Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದನ್ನು...

ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದನ್ನು ಸಹಿಸಲ್ಲ: ಸಿದ್ಧರಾಮಯ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ10 Nov 2025 2:43 PM IST
share
ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದನ್ನು ಸಹಿಸಲ್ಲ: ಸಿದ್ಧರಾಮಯ್ಯ ಎಚ್ಚರಿಕೆ
ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ 14ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಎಂ ಅಸಮಾಧಾನ

ಮೈಸೂರು, ನ.10: ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಝೀರ್ ಸಾಬ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಕರ್ನಾಟಕ ತ್ರೈಮಾಸಿಕ ಅಭಿವೃದ್ಧಿ (ಕೆಡಿಪಿ) ಸಭೆ ನಡೆಸಿ ಮಾತನಾಡಿದ ಮುಖ್ಯಮಂತ್ರಿ, ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ಬರುತ್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿಯವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯುಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿದ್ದರೇ? ಜನರನ್ನು ಅಲೆದಾಡಿಸುವುದು ಅಕ್ಷಮ್ಯ, ಇದನ್ನು ನಾನು ಸಹಿಸಲ್ಲ ಎಂದು ಹೇಳಿದರು.

ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು ಎಂದು ಸಿಎಂ ಸೂಚಿಸಿದರು.

ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು ಎನ್ನುವ ಸೂಚನೆ ನೀಡಿದ್ದೆ, ಆದರೆ ಆ ಕೆಲಸ ಆಗುತ್ತಿಲ್ಲ. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸಿಎಂ ಸೂಚಿಸಿದರು.

ಶಿಕ್ಷಣ ಸೂಚ್ಯಂಕದಲ್ಲಿ ಕುಸಿತಕ್ಕೆ ಅಸಮಾಧಾನ

ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿ, ಹೊಸದಾಗಿ ಬಂದಿರುವ ಡಿಡಿಪಿಐಗೆ ನಿಮ್ಮ ಅವಧಿಯಲ್ಲಿ ಉತ್ತಮ ಫಲಿತಾಂಶ ಬರಬೇಕು. ನಾನು ಗಮನಿಸುತ್ತಾ ಇರುತ್ತೇನೆ. ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ಧಪಡಿಸಿ ಎಂದು ಹೇಳಿದರು.

ಮೈಸೂರು, ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಇಲ್ಲೇ ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳರಿಂದ 14ನೇ ಸ್ಥಾನಕ್ಕೆ ಕುಸಿದಿರುವುದು ಸರಿಯಲ್ಲ, ಆದಷ್ಟು ಬೇಗ ಪರಿಸ್ಥಿತಿ ಸುಧಾರಿಸಬೇಕು ಎಂದು ಎಚ್ಚರಿಕೆ ನೀಡಿದರು.

ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪೂರ್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು.

ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎನ್ನುವ ನಾನು ಕೊಟ್ಟ ಸೂಚನೆ ಪಾಲನೆ ಆಗುತ್ತಿಲ್ಲ. ಇನ್ ಸ್ಪೆಕ್ಟರ್ ಗಳು, ಪಿಡಿಒಗಳು, ವಿಎ ಗಳ ಮೇಲೆ ಈ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿ ತಹಶೀಲ್ದಾರ್ ಕಚೇರಿಗಳಿಗೆ ಗೌಪ್ಯ ಭೇಟಿ ನೀಡಿದರೆ ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ. ಇಲ್ಲಿಯವರೆಗೂ ಯಾರ ವಿರುದ್ಧವೂ ದೂರು ಬಂದಿಲ್ಲ. ವರದಿ ಬಂದಿಲ್ಲ ಏಕೆ ಎಂದು ಪ್ರಶ್ನಿಸಿದರು.

ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರನ್ನೇ ಹಿಡ್ಕೊಂಡು ಬರ್ತೀರರಿ... ಇದು ಕೆಟ್ಟ ನಡವಳಿಕೆ, ನಾನು ಸಹಿಸಲ್ಲ. ಕಾರ್ಯಕರ್ತರಿಗೂ ಕೆಟ್ಟ ಹೆಸರು ತರುತ್ತೀರಿ. ಸರ್ಕಾರಕ್ಕೂ ಕೆಟ್ಟ ಹೆಸರು ತರಲು ಮುಂದಾದರೆ ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.

ಐತಿಹಾಸಿಕ ದಸರಾ ಹಬ್ಬವನ್ನು ಅತ್ಯಂತ ಅರ್ಥಪೂರ್ಣವಾಗಿ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಡಳಿತದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಸಿಎಂ ಅಭಿನಂದನೆ ಸಲ್ಲಿಸಿದರು.

ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ಸಭೆಗೆ ಗೈರು ಆಗಿರುವ ಅಧಿಕಾರಿ ಮತ್ತು ಸಿಬ್ಬಂದಿ ಯಾರಾದರೂ ಇದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಸುನೀಲ್ ಬೋಸ್, ಶಾಸಕರುಗಳಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಡಾ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವ ಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿ.ಪಂ. ಸಿಇಓ ಎಸ್.ಯುಕೇಶ್ ಕುಮಾರ್, ದಕ್ಷಿಣ ವಲಯ ಡಿಐಜಿ ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ನಗರ ಪಾಲಿಕೆ ಆಯುಕ್ತ ಆಸಿಫ್ ತನ್ವೀರ್ ಸೇಠ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X