Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಹಗರಣ...

ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಹಗರಣ ಬಯಲಿಗೆ: ಸ್ಕಾಲರ್ಶಿಪ್ ಪಡೆಯುತ್ತಿದ್ದ ಶೇ.53ರಷ್ಟು ಶಿಕ್ಷಣಸಂಸ್ಥೆಗಳು ‘ನಕಲಿ’; ವರದಿ

ಸಿಬಿಐ ತನಿಖೆಗೆ ಕೇಂದ್ರ ಸರಕಾರ ಆದೇಶ ► ರಾಜ್ಯದ ಶೇ.64ರಷ್ಟು ಶಿಕ್ಷಣ ಸಂಸ್ಥೆಗಳು ನಕಲಿ

ವಾರ್ತಾಭಾರತಿವಾರ್ತಾಭಾರತಿ19 Aug 2023 10:19 PM IST
share
ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಹಗರಣ ಬಯಲಿಗೆ: ಸ್ಕಾಲರ್ಶಿಪ್ ಪಡೆಯುತ್ತಿದ್ದ ಶೇ.53ರಷ್ಟು ಶಿಕ್ಷಣಸಂಸ್ಥೆಗಳು ‘ನಕಲಿ’; ವರದಿ

ಹೊಸದಿಲ್ಲಿ: ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ ವಿತರಣೆಯಲ್ಲಿ ನಡೆದಿರುವ ಬೃಹತ್ ಹಗಣವೊಂದು ಬಯಲಿಗೆ ಬಂದಿದೆ. ಅಲ್ಪಸಂಖ್ಯಾತರ ಸ್ಕಾಲರ್ಶಿಪ್ ಕಾರ್ಯಕ್ರಮದಡಿ ಸಕ್ರಿಯವಾಗಿರುವ ಶೇ.53ರಷ್ಟು ಶಿಕ್ಷಣಸಂಸ್ಥೆಗಳು ‘ನಕಲಿ’ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ನಡೆಸಿದ ತನಿಖೆಯಿಂದ ಪತ್ತೆಯಾಗಿರುವುದಾಗಿ India Today ಸುದ್ದಿಸಂಸ್ಥೆ ವರದಿ ಮಾಡಿದೆ. ಇಂತಹ ಸುಮಾರು 830 ಶಿಕ್ಷಣ ಸಂಸ್ಥೆಗಳಲ್ಲಿ ಭ್ರಷ್ಟಾಚಾರವು ಆಳವಾಗಿ ಬೇರೂರಿದ್ದು ಕಳೆದ 5 ವರ್ಷಗಳಲ್ಲಿ ಒಟ್ಟು 144.83 ಕೋಟಿ ರೂ.ವಿದ್ಯಾರ್ಥಿವೇತನ ಹಗರಣ ನಡೆದಿದೆ ಎಂದು ಅದು ಹೇಳಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಈ ಹಗರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ್ದಾರೆಂದು India Today ವರದಿ ಮಾಡಿದೆ.

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಜುಲೈ 10ರಂದು ಅಧಿಕೃತವಾಗಿ ಈ ವಿಷಯವಾಗಿ ದೂರೊಂದನ್ನು ದಾಖಲಿಸಿತ್ತು. ದೇಶಾದ್ಯಂತ 34 ರಾಜ್ಯ/ ಕೇಂದ್ರಾಡಳಿತಗಳ 1572 ಶಿಕ್ಷಣ ಸಂಸ್ಥೆಗಳ ಪರಿಶೀಲನೆ ನಡೆಸಲಾಗಿದ್ದು, ಈ ಪೈಕಿ 830 ಶಿಕ್ಷಣಸಂಸ್ಥೆಗಳು ವಂಚನಾತ್ಮಕ ಚಟುವಟಿಕೆಗಳಲ್ಲಿ ನಿರತವಾಗಿರುವುದು ತನಿಖೆಯಿಂದ ಪತ್ತೆಯಾಗಿದೆ ಎಂದು ವರದಿಯಾಗಿದೆ.

