Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ದೇಶದ ಜವಾಬ್ದಾರಿ ವಹಿಸಿಕೊಳ್ಳಲು...

‘ದೇಶದ ಜವಾಬ್ದಾರಿ ವಹಿಸಿಕೊಳ್ಳಲು ಸುಪ್ರಿಯಾ ಸುಳೆ ಸಿದ್ಧ’: ಶರದ್ ಪವಾರ್‌ ಗೆ ವಿಶ್ರಾಂತಿ ಪಡೆಯಲು ಮೋದಿ ಸಲಹೆ

NCP ವಿಲೀನದ ಊಹಾಪೋಹಗಳ ನಡುವೆಯೇ ಪ್ರಧಾನಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ5 Nov 2026 7:25 AM IST
share
‘ದೇಶದ ಜವಾಬ್ದಾರಿ ವಹಿಸಿಕೊಳ್ಳಲು ಸುಪ್ರಿಯಾ ಸುಳೆ ಸಿದ್ಧ’: ಶರದ್ ಪವಾರ್‌ ಗೆ ವಿಶ್ರಾಂತಿ ಪಡೆಯಲು ಮೋದಿ ಸಲಹೆ

ಹೊಸದಿಲ್ಲಿ: ಅನಾರೋಗ್ಯದಿಂದ ಬಳಲುತ್ತಿರುವ NCP (SP) ಮುಖ್ಯಸ್ಥ ಶರದ್ ಪವಾರ್ ಅವರಿಗೆ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಅವರ ಪುತ್ರಿ ಹಾಗೂ ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ದೇಶದ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧರಿದ್ದಾರೆ ಎಂದು ಪ್ರಧಾನಿ ಹೇಳಿರುವುದಾಗಿ ಪವಾರ್ ಅವರ ಆಪ್ತ ಸಹಾಯಕ ವಿಠ್ಠಲ್ ಮನಿಯಾರ್ ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ ಶರದ್ ಪವಾರ್ ಅವರಿಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಆತ್ಮೀಯತೆ ಮತ್ತು ಗೌರವದಿಂದ ಮಾತನಾಡಿದ ಪ್ರಧಾನಿ, ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಕೋರಿದ್ದಾರೆ ಎಂದು ಮನಿಯಾರ್ ಸುದ್ದಿಗಾರರಿಗೆ ತಿಳಿಸಿದರು.

'ಪವಾರ್ ಸಾಹೇಬರು ವಿಶ್ರಾಂತಿ ಪಡೆಯಲಿ. ಸುಪ್ರಿಯಾ ಈಗ ಸಿದ್ಧರಿದ್ದಾರೆ. ಅವರು ಮತ್ತು ಇತರರು ದೇಶದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು' ಎಂದು ಮನಿಯಾರ್ ವಿವರಿಸಿದರು.

ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕರೆ ಮಾಡಿದ್ದಕ್ಕಾಗಿ ಶರದ್ ಪವಾರ್ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ತಾವು ವಿಶ್ರಾಂತಿ ಪಡೆಯುತ್ತಿರುವುದಾಗಿಯೂ, ದೇಶದ ಬಗ್ಗೆ ಯಾವುದೇ ಚಿಂತೆಯಿಲ್ಲ ಎಂದೂ ತಿಳಿಸಿದ್ದಾರೆ ಎಂದು ಮನಿಯಾರ್ ಹೇಳಿದರು.

►ಹೆಚ್ಚಿನ ಪರೀಕ್ಷೆಗಳಿಗಾಗಿ ಪವಾರ್ ಮುಂಬೈ ಆಸ್ಪತ್ರೆಗೆ ದಾಖಲು

ಕೆಮ್ಮು ಮತ್ತು ಎದೆನೋವಿನ ಸಮಸ್ಯೆಯಿಂದಾಗಿ ಸೋಮವಾರ ಪುಣೆಯ ರೂಬಿ ಹಾಲ್ ಕ್ಲಿನಿಕ್ ಗೆ ದಾಖಲಾಗಿದ್ದ 85 ವರ್ಷದ ಶರದ್ ಪವಾರ್ ಅವರನ್ನು ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೆಲವೇ ಗಂಟೆಗಳಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು.

