Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ʼಸಂವಿಧಾನದ ಆಶಯಗಳ ಸಾಕಾರಕ್ಕೆ ಜನಜಾಗೃತಿ...

ʼಸಂವಿಧಾನದ ಆಶಯಗಳ ಸಾಕಾರಕ್ಕೆ ಜನಜಾಗೃತಿ ಅತ್ಯಗತ್ಯʼ : "ಸಂವಿಧಾನದ ಧ್ವನಿ:ಜನರ ಧ್ವನಿ" ಅಭಿಯಾನಕ್ಕೆ ಚಾಲನೆ ನೀಡಿ ಸಿದ್ದರಾಮಯ್ಯ ನುಡಿ

ನೇರಳೆ ಸತೀಶ್ ಕುಮಾರ್/ವಾರ್ತಾಭಾರತಿನೇರಳೆ ಸತೀಶ್ ಕುಮಾರ್/ವಾರ್ತಾಭಾರತಿ26 Nov 2026 10:10 PM IST
share
ʼಸಂವಿಧಾನದ ಆಶಯಗಳ ಸಾಕಾರಕ್ಕೆ ಜನಜಾಗೃತಿ ಅತ್ಯಗತ್ಯʼ : ಸಂವಿಧಾನದ ಧ್ವನಿ:ಜನರ ಧ್ವನಿ ಅಭಿಯಾನಕ್ಕೆ ಚಾಲನೆ ನೀಡಿ ಸಿದ್ದರಾಮಯ್ಯ ನುಡಿ

ಮೈಸೂರು : ಸಂವಿಧಾನ ಅಂಗೀಕಾರವಾಗಿ 77 ವರ್ಷಗಳು ಕಳೆದಿದ್ದರೂ ಅದರ ಆಶಯಗಳು ಸಂಪೂರ್ಣವಾಗಿ ಈಡೇರಿಲ್ಲ. ಸಂವಿಧಾನದ ಆಶಯಗಳು ಪ್ರತಿಯೊಬ್ಬರಿಗೂ ಅರ್ಥವಾಗಬೇಕು, ಸಂವಿಧಾನದ ಧ್ವನಿ ಜನರ ಧ್ವನಿಯಾಗಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಗುರುವಾರ ಸಂವಿಧಾನ ದಿನಾಚರಣೆಯ ಅಂಗವಾಗಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಆಯೋಜಿಸಿದ್ದ ‘ಸಂವಿಧಾನದ ಧ್ವನಿ – ಜನರ ಧ್ವನಿ’ ಜನಜಾಗೃತಿ ಕಾರ್ಯಕ್ರಮದಲ್ಲಿ ಕಿಕ್ಕಿರಿದು ತುಂಬಿದ ಜನಸ್ತೋಮದ ನಡುವೆ ಗಿಡಕ್ಕೆ ನೀರೆರೆದು ಬಳಿಕ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಪರವಾಗಿರುವವರು ಯಾರು, ಮನುಸ್ಮೃತಿಯ ಪರವಾಗಿರುವವರು ಯಾರು ಎಂಬುದನ್ನು ಜನರು ಗುರುತಿಸಿಕೊಳ್ಳಬೇಕು. ಸಂವಿಧಾನ ಮತ್ತು ಅಂಬೇಡ್ಕರ್ ಅವರ ವಿಚಾರಧಾರೆಗೆ ಬದ್ಧರಾಗಿರುವುದು ಕೇವಲ ಮಾತುಗಳಿಗೆ ಸೀಮಿತವಾಗಬಾರದು. ನಮ್ಮ ನಡೆ ಮತ್ತು ನಿಲುವುಗಳಲ್ಲಿಯೂ ಆ ಬದ್ಧತೆ ಪ್ರತಿಫಲಿಸಬೇಕು ಎಂದು ತಿಳಿಸಿದರು.