1.80 ಲಕ್ಷ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯದ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ವಿಸ್ತರಿಸಲಾಗಿದ್ದು, ಇದು 1ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗಿನ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಮೀಸಲಾದ ಈ ವಿದ್ಯಾರ್ಥಿ ವೇತನದ ಹಣವನ್ನು ಪ್ರತಿ ವರ್ಷವೂ ಶಿಕ್ಷಣಸಂಸ್ಥೆಗಳು ಪಡೆದುಕೊಳ್ಳುತ್ತಿದ್ದವು ಎಂದು ವರದಿ ತಿಳಿಸಿದೆ.

ಚತ್ತೀಸ್ಗಡ, ರಾಜಸ್ಥಾನ, ಅಸ್ಸಾಂ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿವೇತನವನ್ನು ದಕ್ಕಿಸಿಕೊಳ್ಳುತ್ತಿರುವ ಹಲವಾರು ಶಿಕ್ಷಣಸಂಸ್ಥೆಗಳು ನಕಲಿ ಅಥವಾ ಕಾರ್ಯನಿರ್ವಹಿಸುತ್ತಿಲ್ಲವೆಂಬುದು ಬೆಳಕಿಗೆ ಬಂದಿದೆ. ಕರ್ನಾಟಕದಲ್ಲಿ ಪರಿಶೀಲನೆಗೊಳಪಟ್ಟ ಶೇ.64 ಶಿಕ್ಷಣ ಸಂಸ್ಥೆಗಳು ನಕಲಿ ಎಂಬುದು ಪತ್ತೆಯಾಗಿದೆ.

► ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬ್ಯಾಂಕೊಂದರ ಮೂಲಕ 66 ಸಾವಿರ ಸ್ಕಾಲರ್ಶಿಪ್ ಗಳನ್ನು ವಿತರಿಸಲಾಗಿದ್ದು, ಇದು ವಿದ್ಯಾರ್ಥಿವೇತನಕ್ಕಾಗಿ ನೋಂದಾಯಿಸಲ್ಪಟ್ಟ ಅರ್ಹ ವಿದ್ಯಾರ್ಥಿಗಳ ಸಂಖ್ಯೆಗಿಂತಲೂ ಅಧಿಕವಾಗಿದೆ.

► ಜಮ್ಮುಕಾಶ್ಮೀರದ ಆನಂತನಾಗ್ನ ಕಾಲೇಜೊಂದರಲ್ಲಿ 5 ಸಾವಿರ ನೋಂದಾಯಿತ ವಿದ್ಯಾರ್ಥಿಗಳಿಗೆ 7 ಸಾವಿರ ಸ್ಕಾಲರ್ಶಿಪ್ ವಿತರಿಸಲಾಗಿದೆ.

ತನಿಖೆಯಲ್ಲಿ ಬೆಳಕಿಗೆ ಬಂದ ಪ್ರಮುಖ ಅಂಶಗಳು

►ಪರಿಶೀಲನೆಗೊಳಪಟ್ಟ 1572 ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಪೈಕಿ ಸುಮಾರು 830 ಶಿಕ್ಷಣ ಸಂಸ್ಥೆಗಳು ನಕಲಿ ಅಥವಾ ಕಾರ್ಯನಿರ್ವಹಿಸದೆ ಇರುವಂತಹವು.

►ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ವಿದ್ಯಾರ್ಥಿವೇತನವನ್ನು ಈ ನಕಲಿ ಸಂಸ್ಥೆಗಳು ಪಡೆದುಕೊಳ್ಳುತ್ತಿದ್ದವು.

► ಸ್ಕಾಲರ್ಶಿಪ್ ಗಳು ನಕಲಿ ಫಲಾನುಭವಿಗಳ ಪಾಲಾಗುತ್ತಿದ್ದವು.

► ಅಕ್ರಮವೆಸಗಿದ ಆರೋಪ ಎದುರಿಸುತ್ತಿರುವ 830 ಶಿಕ್ಷಣ ಸಂಸ್ಥೆಗಳಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಆದೇಶ ಹೊರಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X