ಈ ಕುರಿತು ಅವರ ಪುತ್ರಿ ಹಾಗೂ ಸಂಸದೆ ಸುಪ್ರಿಯಾ ಸುಳೆ 'ಎಕ್ಸ್'ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

'ಹೆಚ್ಚಿನ ಪರೀಕ್ಷೆಗಳಿಗಾಗಿ ನಾವು ತಂದೆಯವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸುತ್ತಿದ್ದೇವೆ. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು' ಎಂದು ಅವರು ಬರೆದುಕೊಂಡಿದ್ದಾರೆ.

ಇದಕ್ಕೂ ಮೊದಲು, ತಂದೆಯ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದು ತಿಳಿಸಿದ್ದ ಸುಪ್ರಿಯಾ ಸುಳೆ, ರೂಬಿ ಹಾಲ್ ಕ್ಲಿನಿಕ್ ನ ವೈದ್ಯರು ಮತ್ತು ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದರು.

'ತಂದೆಯವರು ಈಗ ಸಾಕಷ್ಟು ಚೇತರಿಸಿಕೊಂಡಿದ್ದಾರೆ. ನಾವು ಮುಂಬೈಗೆ ಹೊರಟಿದ್ದೇವೆ. ಅವರನ್ನು ಅತ್ಯುತ್ತಮವಾಗಿ ನೋಡಿಕೊಂಡ ರೂಬಿ ಹಾಲ್ ಕ್ಲಿನಿಕ್ನ ಸಂಪೂರ್ಣ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳು. ಶುಭ ಹಾರೈಸಿದ ಎಲ್ಲರಿಗೂ ಕೃತಜ್ಞತೆಗಳು' ಎಂದು ಅವರು ಪೋಸ್ಟ್ ಮಾಡಿದ್ದರು.

ರೂಬಿ ಹಾಲ್ ಕ್ಲಿನಿಕ್ನ ಮುಖ್ಯ ಹೃದ್ರೋಗ ತಜ್ಞರು ಹಾಗೂ ಅಧ್ಯಕ್ಷ ಮತ್ತು ವ್ಯವಸ್ಥಾಪಕ ಟ್ರಸ್ಟಿ ಡಾ. ಪರ್ವೇಜ್ ಕೆ. ಗ್ರಾಂಟ್ ಅವರ ಪ್ರಕಾರ, ಎದೆಯ ಭಾಗದಲ್ಲಿ ನೋವು (ಪ್ಲೂರಿಟಿಕ್ ಪೇನ್) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಮಾನ್ಯ ತಪಾಸಣೆ ಮತ್ತು ವೈದ್ಯಕೀಯ ನಿಗಾಕ್ಕಾಗಿ ಪವಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೋಮವಾರ ಪವಾರ್ ಆಸ್ಪತ್ರೆಗೆ ದಾಖಲಾದ ಬಳಿಕ ಸುಪ್ರಿಯಾ ಸುಳೆ ಅವರು ತಂದೆಯ ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದರು.

►NCP ವಿಲೀನದ ಚರ್ಚೆಗಳ ನಡುವೆಯೇ ಮೋದಿ ಹೇಳಿಕೆ

ಶರದ್ ಪವಾರ್ ನೇತೃತ್ವದ NCP (SP) ಮತ್ತು ಅಜಿತ್ ಪವಾರ್ ನೇತೃತ್ವದ NCP ಬಣಗಳು ಮತ್ತೆ ಒಂದಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.

ಅಜಿತ್ ಪವಾರ್ ಅವರ ಬಂಡಾಯದ ಬಳಿಕ 2023ರಲ್ಲಿ NCP ವಿಭಜನೆಯಾಗಿತ್ತು. ಎರಡೂ ಬಣಗಳು ಮತ್ತೆ ವಿಲೀನಗೊಳ್ಳಬಹುದು ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ನಡೆದಿದ್ದವು.

ಆದರೆ, ಸೆಪ್ಟೆಂಬರ್ನಲ್ಲಿ ಶರದ್ ಪವಾರ್ ಅವರು ತಮ್ಮ ಬಣವು ಬೇರೆ ಯಾವುದೇ ಪಕ್ಷದೊಂದಿಗೆ ವಿಲೀನಗೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಈ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಎರಡೂ ಬಣಗಳ ನಾಯಕರು ಕೂಡ ಈ ಹಿಂದೆ ವಿಲೀನದ ಸಾಧ್ಯತೆಯನ್ನು ನಿರಾಕರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X