ಸಂವಿಧಾನದ ಆಶಯಗಳ ಸಾಕಾರಕ್ಕೆ ಜನರು ಜಾಗೃತರಾಗುವುದು ಅತ್ಯಂತ ಮುಖ್ಯವಾಗಿದೆ. ಕಳೆದ ಒಂದು ವರ್ಷದಿಂದ ಸಂವಿಧಾನದ ಕುರಿತು ಜನಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತರಾಗಿರುವ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ಜನಜಾಗೃತಿ ಕಾರ್ಯಕ್ರಮಗಳಿಗೆ ತಮ್ಮ ಸಹಕಾರವಿರಲಿದೆ. ಸಾಧ್ಯವಾದ ಕಡೆಯಲ್ಲೆಲ್ಲ ತಾವೂ ಭಾಗವಹಿಸುವುದಾಗಿ ತಿಳಿಸಿದರು.

ಸಾಹಿತಿ ಬರಗೂರು ರಾಮಚಂದ್ರಪ್ಪ ಮಾತನಾಡಿ, ಕರ್ನಾಟಕದಲ್ಲಿ ಸಂವಿಧಾನ ಓದು, ಸಂವಿಧಾನ ಪೀಠಿಕೆ ಓದು ಸೇರಿ ಅನೇಕ ಜಾಗೃತಿ ಆಗಿದೆ ಎಂದರು.

ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು. ಇಂದೂಧರ ಹೊನ್ನಾಪುರ ಪ್ರಸ್ತಾವಿಕ ನುಡಿಗಳನ್ನಾಡಿದರು. ದಸಂಸ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಡಿ.ಜಿ ಸಾಗರ್, ಎನ್.ವೆಂಕಟೇಶ್, ವಿ.ನಾಗರಾಜ್, ಹರಿಹರ ಆನಂದಸ್ವಾಮಿ, ಪುರುಷೋತ್ತಮ, ಎನ್. ಭಾಸ್ಕರ್, ಅಹಿಂದ ಜವರಪ್ಪ, ದೇವಗಳ್ಳಿ ಸೋಮಶೇಖರ್, ಮಾಜಿ ಮೇಯರ್ ನಾರಾಯಣ, ಹೊರೆಯಾಲ ಗೋಪಾಲ್, ಎ.ಆರ್.ಕಾಂತರಾಜು, ಬೆಟ್ಟಯ್ಯ ಕೋಟೆ, ಆಲಗೂಡು ಶಿವಕುಮಾರ್, ಶಂಭುಲಿಂಗಸ್ವಾಮಿ, ಹೊಸಕೋಟೆ ಬಸವರಾಜು, ಚುಂಚನಹಳ್ಳಿ ಮಲ್ಲೇಶ, ಸಿದ್ಧರಾಜು, ದ್ಯಾವಪ್ಪ ನಾಯಕ, ಮೋಹನ್ ಕುಮಾರಗೌಡ, ಸುಮನಾ, ಕಲ್ಲಹಳ್ಳಿ ಕುಮಾರ್, ಮಾಧ್ಯಮ ಸಲಹೆಗಾರ ರಮೇಶ್ ಮುಂತಾದವರು ಇದ್ದರು.

ಶಕ್ತಿ ಪ್ರದರ್ಶನ ಅಲ್ಲ : ಎಚ್.ಸಿ.ಮಹದೇವಪ್ಪ

ಸಂವಿಧಾನ ಜಾಗೃತಿ ಅಭಿಯಾನ ಶಕ್ತಿ ಪ್ರದರ್ಶನ ಅಲ್ಲ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಸಂವಿಧಾನದ ಬಗ್ಗೆ ಸಮಗ್ರವಾಗಿ ಚರ್ಚಿಸಲು ಪ್ರಯತ್ನಗಳು ಆರಂಭವಾದಾಗ ರಾಜಕೀಯ ಅರ್ಥ ಬಂತು. ಸಂವಿಧಾನ ವಿಷಯದಲ್ಲಿ ಜಿಜ್ಞಾಸೆ ಬೇಡ. ಸಂವಿಧಾನ ಜಾಗೃತಿ ಸವಾಲು ಅಲ್ಲ. ಎಲ್ಲರ ಒಳಗೊಳ್ಳುವ ಆಶಯದಲ್ಲಿ ಕಾರ್ಯಕ್ರಮ ರೂಪಿಸಿದೆವು ಎಂದು ತಿಳಿಸಿದರು.

