸಕ್ಕೂ ನಾಲ್ಕು ಕಿ.ಮೀ. ದೂರವಿದೆ. ಉದ್ದೇಶ ಪೂರ್ವಕವಾಗಿಯೇ ಶಾಸಕರ ನಿವಾಸದ ಬಳಿ ಫ್ಲೆಕ್ಸ್ ಹಾಕಿ ಗಲಾಟೆ ವಾಡಲಾಗಿದೆ. ಗಲಾಟೆಯಲ್ಲಿ ಗುಂಡು ಹೊಡೆದವರು, ಹೊಡೆಸಿಕೊಂಡವರು ಮತ್ತು ಗುಂಡು ಕಾಂಗ್ರೆಸ್ಸಿನದ್ದೇ ಆಗಿದೆ ಎಂದು ಆರೋಪಿಸಿದರು.

ಬಳ್ಳಾರಿ ಘಟನೆಯನ್ನು ಖಂಡಿಸಿ ಇದೇ ಜ.17ರಂದು ಬಳ್ಳಾರಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಸಮಾವೇಶ ಮಾಡಲು ಪಕ್ಷದ ಕೋರ್ ಕಮಿಟಿ ನಿರ್ಧರಿಸಿದೆ. ಜತೆಗೆ ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ಮಿತಿ ಮೀರಿದ್ದು, ಇದರ ವಿರುದ್ಧ ಹೋರಾಟ ಮಾಡಲು ಮೈಸೂರಿನಲ್ಲಿ ಜ.31ರಂದು ಸವಾವೇಶ ಹಮ್ಮಿಕೊಳ್ಳಲಾಗಿದೆ. ಹಾಗೆೆಯೇ 2 ತಿಂಗಳ ಗೃಹಲಕ್ಷ್ಮೀ ಹಣ ನೀಡದೆ ಜನತೆಗೆ ವಂಚಿಸಿರುವುದರ ವಿರುದ್ಧ ಹುಬ್ಬಳ್ಳಿಯಲ್ಲಿ ಸವಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಯಾವ ಪುರುಷಾರ್ಥಕ್ಕೆ ವಿಶೇಷ ಅಧಿವೇಶನ:

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಹೆಚ್ಚು ದಿನಗಳ ಉದ್ಯೋಗ ಭದ್ರತೆೊಂಂದಿಗೆ ವಿಕಸಿತ ಭಾರತ ಜಿ ರಾಮ್ ಜಿ ಕಾಯ್ದೆನ್ನು ಜಾರಿಗೆ ತರಲು ಮುಂದಾಗಿದೆ. ಇದನ್ನು ಕಾಂಗ್ರೆಸ್ ಸರಕಾರ ವಿರೋಧ ಮಾಡುವ ಜತೆಗೆ ವಿಶೇಷ ಅಧಿವೇಶನ ಕರೆಯುತ್ತಿದೆ. ಈ ಅಧಿವೇಶನ ಯಾವ ಪುರುಷಾರ್ಥಕ್ಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚರ್ಚೆಗೆ ನಾವೂ ಸಿದ್ಧ:

ಜಿ ರಾಮ್ ಜಿ ಕಾಯ್ದೆ ಸಂಬಂಧ ಸಿಎಂ ಅವರು ಬಹಿರಂಗ ಚರ್ಚೆಗೆ ಬರಲು ಹೇಳಿದ್ದಾರೆ. ನಾವು ಸಿದ್ಧರಿದ್ದೇವೆ. ಅವರು ಅಖಾಡ ಸಿದ್ಧಪಡಿಸಿದರೆ, ನಾವು ಚರ್ಚೆಗೆ ಹೋಗುತ್ತೇವೆ. ಸವಾಲನ್ನು ಅವರೇ ಹಾಕಿರುವುದರಿಂದ ಅಖಾಡ ಎಲ್ಲಿ ಎಂಬುದನ್ನು ಅವರೇ ನಿರ್ಧರಿಸಲಿ ಎಂದರು.

ಡಿಕೆಶಿ ಬಂದರೆ ಸೇರಿಸಲ್ಲ:

ಅಧಿಕಾರ ಹಂಚಿಕೆಯಾಗದೇ ಡಿ.ಕೆ.ಶಿವಕುಮಾರ್ ಅವರು ಅತೃಪ್ತಿಯಿಂದ ಬಿಜೆಪಿಗೆ ಬರಲು ಮುಂದಾದರೆ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಪಕ್ಷಕ್ಕೆ ಬರುತ್ತೇನೆ ಎಂದರೆ ಸೇರಿಸಲ್ಲ ಎಂದರು.

ನಾನು ಹೇಳಿದಂತೆ ನವೆಂಬರ್ ಕ್ರಾಂತಿ ಆಗಿದೆ. ಮುಂದೆ ಅಧಿಕಾರ ಹಂಚಿಕೆ ಆಗಲಿದೆ. ಲೀಸ್ ಅವಧಿ ಮುಗಿದ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲಿದ್ದಾರೆ. ಇಲ್ಲವಾದರೆ ಒದ್ದು ಕಿತ್ತುಕೊಳ್ಳುವ ಜಾಯಮಾನದವರಾದ ಡಿ.ಕೆ.ಶಿವಕುಮಾರ್ ಅಧಿಕಾರ ಕಿತ್ತುಕೊಳ್ಳುತ್ತಾರೆ ಎಂದರು.

ಸಂಸದ ಯದುವೀರ್ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ, ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಕಾಂಪೋಸ್ಟ್ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಮೈಸೂರು ಗ್ರಾಮಾಂತರ ಅಧ್ಯಕ್ಷ ಕುಂಬ್ರಳ್ಳಿ ಎನ್.ಸುಬ್ಬಣ್ಣ, ನಗರಾಧ್ಯಕ್ಷ ಎಲ್.ನಾಗೇಂದ್ರ, ರಾಜ್ಯ ವಕ್ತಾರ ಎಂ.ಜಿ.ಮಹೇಶ್, ನಗರ ವಕ್ತಾರ ಎಂ.ವಿ.ಮೋಹನ್, ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಂ.ರಘು, ವಿ.ಸೋಮಸುಂದರ್, ರಘುಮೂರ್ತಿ, ಮಾಜಿ ಮಹಾಪೌರ ಎಸ್.ಸತೀಶ್ ಸ್ವಾಮಿ, ಮಂಡ್ಯ ಜಿಲ್ಲಾ ಅಧ್ಯಕ್ಷ ವೆಂಕಟೇಶ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರೀಕ್ಷಿತ್ ರಾಜ್ ಅರಸ್ ಹಾಜರಿದ್ದರು.

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X