Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ...

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭಾರತೀಯನನ್ನು ಕಳುಹಿಸಲು ಮುಂದಾದ ನಾಸಾ

ವಾರ್ತಾಭಾರತಿವಾರ್ತಾಭಾರತಿ29 Nov 2023 7:44 AM IST
share
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭಾರತೀಯನನ್ನು ಕಳುಹಿಸಲು ಮುಂದಾದ ನಾಸಾ

ಹೊಸದಿಲ್ಲಿ: ಬಾಹ್ಯಾಕಾಶ ಪಯಣವನ್ನು 1984ರಲ್ಲಿ ಕೈಗೊಂಡ ರಾಕೇಶ್ ಶರ್ಮಾ, ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬಳಿಕ ಮತ್ತೊಬ್ಬ ಭಾರತೀಯರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲು ನಾಸಾ ಮುಂದಾಗಿದೆ. 2024ರ ಕೊನೆಯ ಒಳಗಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭಾರತೀಯ ಬಾಹ್ಯಾಕಾಶ ತಜ್ಞರೊಬ್ಬರನ್ನು ಕಳುಹಿಸುವ ಉದ್ದೇಶದಿಂದ ನಾಸಾ ಅವರಿಗೆ ತರಬೇತಿ ನೀಡಲಿದೆ ಎಂದು ನಾಸಾ ಆಡಳಿತಾಧಿಕಾರಿ ಬಿಲ್ ನೆಲ್ಸನ್ ಮಂಗಳವಾರ ಪ್ರಕಟಿಸಿದ್ದಾರೆ.

"ಈ ಬಾಹ್ಯಾಕಾಶ ಯಾನಿಯ ಆಯ್ಕೆಯನ್ನು ಇಸ್ರೋ ಮಾಡಲಿದೆ. ನಾಸಾ ಇದರ ಭಾಗವಾಗಿರುವುದಿಲ್ಲ, ಈ ಮಿಷನ್ ವಿವರಗಳನ್ನು ಇಸ್ರೋ ಸಿದ್ಧಪಡಿಸುತ್ತಿದೆ" ಎಂದು ಭಾರತ- ಅಮೆರಿಕ ಬಾಹ್ಯಾಕಾಶ ಸಹಕಾರವನ್ನು ವೃದ್ಧಿಸುವ ಸಲುವಾಗಿ ಭಾರತದ ಹಲವು ನಗರಗಳಿಗೆ ಭೇಟಿ ನೀಡಿರುವ ನೆಲ್ಸನ್ ಸ್ಪಷ್ಟಪಡಿಸಿದ್ದಾರೆ.

"ಭಾರತ ಅಮೆರಿಕದ ಪಾಲಿಗೆ ಶ್ರೇಷ್ಠ ಪಾಲುದಾರ ಹಾಗೂ ಬಾಹ್ಯಾಕಾಶ ಕ್ಷೇತ್ರದ ಚಟುವಟಿಕೆಗಳಲ್ಲಿ ಉತ್ತಮ ಭವಿಷ್ಯ ಇರುವ ಪಾಲುದಾರ ದೇಶವಾಗಿದೆ. ಅಮೆರಿಕ ಮುಂದಿನ ವರ್ಷ ಹಲವು ಖಾಸಗಿ ಲ್ಯಾಂಡರ್ ಗಳನ್ನು ದಕ್ಷಿಣ ಧ್ರುವದಿಂದ ಚಂದ್ರನತ್ತ ಕಳುಹಿಸಲಿದೆ. ಆದರೆ ವಾಸ್ತವವೆಂದರೆ, ಅಲ್ಲಿ ಪ್ರಥಮ ಬಾರಿಗೆ ಇಳಿದಿರುವ ಹೆಗ್ಗಳಿಗೆ ಭಾರತದ್ದು, ಇದು ಶ್ಲಾಘನೀಯ" ಎಂದು ನಾಸಾ ಮುಖ್ಯಸ್ಥರು ಅಭಿಪ್ರಾಯಪಟ್ಟರು.

ಭಾರತದ ಬಾಹ್ಯಾಕಾಶ ತಂತ್ರಜ್ಞಾನ ಖಾತೆ ಸಚಿವ ಜಿತೇಂದ್ರ ಸಿಂಗ್ ಜತೆ ಮಾತುಕತೆ ನಡೆಸಿದ ಅಮೆರಿಕ ನಿಯೋಗದ ನೇತೃತ್ವವನ್ನು ನೆಲ್ಸನ್ ವಹಿಸಿದ್ದರು. ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಗಾಗಿ ಅವರು ಈ ಸಂದರ್ಭದಲ್ಲಿ ಭಾರತವನ್ನು ಅಭಿನಂದಿಸಿದರು.

Tags

NASAInternational Space Station
share
ವಾರ್ತಾಭಾರತಿ
ವಾರ್ತಾಭಾರತಿ
Next Story
X