Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕುಸ್ತಿ...

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕುಸ್ತಿ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ

ದಸರಾಗೆ ಮಾತ್ರ ಕುಸ್ತಿ ಸೀಮಿತಗೊಳ್ಳದೆ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವ ಕೆಲಸ ಮಾಡಬೇಕಿದೆ: ಸಚಿವ ಡಾ.ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ22 Sept 2024 11:24 PM IST
share
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕುಸ್ತಿ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು: ದಸರಾ ಗೆ ಮಾತ್ರ ಕುಸ್ತಿ ಪಂದ್ಯಾವಳಿ ಸೀಮಿತಗೊಳ್ಳದೆ ರಾಷ್ಟ್ರಮಟ್ಟಕ್ಕೂ ಕೊಂಡೊಯ್ಯುವ ಕೆಲಸವನ್ನು ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ನಗರದ ದೊಡ್ಡಕೆರೆ ಮೈದಾನದ ವಸ್ತು ಪ್ರದರ್ಶನದ ಆವರಣದಲ್ಲಿರುವ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ರವಿವಾರ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು.

ಅಂದಿನ ಮೈಸೂರು ಮಹರಾಜರು ಕುಸ್ತಿಗೆ ಹೆಚ್ಚಿನ ಒತ್ತು ನೀಡಿದ್ದರಿಂದ ಇಲ್ಲಿನ‌ ಕುಸ್ತಿ ಪಟುಗಳು ರಾಜ್ಯ ದೇಶದಲ್ಲೇ ಪರಿಣಿತಿ ಹೊಂದುವಂತೆ ಮಾಡಿದ್ದರು. ಹಾಗಾಗಿ ಮೈಸೂರಿನ‌ ಕುಸ್ತಿ ಪೈಲ್ವಾನರಾದ ಪೈಲ್ವಾನ್ ರುದ್ರ, ಮೂಗ, ಬಾಲಾಜಿ, ನಂಜನಗೂಡು ನಂಜಯ್ಯ, ಜಿಂದಾಲ್ ರಿಯಾಝ್ ಸೇರಿದಂತೆ ಅನೇಕರು ಪ್ರಸಿದ್ಧಿಗೊಂಡಿದ್ದರು ಎಂದು ಹೇಳಿದರು.

ಈ ಹಿಂದೆ ಕುಸ್ತಿಗಳು ಎಂದರೆ ಜನ ಮುಗಿಬಿದ್ದು ನೋಡುತ್ತಿದ್ದರು.‌ನಾನು ಸಹ ಹಲಾವರು ಕುಸ್ತಿಗಳನ್ನು ನೋಡಿ ಆನಂದಿಸಿದ್ದೇನೆ. ಈಗ ಕುಸ್ತಿ ಕ್ರೀಡೆ ಕಡಿಮೆಯಾಗುತ್ತಿದೆ.‌ ಹಾಗಾಗಿ ದಸರ ಮುಗಿದ ನಂತರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕುಸ್ತಿ ಕ್ರೀಡೆ ಅಭಿವೃದ್ಧಿಪಡಿಸಲು ಕ್ರಮ ವಹಿಸುತ್ತೇನೆ ಎಂದು ಹೇಳಿದರು.

ಕ್ರೀಡೆ ಜನರನ್ನು ಒಟ್ಟಿಗೆ ಕೊಂಡೊಯ್ಯುವಂತೆ ಮಾಡುತ್ತದೆ. ಕುಸ್ತಿ ಕ್ರೀಡೆಯನ್ನು ಉಳಿಸಿ ಬೆಳೆಸಿ ರಾಷ್ಟ್ರಮಟ್ಟಕ್ಕೆ ಕ್ರೀಡಾಪಟುಗಳನ್ನು ಕೊಂಡೊಯ್ಯುವಂತೆ ಮಾಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಎಸ್ಪಿ, ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ, ಡಿವೈಎಸ್ಪಿ ರಘು ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X