ಅಡ್ವಾಣಿ ಚೇತರಿಕೆ, ಆಸ್ಪತ್ರೆಯಿಂದ ಬಿಡುಗಡೆ

ಅಡ್ವಾಣಿ | PC : X
ಹೊಸದಿಲ್ಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಅಖಿಲ ಭಾರತ ವೈದ್ಯ ವಿಜ್ಞಾನ (ಎಐಐಎಂಎಸ್)ಸಂಸ್ಥೆಗೆ ಬುಧವಾರ ರಾತ್ರಿ ದಾಖಲಾಗಿದ್ದ ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ಧುರೀಣ ಲಾಲ್ಕೃಷ್ಣ ಅಡ್ವಾಣಿ ಅವರು ಗುರುವಾರ ಬಿಡುಗಡೆಗೊಂಡಿದ್ದಾರೆ.
ವೃದ್ಧಾಪ್ಯಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಕಾರಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ 10:30ರ ವೇಳೆಗೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರನ್ನು ಬಿಡುಗಡೆಗೊಳಿಸಲಾಗಿದೆಯೆಂದು ಏಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಡ್ವಾಣಿ ಅವರ ದೇಹಪರಿಸ್ಥಿತಿ ಈಗ ಸ್ಥಿರವಾಗಿದೆಯೆಂದು ಆಸ್ಪತ್ರೆಯ ಮೂಲಗಳು ತಿಳಿಸವೆ.
Next Story





