ಮೈಸೂರು ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು ಅನುದಾನ ನೀಡಿದ್ದಾರೆ : ಡಾ.ಯತೀಂದ್ರ

ಯತೀಂದ್ರ ಸಿದ್ದರಾಮಯ್ಯ
ಮೈಸೂರು : ಮೈಸೂರು ನಗರದ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗಿಂತಲೂ ಹೆಚ್ಚು ಅಥವಾ ಅಷ್ಟೇ ಪ್ರಮಾಣದಲ್ಲಿ ಅನುದಾನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಕ್ಕೆ ಸಿದ್ಧರಾಮಯ್ಯ ಅವರು ಸಾಕಷ್ಟು ಅನುದಾನ ಕೊಟ್ಟು ಅಭಿವೃದ್ಧಿ ಪಡಿಸಿದ್ದಾರೆ. ಅದಕ್ಕಾಗಿಯೇ ಸಾಧನಾ ಸಮಾವೇಶ ಮಾಡಿದೆವು. ವಿರೋಧ ಪಕ್ಷದವರು ಸುಮ್ಮನೇ ಟೀಕಿಸುತ್ತಾರೆ ಎಂದು ಹೇಳಿದರು.
Next Story





