Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಠಾಣೆಗೆ ನುಗ್ಗುವುದಾಗಿ ಧಮ್ಕಿ ಹಾಕಿರುವ...

ಠಾಣೆಗೆ ನುಗ್ಗುವುದಾಗಿ ಧಮ್ಕಿ ಹಾಕಿರುವ ಪ್ರತಾಪ್‌ ಸಿಂಹ ವಿರುದ್ಧ FIR ದಾಖಲಿಸಿ : ಎಂ.ಲಕ್ಷ್ಮಣ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 Sept 2026 7:46 PM IST
share
ಠಾಣೆಗೆ ನುಗ್ಗುವುದಾಗಿ ಧಮ್ಕಿ ಹಾಕಿರುವ ಪ್ರತಾಪ್‌ ಸಿಂಹ ವಿರುದ್ಧ FIR ದಾಖಲಿಸಿ : ಎಂ.ಲಕ್ಷ್ಮಣ್ ಒತ್ತಾಯ

ಮೈಸೂರು : ಟಿ.ನರಸೀಪುರ ಪೊಲೀಸ್ ಠಾಣೆಗೆ ನುಗ್ಗುವುದಾಗಿ ಧಮ್ಕಿ ಹಾಕಿರುವ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಎಚ್ಚರಿಕೆ ಕೊಟ್ಟಿರುವ ಪ್ರತಾಪ್‌ ಸಿಂಹ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜುರ್ನ ಬಾಲದಂಡಿ ಅವರಿಗೆ ಒತ್ತಾಯಿಸಿದ್ದೇನೆ. ಈ ಸಂಬಂಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಮನವಿ ಮಾಡುತ್ತೇನೆ ಎಂದು ಹೇಳಿದರು.

ಕಳೆದ ವರ್ಷ ಗಣೇಶೋತ್ಸವದ ವೇಳೆ ಮಸೀದಿ ಮುಂದೆ ಕಲ್ಲು ತೂರಾಟ ಮಾಡಿ ಗೊಂದಲ ಸೃಷ್ಟಿಸಲಾಗಿತ್ತು. ಈ ಸಂಬಂಧ ಎಚ್ಚರಿಕೆ ಕೊಟ್ಟಿರುವುದನ್ನು ತಪ್ಪು ಎಂದು ಬಿಂಬಿಸುತ್ತಾ ಠಾಣೆ ಎದುರು ಪ್ರತಿಭಟನೆ ನಡೆಸುವುದು, ಅಧಿಕಾರಿಗಳಿಗೆ ಧಮ್ಕಿ ಹಾಕುವುದು ನಾಚಿಕೆಗೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಟಿ.ನರಸೀಪುರದ ಠಾಣೆಗೆ ಭೇಟಿ ನೀಡಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದೇ ಪೌರುಷವನ್ನು ಕೇಂದ್ರದಿಂದ ಅನುದಾನ ತರಲು ಯಾಕೇ ಬಳಸಬಾರದು? ಕೋಮು ಗಲಭೆ ಸೃಷ್ಟಿಸಲು ಅಶೋಕ್ ನರಸೀಪುರಕ್ಕೆ ಬಂದಿದ್ದಾರೆಯೇ? ಎಂದು ಲಕ್ಷ್ಮಣ್ ಪ್ರಶ್ನಿಸಿದರು.

2028ರ ಚುನಾವಣೆ ಗೆಲ್ಲಲು 2026ರಿಂದಲೇ ಕೋಮು ಗಲಭೆ ಸೃಷ್ಟಿಸಲು ಮುಂದಾಗಿದ್ದಾರೆ. ಶೂದ್ರರು, ದಲಿತರು ಬಿಜೆಪಿ ನಾಯಕರ ಮಾತಿಗೆ ಬಲಿಪಶುಗಳಾಗಬೇಡಿ. ಹಿಂದೂಗಳನ್ನು ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿದ್ದಾರ? ಎಂದರು.

2018ರಿಂದ 2023ರವರೆಗೆ 188 ಮೇಜರ್ ಕಮ್ಯುನಲ್, ಸಾಮಾನ್ಯ 928 ಪ್ರಕರಣಗಳು ದಾಖಲಾಗಿವೆ. 2023ರಿಂದ ಇಲ್ಲಿಯವರೆಗೆ 7 ಮೇಜರ್, 17 ಸಾಮಾನ್ಯ ಕೋಮು ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿಗೆ ಆಕ್ಷೇಪ ವ್ಯಕ್ತಪಡಿಸಿದ ಎಂ. ಲಕ್ಷ್ಮಣ್, ಬಿಜೆಪಿ ನಾಯಕರ ಮೇಲೆ ಯಾಕೆದಾಳಿ ಮಾಡುವುದಿಲ್ಲ ಎಂದು ಪ್ರಶ್ನಿಸಿದರು.

ದಲಿತರನ್ನು ಕಂಡರೆ ಬಿಜೆಪಿ ನಾಯಕರಿಗೆ ಆಗುವುದಿಲ್ಲ. ಕಂದಾಯ, ಲೋಕೋಪಯೋಗಿ, ಗೃಹ ಖಾತೆಗಳನ್ನು ಹೊಂದಿರುವುದನ್ನು ಸಹಿಸದೇ ತಿರುಗಿ ಬಿದ್ದಿದ್ದಾರೆ. ಇನ್ನೂ ಮೂವರ ಮೇಲೆ ದಾಳಿ ನಡೆಯುವ ಮಾಡುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡರುಗಳಾದ ಎಂ.ಶಿವಣ್ಣ, ಬಿ.ಎಂ.ರಾಮು, ದ್ಯಾವಪ್ಪ ನಾಯಕ, ಮಾಧ್ಯಮ ವಕ್ತಾರ ಎಂ.ಮಹೇಶ್ ಉಪಸ್ಥಿತರಿದ್ದರು.

Tags

M.LakshmanPratap Simha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X