Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಕಾಂಗ್ರೆಸ್ ಒಂದು ವರ್ಗಕ್ಕೆ ಸೀಮಿತವಾದ...

ಕಾಂಗ್ರೆಸ್ ಒಂದು ವರ್ಗಕ್ಕೆ ಸೀಮಿತವಾದ ಪಕ್ಷವಲ್ಲ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Oct 2026 12:06 AM IST
share
ಕಾಂಗ್ರೆಸ್ ಒಂದು ವರ್ಗಕ್ಕೆ ಸೀಮಿತವಾದ ಪಕ್ಷವಲ್ಲ : ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್ ಯಾವುದೋ ಒಂದು ವರ್ಗಕ್ಕೆ ಸೀಮಿತವಾದ ಪಕ್ಷವಲ್ಲ, ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುವ ಪಕ್ಷ, ಗಾಂಧೀಜಿ ನೇತೃತ್ವದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ, ನಮ್ಮ ಪಕ್ಷದ ಸಿದ್ಧಾಂತದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ರಿಂಗ್ ರಸ್ತೆಯಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ರವಿವಾರ ನೂತನ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಬೀರಿಹುಂಡಿ ಬಸವಣ್ಣ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲಿಗೆ ಗ್ರಾ.ಪಂ, ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರಲಿದೆ. ತಾಪಂ, ಜಿಪಂ, ಚುನಾವಣೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳು ಬರಲಿದೆ. ಹೆಚ್ಚಿನ ಶ್ರಮ ಹಾಕಿ ಕಾಂಗ್ರೆಸ್ ಗೆಲ್ಲುವಂತೆ ಮಾಡಬೇಕು, 2028ಕ್ಕೆ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ಮೈಸೂರು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಶಾಸಕರನ್ನು ಗೆಲ್ಲಿಸಬೇಕು. 2029ಕ್ಕೆ ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುವಂತೆ ಮಾಡುವಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ನೂತನ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರಿಗೆ ಶುಭಕೋರಿ ಮಾತನಾಡಿದ ಸಿದ್ದರಾಮಯ್ಯ, ಬೀರಿಹುಂಡಿ ಬಸವಣ್ಣ ಕೇವಲ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಲ್ಲ, ಅವರ ಮೇಲೆ ಜವಾಬ್ದಾರಿ ಹೊರಿಸಲಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಹೇಳಿದರು.

ಬಿಜೆಪಿ ಪಕ್ಷ ಸ್ವಾತಂತ್ರ್ಯಕ್ಕೆ ಹೋರಾಡಿಲ್ಲ. 12 ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರಮೋದಿ ಅವರು ಶಾಶ್ವತವಾದ ಯಾವ ಕೊಡುಗೆಯನ್ನೂ ನೀಡಿಲ್ಲ, ಆದರೆ ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ಕೊಟ್ಟಿದೆ. ಶೇ.12ರಷ್ಟಿದ್ದ ಸಾಕ್ಷರತೆಯನ್ನು ಶೇ.80ಕ್ಕೆ ತಂದಿದೆ. ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿ ಮಾಡಿದೆ. ದೊಡ್ಡ ದೊಡ್ಡ ಅಣೆಕಟ್ಟೆ ಕಟ್ಟಿಸಿದೆ, ವಿದ್ಯುಚ್ಛಕ್ತಿ ನೀಡಿದೆ. ಕೈಗಾರಿಕೆಗಳನ್ನು ನೀಡಿದೆ. ಆದರೆ ಬಿಜೆಪಿಯವರು ಕಾಂಗ್ರೆಸ್ ಸ್ಥಾಪಿಸಿದ ಎಲ್ಲವನ್ನು ಮಾರುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ನಿಕಟಪೂರ್ವ ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಕಾಂಗ್ರೆಸ್ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ, ಶಾಸಕರಾದ ಕೆ.ವೆಂಕಟೇಶ್, ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಣ್, ವಿಧಾನಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಕೆ.ಶಿವಕುಮಾರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಮಾಜಿ ಶಾಸಕರಾದಎಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾಅಮರನಾಥ್, ನಿಗಮ ಮಂಡಳಿ ಅಧ್ಯಕ್ಷರಾದ ರಂಗಸ್ವಾಮಿ, ಎಚ್.ಡಿ.ಗಣೇಶ್, ರಾಮಪ್ಪ, ಹಲವು ಮುಖಂಡರು ಉಪಸ್ಥಿತರಿದ್ದರು.

ಸಿದ್ದರಾಮಯ್ಯರ ರಾಜಕೀಯ ನಡೆ ಅಳಿಸಲು ಸಾಧ್ಯವಿಲ್ಲ: ಡಾ.ಬಿ.ಜೆ.ವಿಜಯಕುಮಾರ್

ಸಿದ್ದರಾಮಯ್ಯ ಅವರ ರಾಜಕೀಯ ನಡೆಯನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ, ಅವರ ಮಾರ್ಗದರ್ಶನದಲ್ಲಿ ನನ್ನ ಕೊನೆ ಉಸಿರಿರುವವರೆಗೂ ಕಾಂಗ್ರೆಸ್ ಪಕ್ಷಕ್ಕಾಗಿ ಸೇವೆ ಸಲ್ಲಿಸುತ್ತೇನೆ ಎಂದು ನಿಕಟಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಹೇಳಿದ್ದಾರೆ.

ನಾನು ರಾಜಕಾರಣಕ್ಕೆ ಬರಬೇಕು ಎಂದುಕೊಂಡಿರಲಿಲ್ಲ, ಆದರೆ ಸಿದ್ದರಾಮಯ್ಯ ಅವರ ಆದರ್ಶ ರಾಜಕಾರಣಕ್ಕೆ ಬರಲು ಕಾರಣ ಆಯಿತು. ನಾನು ಅವರ ಜೊತೆಗೆ ಕೆಲಸ ಮಾಡಿದ್ದೇನೆ. ಅವರ ಹಿರಿಯ ಪುತ್ರ ದಿ.ರಾಕೇಶ್ ಸಿದ್ದರಾಮಯ್ಯ, ಈಗಿನ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಅವರೊಂದಿಗೂ ಕೆಲಸ ಮಾಡಿದ್ದೇನೆ.ಇನ್ನು ಅವರ ಮೊಮ್ಮಗ ಧವನ್ ಅವರೊಂದಿಗೆ ಕೆಲಸ ಮಾಡಬೇಕು ಎಂದು ಹೇಳಿದರು.

Tags

Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X