ಹೈದರಾಬಾದ್ | ಚಾರ್ಮಿನಾರ್ ಸಮೀಪದ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ: ಕನಿಷ್ಠ 17 ಮಂದಿ ಮೃತ್ಯು

Photo credit: NDTV
ಹೈದರಾಬಾದ್: ತೆಲಂಗಾಣದ ಚಾರ್ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ರವಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು Times of India ವರದಿ ಮಾಡಿದೆ.
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶೀಘ್ರದಲ್ಲೇ ಮೂರು ಅಂತಸ್ತಿನ ಕಟ್ಟಡದ ಮೇಲೆ ಬೆಂಕಿ ವ್ಯಾಪಿಸಿದೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಈ ಕುರಿತು ಪ್ರತಿಕ್ರಿಯಿಸಿ, ಬೆಳಿಗ್ಗೆ 6.30 ರ ಸುಮಾರಿಗೆ ಘಟನೆ ಬಗ್ಗೆ ನನಗೆ ಮಾಹಿತಿ ಬಂದಿದೆ. ಇಂತಹ ಘಟನೆಗಳು ತುಂಬಾ ದುಃಖಕರ. ನಾನು ಕೇಂದ್ರ ಸರಕಾರ ಮತ್ತು ಪ್ರಧಾನಿಯೊಂದಿಗೆ ಈ ಕುರಿತು ಮಾತನಾಡುತ್ತೇನೆ ಎಂದು ಹೇಳಿದರು.
Next Story





