Mysuru | ಸಿಎಂ, ಡಿಸಿಎಂ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ ರಾಹುಲ್ ಗಾಂಧಿ!

ಮೈಸೂರು: ತಮಿಳುನಾಡು ಕಾರ್ಯಕ್ರಮವನ್ನು ಮುಗಿಸಿ ದೆಹಲಿಗೆ ತೆರಳಲು ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಕೆಲಕಾಲ ಚರ್ಚಿಸಿದರು.
ತಮಿಳುನಾಡಿನ ಪ್ರವಾಸ ಕೈಗೊಂಡಿದ್ದ ರಾಹುಲ್ ಗಾಂಧಿ ಮಂಗಳವಾರ ಮಧ್ಯಾಹ್ನ ವಿಮಾನ ಬದಲಾವಣೆಗೆ ಮೈಸೂರಿನ ಏರ್ ಪೋರ್ಟ್ ಗೆ ಆಗಮಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನ ಸ್ವಾಗತಿಸಿದ್ದರು.
ತಮಿಳುನಾಡು ಗೂಡ್ಲೂರು ಕಾರ್ಯಕ್ರಮವನ್ನು ಮುಗಿಸಿ ವಾಪಸ್ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜೊತೆ ಪ್ರತ್ಯೇಕವಾಗಿ ಕೆಲ ಕಾಲ ಚರ್ಚಿಸಿದರು.
ನಾಯಕತ್ವ ಬದಲಾವಣೆ ಚರ್ಚೆ ಸುದ್ದಿಯಾಗಿರುವ ವೇಳೆ ಪ್ರತ್ಯೇಕ ಮಾತುಕತೆ ಸಾಕಷ್ಟು ಕುತೂಹಲ ಮೂಡಿಸಿದೆ.
Next Story





