ಇಂದೋರ್ನಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡದ ಇಬ್ಬರು ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ಆರೋಪ: ಓರ್ವನ ಬಂಧನ

Photo credit: X
ಇಂದೋರ್ : ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರನ್ನು ಮಧ್ಯಪ್ರದೇಶದ ಇಂದೋರ್ನಲ್ಲಿ ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಬೆಳಿಗ್ಗೆ ಖಜ್ರಾನಾ ರಸ್ತೆ ಪ್ರದೇಶದ ರಾಡಿಸನ್ ಬ್ಲೂ ಹೋಟೆಲ್ನಿಂದ ಇಬ್ಬರು ಕ್ರಿಕೆಟಿಗರು ಕೆಫೆಯೊಂದಕ್ಕೆ ಹೋಗುತ್ತಿದ್ದಾಗ ಘಟನೆ ನಡೆದಿದೆ.
ಸಬ್ ಇನ್ಸ್ಪೆಕ್ಟರ್ ನಿಧಿ ರಘುವಂಶಿ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇಬ್ಬರು ಕ್ರಿಕೆಟಿಗರು ತಾವು ತಂಗಿದ್ದ ಹೋಟೆಲ್ನಿಂದ ಕೆಫೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ಅವರನ್ನು ಹಿಂಬಾಲಿಸಿದ್ದಲ್ಲದೆ ಅನುಚಿತವಾಗಿ ವರ್ತಿಸಿ ಪರಾರಿಯಾಗಿದ್ದಾನೆ. ಬೈಕ್ ನಂಬರ್ ಆಧರಿಸಿ ಆರೋಪಿ ಅಕಿಲ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
Next Story