ಒಂದು ವರ್ಷದ ಸಂವಿಧಾನ ಜಾಗೃತಿ ಅಭಿಯಾನವನ್ನು ಚಳವಳಿಯಾಗಿ ರೂಪಿಸಿ ವರ್ತಮಾನದ ಬಿಕ್ಕಟ್ಟುಗಳಿಗೆ ಉತ್ತರ ಕಂಡುಕೊಳ್ಳಲಿದ್ದೇವೆ. ಜೈ ಬಾಪು, ಜೈ ಭೀಮ್, ಜೈ ಸಂವಿಧಾನದ ಘೋಷಣೆಯಲ್ಲಿ ಬಲಿಷ್ಠ ಭಾರತ ಕಟ್ಟಬಹುದಾಗಿದೆ ಎಂದರು.

13 ಕೋಟಿ ಮತದಾರರನ್ನು ಅತ್ಯಂತ ಸುಲಭವಾಗಿ ಹೊರಗಿಡಲಾಗಿದೆ : ವೈ.ಎಸ್.ಖುರೇಷಿ ಆತಂಕ

ಒಬ್ಬನೇ ಒಬ್ಬ ಮತದಾರನಿಗಾಗಿ ಮತಗಟ್ಟೆಯನ್ನು ಸ್ಥಾಪಿಸಿ, ಇಡೀ ಚುನಾವಣಾ ಸಿಬ್ಬಂದಿ ಕಾಯುತ್ತಿದ್ದ ವ್ಯವಸ್ಥೆ ನಮ್ಮಲ್ಲಿತ್ತು. ಆದರೆ, ಇಂದು 13 ಕೋಟಿ ಮತದಾರರನ್ನು ಅತ್ಯಂತ ಸುಲಭವಾಗಿ ಹೊರಗಿಡಲಾಗಿದೆ ಎಂದು ನಿವೃತ್ತ ಭಾರತದ ಮುಖ್ಯ ಚುನಾವಣಾ ಆಯುಕ್ತ ವೈ.ಎಸ್.ಖುರೇಷಿ ಆತಂಕ ವ್ಯಕ್ತಪಡಿಸಿದರು.

ಅರ್ಹ ಮತದಾರರನ್ನು ಅನಗತ್ಯ ವಸ್ತುವಿನಂತೆ ಪರಿಗಣಿಸಲಾಗಿದೆ. ಇದು ಅತ್ಯಂತ ಆಘಾತಕಾರಿ ಸಂಗತಿ. ಚುನಾವಣಾ ಆಯೋಗವು ಜನರ ಅಗತ್ಯಗಳಿಗೆ ಸ್ಪಂದಿಸುವ ಸಂಸ್ಥೆಯಾಗಿರಬೇಕಿತ್ತು. ಕೇವಲ ಇಂದು ಮಾತ್ರವಲ್ಲ, ಯಾವಾಗಲೂ ಹಾಗೆಯೇ ಇರಬೇಕು ಎಂದು ಹೇಳಿದರು.

Tags

Siddaramaiah
share
ನೇರಳೆ ಸತೀಶ್ ಕುಮಾರ್/ವಾರ್ತಾಭಾರತಿ
ನೇರಳೆ ಸತೀಶ್ ಕುಮಾರ್/ವಾರ್ತಾಭಾರತಿ

ನೇರಳೆ ಸತೀಶ್ ಕುಮಾರ್ ಅವರು ಕಳೆದ 20 ವರ್ಷಗಳಿಂದ ಪತ್ರಿಕೋದ್ಯಮ‌ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ನಂಜನಗೂಡಿನಿಂದ ಪತ್ರಿಕೋದ್ಯಮ ಆರಂಭಿಸಿದ ಅವರು, ಮೈಸೂರು, ಬೆಂಗಳೂರು ನಗರಗಳಲ್ಲಿ ಹಲವಾರು ಜಿಲ್ಲಾ ಮತ್ತು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ವರದಿಗಾರ ಮತ್ತು ಉಪ ಸಂಪಾದಕನಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕಳೆದ 9 ವರ್ಷಗಳಿಂದ ವಾರ್ತಾಭಾರತಿ ಪತ್ರಿಕೆಯಲ್ಲಿ ಮೈಸೂರು ಜಿಲ್ಲಾ ವರದಿಗಾರರಾಗಿಕರ್ತವ್ಯ ನಿರ್ವಹಿಸುತ್ತಿದ್ದಾರೆ.

Next Story
X