Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು ಜಿಲ್ಲೆಯಲ್ಲಿ ಶೇ.20 ಕ್ಕೂ...

ಮೈಸೂರು ಜಿಲ್ಲೆಯಲ್ಲಿ ಶೇ.20 ಕ್ಕೂ ಹೆಚ್ಚು ಮತದಾರರು ಎ.ಎಸ್.ಡಿ.ಡಿ.ಒ ಪಟ್ಟಿಗೆ ಸೇರಿದ್ದು ಹೇಗೆ: ಅಬ್ದುಲ್ ಮಜೀದ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ8 Aug 2026 12:18 AM IST
share
ಮೈಸೂರು ಜಿಲ್ಲೆಯಲ್ಲಿ ಶೇ.20 ಕ್ಕೂ ಹೆಚ್ಚು ಮತದಾರರು ಎ.ಎಸ್.ಡಿ.ಡಿ.ಒ ಪಟ್ಟಿಗೆ ಸೇರಿದ್ದು ಹೇಗೆ: ಅಬ್ದುಲ್ ಮಜೀದ್ ಪ್ರಶ್ನೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಶೇ.94 ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದ್ದರೆ, ಶೇ.20 ಕ್ಕೂ ಹೆಚ್ಚು ಮತದಾರರು ಎ.ಎಸ್.ಡಿ.ಡಿ.ಒ ಪಟ್ಟಿಗೆ ಸೇರಿದ್ದು ಹೇಗೆ? ಚುನಾವಣಾ ಆಯೋಗದ ವಿರುದ್ಧ ಗಂಭೀರ ಅನುಮಾನಗಳು ಮೂಡುತ್ತಿವೆ ಎಂದು ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಿಳಿಸಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2026 ರ ಜೂನ್ 15 ರ ಎಲೆಕ್ಟ್ರೋ ಮ್ಯಾಪಿಂಗ್ ರಿಪೋರ್ಟ್ ಪ್ರಕಾರ, ಮೈಸೂರು ಜಿಲ್ಲೆಯಲ್ಲಿ ಶೇ.96.45 ರಷ್ಟು ಮತದರಾರರ ಮ್ಯಾಪಿಂಗ್ ಪೂರ್ಣಗೊಂಡಿದ್ದು, ಕೇವಲ 99.337 ಮತದಾರರ ಮ್ಯಾಪಿಂಗ್ ಮಾತ್ರ ಬಾಕಿ ಇತ್ತು. ನರಸಿಂಹ ವಿಧಾನಸಭಾ ಕ್ಷೇತ್ರದಲ್ಲಿಯೂ ಶೇ.94.06 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದೆ. ಆದರೆ 2026 ರ ಆಗಸ್ಟ್ 4 ರ ಎನ್ಯೂಮರೇಷನ್ ದಾಖಲೆ ಪ್ರಕಾರ ಮೈಸೂರು ಜಿಲ್ಲೆಯಲ್ಲಿ 5,78,142 ಮತದಾರರನ್ನು ಎ.ಎಸ್.ಡಿ.ಡಿ.ಒ ಪಟ್ಟಿಗೆ ಸೇರಿಸಲಾಗಿದೆ. ಇದರಲ್ಲಿ ನರಸಿಂಹ ವಿಧಾನಸಭಾ ಕ್ಷೇತ್ರದಲ್ಲಿಯೇ 1,09,134 (33.03%)ಮತದಾರರನ್ನು ಎ.ಎಸ್.ಡಿ.ಡಿ.ಓ ಪಟ್ಟಿಗೆ ಸೇರಿಸಲಾಗಿದೆ. ಮೈಸೂರು ನಗರದ ನಾಲ್ಕು ವಿಧಾನಸಭಾ ಕ್ಷೇತ್ರದ ಒಟ್ಟು 3.66 ಲಕ್ಷ ಮತದರಾರರನ್ನು ಎ.ಎಸ್.ಡಿ.ಡಿ.ಒ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಪಿಸಿದರು.

ಶೇ.94 ರಿಂದ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಯಶಸ್ವಿಯಾಗಿ ಪೂರ್ಣಗೊಂಡಿದ್ದರೆ ನಂತರ ಹೇಗೆ ಲಕ್ಷಾಂತರ ಮತದಾರರನ್ನು ಎ.ಎಸ್.ಡಿ.ಡಿ.ಒ ಗೆ ವರ್ಗಾಯಿಸಲಾಯಿತು ಎಂದು ಪ್ರಶ್ನಿಸಿದರು.

ಮ್ಯಾಪಿಂಗ್ ಸಂದರ್ಭದಲ್ಲಿ ಮತದಾರರು ಗುರುತಾಗಿದ್ದರೆ,ಕೇವಲ ಒಂದೂವರೆ ತಿಂಗಳೊಳಗೆ ಗೈರು, ಶಾಶ್ವತ ಸ್ಥಳಾಂತರ, ಅಥವಾ ಇತರೆ ವರ್ಗಕ್ಕೆ ಸೇರಿದರು. ಇದು ಆಡಳಿತಾತ್ಮಕ ವೈಫಲ್ಯವೆ?ಅಥವಾ ಮತದಾರರ ಪಟ್ಟಿಯಲ್ಲಿ ಅನಗತ್ಯವಾಗಿ ಮತದಾರರನ್ನು ಕೈ ಬಿಡುವ ಪ್ರಯತ್ನವೇ? ಎಂದರು.

ಮತದಾರರ ಗಣತಿ ಮತ್ತು ಪರಿಶೀಲನಾ ಪ್ರಕ್ರಿಯೆಯನ್ನು ತಕ್ಷಣವೇ ಕನಿಷ್ಠ ಒಂದು ತಿಂಗಳ ಕಾಲ ವಿಸ್ತರಿಸಬೇಕು, ಎ.ಎಸ್.ಡಿ.ಡಿ.ಒ ಪಟ್ಟಿಗೆ ಸೇರಿಸಿರುವ ಎಲ್ಲಾ ಮತದಾರರ ಮರುಪರಿಶೀಲನೆ ನಡೆಸಬೇಕು, ಶಾಶ್ವತ ಶಿಫ್ಟಿಂಗ್ ಮತ್ತು ಇತರೆ ವರ್ಗೀಕರಣದ ಸಂಪೂರ್ಣ ಮಾನದಂಡಗಳನ್ನು ಸಾರ್ವಜನಿಕಗೊಳಿಸಬೇಕು. ಯಾವುದೇ ಮತದಾರರ ಹೆಸರನ್ನು ಅಂತಿಮ ಮತದಾರರ ಪಟ್ಟಿಯಿಂದ ಕೈ ಬಿಡುವ ಮೊದಲು ಭೌತಿಕ ಪರಿಶೀಲನೆ ಹಾಗೂ ನೈಸರ್ಗಿಕ ನ್ಯಾಯದ ತತ್ವಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಸಂಪೂರ್ಣ ಪ್ರಕ್ರಿಯೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಡಿ.ಪಿ.ಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್, ಜಿಲ್ಲಾಧ್ಯಕ್ಷ ರಫತ್ ಖಾನ್, ಜಿಲ್ಲಾ ಉಪಾಧ್ಯಕ್ಷ ಎಸ್.ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎನ್.ಫಿರ್ದೋಸ್ ಉಪಸ್ಥಿತರಿದ್ದರು.

Tags

MysuruAbdul Majeed
share
ವಾರ್ತಾಭಾರತಿ
ವಾರ್ತಾಭಾರತಿ
Next Story
X